ಅಥವಾ
(3) (3) (0) (0) (0) (0) (0) (0) (0) (0) (1) (1) (0) (0) ಅಂ (1) ಅಃ (1) (3) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (3) (0) (3) (2) (3) (0) (0) (0) (0) (0) (0) (0) (2) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಆಸೆಯೆಂಬುದು, ಅರಸಿಂಗಲ್ಲದೆ, ಶಿವಭಕ್ತರಿಗುಂಟೆ ಅಯ್ಯಾ ? ರೋಷವೆಂಬುದು ಯಮದೂತರಿಗಲ್ಲದೆ, ಅಜಾತರಿಗುಂಟೆ ಅಯ್ಯಾ ? ಈಸಕ್ಕಿಯಾಸೆ ನಿಮಗೇಕೆ ? ಈಶ್ವರನೊಪ್ಪ. ಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ದೂರ ಮಾರಯ್ಯ.
--------------
ಆಯ್ದಕ್ಕಿ ಲಕ್ಕಮ್ಮ
ಆವ ಬೀಜವು ಬೀಳುವಲ್ಲಿ ಮೊಳೆ ಮುಖ ಹಿಂಚು ಮುಂಚುಂಟೆ ? ನೀ ಮರೆದಲ್ಲಿ ನಾನರಿದಲ್ಲಿ ಬೇರೊಂದೊಡಲುಂಟೆ ? ಮೂಲ ನಷ್ಟವಾದಲ್ಲಿ ಅಂಕುರ ನಿಂದಿತ್ತು. ಕೂಟಕ್ಕೆ ಸತಿಪತಿ ಎಂಬ ನಾಮವಲ್ಲದೆ ಅರಿವಿಂಗೆ ಬೇರೊಂದೊಡಲುಂಟೆ ? ಬೇರೊಂದಡಿಯಿಡದಿರು, ಮಾರಯ್ಯಪ್ರಿಯ ಅಮಲೇಶ್ವರಲಿಂಗವನರಿಯಬಲ್ಲಡೆ.
--------------
ಆಯ್ದಕ್ಕಿ ಲಕ್ಕಮ್ಮ
ಆಯ್ದಿಹೆನೆಂಬ ಕಾಯಕದ ಅರಿಕೆ ಹಿಂಗಿತೆ ? ನಾ ಮಾಡಿಹೆನೆಂಬ ತವಕ ಹಿಂಗಿತೆ ? ಉಭಯದ ಕೈಕೂಲಿ ಹಿಂಗಿ, ಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ಅಲಸಿಕೆಯಾಯಿತು.
--------------
ಆಯ್ದಕ್ಕಿ ಲಕ್ಕಮ್ಮ