ಅಥವಾ
(3) (3) (0) (0) (0) (0) (0) (0) (0) (0) (1) (1) (0) (0) ಅಂ (1) ಅಃ (1) (3) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (3) (0) (3) (2) (3) (0) (0) (0) (0) (0) (0) (0) (2) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕೈದಕೊಡುವರಲ್ಲದೆ ಕಲಿತನವ ಕೊಡುವರುಂಟೆ ಮಾರಯ್ಯಾ ? ಹೆಣ್ಣಕೊಡುವರಲ್ಲದೆ ಕೂಟಕ್ಕೊಳಗಾದವರುಂಟೆ ಮಾರಯ್ಯಾ ? ಕಳುವಚೋರಂಗೆ ಬಡವರೆಂದು ದಯವುಂಟೆ ಮಾರಯ್ಯಾ ? ಮನವನೊರೆದು ಭಕ್ತಿಯನೋಡಿಹೆನೆಂಬವಂಗೆ ಎಮ್ಮಲ್ಲಿ ಗುಣವ ಸಂಪಾದಿಸಲಿಲ್ಲ ಮಾರಯ್ಯಾ. ಶೂಲವನೇರಿ ಸಂದಲ್ಲಿ ಮತ್ತಿನ್ನು ಸಾವಿಂಗೆ ಹಂಗುಪಡಲೇಕೆ ?ಮಾರಯ್ಯಪ್ರಿಯ ಅಮಲೇಶ್ವರಲಿಂಗಾ ನೀನೆ ಬಲ್ಲೆ.
--------------
ಆಯ್ದಕ್ಕಿ ಲಕ್ಕಮ್ಮ
ಕಾಯಕ ನಿಂದಿತ್ತು ಹೋಗಯ್ಯಾ ಎನ್ನಾಳ್ದನೆ. ಭಾವಶುದ್ಧವಾಗಿ ಮಹಾಶರಣರ ತಿಪ್ಪೆಯ ತಪ್ಪಲ ಅಕ್ಕಿಯ ತಂದು ನಿಶ್ಚೈಸಿ ಮಾಡಬೇಕು ಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ, ಬೇಗ ಹೋಗು ಮಾರಯ್ಯಾ.
--------------
ಆಯ್ದಕ್ಕಿ ಲಕ್ಕಮ್ಮ
ಕಾಯವಳಿದ ಠಾವಿನಲ್ಲಿ ಜೀವದ ಎಡೆಯಾಟ ಉಂಟೆ ? ಭಾವವಿಲ್ಲದ ಭಕ್ತಿ ಹೋಯಿತ್ತು, ಮಾರಯ್ಯಪ್ರಿಯ ಅಮಲೇಶ್ವರಲಿಂಗವ ಮುಟ್ಟದೆ.
--------------
ಆಯ್ದಕ್ಕಿ ಲಕ್ಕಮ್ಮ