ಅಥವಾ
(2) (0) (0) (0) (1) (0) (0) (0) (0) (0) (0) (0) (0) (0) ಅಂ (0) ಅಃ (0) (3) (0) (1) (0) (0) (0) (0) (0) (0) (0) (0) (0) (0) (0) (0) (1) (0) (0) (0) (1) (0) (0) (0) (1) (0) (0) (0) (0) (0) (2) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕುರಿ ಕೋಳಿ ಕಿರಿಮೀನು ತಿಂಬವರಿಗೆಲ್ಲ ಕುಲಜ ಕುಲಜರೆಂದೆಂಬರು. ಶಿವಗೆ ಪಂಚಾಮೃತವ ಕರೆವ ಪಶುವ ತಿಂಬ ಮಾದಿಗ ಕೀಳುಜಾತಿಯೆಂಬರು. ಅವರೆಂತು ಕೀಳುಜಾತಿಯಾದರು ? ಜಾತಿಗಳು ನೀವೇಕೆ ಕೀಳಾಗಿರೊ ? ಬ್ರಾಹ್ಮಣನುಂಡುದು ಪುಲ್ಲಿಗೆ ಶೋಭಿತವಾಗಿ ನಾಯಿ ನೆಕ್ಕಿ ಹೋಯಿತು. ಮಾದಿಗರುಂಡುದು ಪುಲ್ಲಿಗೆ ಬ್ರಾಹ್ಮಣಗೆ ಶೋಭಿತವಾಯಿತು. ಅದೆಂತೆಂದಡೆ : ಸಿದ್ದಲಿಕೆಯಾಯಿತು, ಸಗ್ಗಳೆಯಾಯಿತು. ಸಿದ್ದಲಿಕೆಯ ತುಪ್ಪವನು, ಸಗ್ಗಳೆಯ ನೀರನು ಶುದ್ಧವೆಂದು ಕುಡಿವ ಬುದ್ಧಿಗೇಡಿ ವಿಪ್ರರಿಗೆ ನಾಯಕನರಕ ತಪ್ಪದಯ್ಯಾ. ಉರಿಲಿಂಗಪೆದ್ದಿಗಳರಸು ಒಲ್ಲನವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ; ಸತ್ಯಶುದ್ಧವಿಲ್ಲದುದು ಕಾಯಕವಲ್ಲ; ಆಸೆಯೆಂಬುದು ಭವದ ಬೀಜ; ನಿರಾಸೆಯೆಂಬುದು ನಿತ್ಯಮುಕ್ತಿ. ಉರಿಲಿಂಗಪೆದ್ದಿಗಳರಸನಲ್ಲಿ ಸದರವಲ್ಲ ಕಾಣವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಕೃತಯುಗ ಮೂವತ್ತೆರಡುಲಕ್ಷವರುಷದಲ್ಲಿ ಹೋಮವನಿಕ್ಕುವಾಗ ಕುಂಜರನೆಂಬ ಆನೆಯ ಕೊಂದು ಹೋಮವನಿಕ್ಕಿದರು ಬ್ರಾಹ್ಮಣರು. ತ್ರೇತಾಯುಗ ಹದಿನಾರುಲಕ್ಷವರುಷದಲ್ಲಿ ಬ್ರಾಹ್ಮಣರು ಹೋಮವನಿಕ್ಕುವಾಗ ಮಹಿಷನೆಂಬ ಕರಿ ಎಮ್ಮೆಯ ಮಗನ ಕೊಂದು ಹೋಮವನಿಕ್ಕಿದರು. ದ್ವಾಪರಯುಗ ಎಂಟುಲಕ್ಷವರುಷದಲ್ಲಿ ಹೋಮವನಿಕ್ಕುವಾಗ ಅಶ್ವನೆಂಬ ಕುದುರೆಯ ಕೊಂದು ಹೋಮವನಿಕ್ಕಿದರು ಬ್ರಾಹ್ಮಣರು. ಕಲಿಯುಗ ನಾಲ್ಕು ಲಕ್ಷವರುಷದಲ್ಲಿ ಹೋಮವನಿಕ್ಕುವಾಗ ಜಾತಿಯಾಡಿನ ಮಗ ಹೋತನಕೊಂದು ಹೋಮವನಿಕ್ಕಿದರು ಬ್ರಾಹ್ಮಣರು. "ಅಣೋರಣೀಯಾನ್ ಮಹತೋ ಮಹೀಯಾನ್ " ಎಂದುದಾಗಿ, ಶಿವಭಕ್ತ ಹೊತ್ತಾರೆಯೆದ್ದು ಗುರುಲಿಂಗಜಂಗಮಕ್ಕೆ ಶರಣೆನ್ನದೆ ಮುನ್ನ ಒಂಟಿಬ್ರಾಹ್ಮಣನ ಕಂಡು ಶರಣಾರ್ಥಿ ಎಂದಡೆ ಎಂಬತ್ತುನಾಲ್ಕು ಲಕ್ಷ ಯೋನಿಯಲ್ಲಿ ಹಂದಿಯ ಬಸುರಲ್ಲಿ ಬಪ್ಪುದು ತಪ್ಪದು ಕಾಣಾ. ಉರಿಲಿಂಗಪೆದ್ದಿಗಳರಸ ಒಲ್ಲನವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ