ಘನದ ವೇದಿಸಿದ ಮನ, ಮನವ ವೇದಿಸಿದ ಇಂದ್ರಿಯಂಗಳು,
ಇಂದ್ರಿಯಂಗಳ ವೇದಿಸಿದ ತನು, ತನುವ ವೇದಿಸಿದ ಪ್ರಸಾದ,
ಪ್ರಸಾದವ ವೇದಿಸಿದ ಪರಿಣಾಮ, ಪರಿಣಾಮವ ವೇದಿಸಿದ ತೃಪ್ತಿ,
ತೃಪ್ತಿಯ ವೇದಿಸಿದ ಇಷ್ಟಲಿಂಗ, ಇಷ್ಟಲಿಂಗವ ವೇದಿಸಿದ ಜ್ಞಾನ,
ಜ್ಞಾನವ ವೇದಿಸಿದ ನಿರ್ಮಲ ಶಿವಕ್ರಿಯೆ,
ನಿರ್ಮಲ ಶಿವಕ್ರಿಯೆ[ಯ] ವೇದಿಸಿದ ಶರಣಂಗೆ
ಇನ್ನು ವೇದ್ಯರುಂಟೆ, ಮಹಾಲಿಂಗ ಕಲ್ಲೇಶ್ವರಾ ?