ಅಂತಾಯಿತ್ತಿಂತಾಯಿತ್ತೆಂತಾಯಿತ್ತೆನಬೇಡ,
ಅನಂತನಿಂತಾತನೆಂದರಿಯಾ ಬಿಡಾಡಿ.
ಕರೆದಡೆ ಓ ಎಂಬುದು ನಾದವೊ ಬಿಂದುವೊ ಪ್ರಾಣವೊ
ಇದಾವುದು ? ಬಲ್ಲಡೆ ನೀ ಹೇಳಾ, ಬಿಡಾಡಿ.
ನಾಲ್ಕು ವೇದ, ಹದಿನಾರು ಶಾಸ್ತ್ರ, ಹದಿನೆಂಟು ಪುರಾಣ, ಇಪ್ಪತ್ತೆಂಟಾಗಮ
ಇದಪ್ರತಿ ಬಿಡಾಡಿ.
ಶಬ್ದವೆ ಬ್ರಹ್ಮ, ಶಬ್ದವೆ ಸಿದ್ಧ, ಶಬ್ದವೆ ಶುದ್ಧ ಕಾಣಿರೆ, ಬಿಡಾಡಿ!