ಅಥವಾ
(3) (1) (1) (0) (0) (0) (0) (0) (0) (0) (0) (0) (0) (0) ಅಂ (2) ಅಃ (2) (0) (0) (2) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (0) (0) (0) (1) (0) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಂಗದಾಶ್ರಯವ ಕಳೆದು, ಲಿಂಗದಾಶ್ರಯವ ಮಾಡಿದ ಗುರುವೆ ಶರಣು, ಶ್ರೀಗುರುಲಿಂಗವೆ ಶರಣು, ಪರಮಸುಖವ ತೋರಿದೆಯಾಗಿ. ಮಹಾಘನ ಸೋಮೇಶ್ವರನ ಸಾಹಿತ್ಯವ ಮಾಡಿ ನಿಜ ನಿವಾಸದಲ್ಲಿರಿಸಿದೆಯಾಗಿ ಗುರುವೆ ಶರಣು.
--------------
ಅಜಗಣ್ಣ ತಂದೆ
ಅಷ್ಟತನುಮೂರ್ತಿ ಶಿವನೆಂಬ ಕಷ್ಟಜೀವಿಗಳನೇನೆಂಬೆನಯ್ಯಾ? ಯುಗಜುಗಂಗಳು ಪ್ರಳಯವಹಲ್ಲಿ ಧರೆ ಜಲದಲ್ಲಿ ಅಡಗಿತ್ತು, ಜಲ ಅಗ್ನಿಯಲ್ಲಿ ಅಡಗಿತ್ತು, ಅಗ್ನಿ ವಾಯುವಿನಲ್ಲಿ ಅಡಗಿತ್ತು, ವಾಯು ಆಕಾಶದಲ್ಲಿ ಅಡಗಿತ್ತು, ಆಕಾಶ ಅತೀತನಲ್ಲಿ ಅಡಗಿತ್ತು, ಅತೀತ ಆದಿಯೊಳಗಡಗಿತ್ತು, ಆದಿ ಅನಾದಿಯೊಳಡಗಿತ್ತು, ಅನಾದಿ ನಿಜದೊಳಡಗಿತ್ತು. ಇಂತೀ ಅಷ್ಟತನು ಒಂದರೊಳಗೊಂದಳಿವಲ್ಲಿ, ಒಂದರೊಳಗೊಂದು ಹುಟ್ಟುವಲ್ಲಿ, ಎಂದಳಿದನೆಂದು, ಹುಟ್ಟಿದನೆಂದು ಬಲ್ಲವರುಂಟೆ? ಹುಟ್ಟಿದನಳಿದವನೆಂಬ ಶಬ್ದವ ನುಡಿಯಲಾಗದು. ಇದು ಕಾರಣ, ನಮ್ಮ ಮಹಾಘನ ಸೋಮೇಶ್ವರನು ಮಾಡಿದಡಾದವು, ಬೇಡಾ ಎಂದಡೆ ಮಾದವು.
--------------
ಅಜಗಣ್ಣ ತಂದೆ
ಅಂತರಂಗದಲ್ಲಿ ಆಯತವನರಿದವಂಗೆ, ಬಹಿರಂಗದಲ್ಲಿ ಹಮ್ಮೆಲ್ಲಿಯದಯ್ಯ. ಅಂತರಂಗದಲ್ಲಿ ಅನುಮಿಷನಾಗಿ ನಿರಂತರ ಲಿಂಗಸುಖಿ ನೋಡಯ್ಯಾ. ಸರ್ವೇಂದ್ರಿಯ ಸಮ್ಮತವಾಯಿತ್ತು ಮಹಾಘನ ಸೋಮೇಶ್ವರ ಮುಂತಾಗಿ.
--------------
ಅಜಗಣ್ಣ ತಂದೆ