ಅಥವಾ
(3) (3) (0) (0) (0) (0) (0) (0) (0) (0) (1) (1) (0) (0) ಅಂ (1) ಅಃ (1) (3) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (3) (0) (3) (2) (3) (0) (0) (0) (0) (0) (0) (0) (2) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಮನ ಶುದ್ಧವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ ಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿ ಸದ್ಭಕ್ತಂಗೆ ಎತ್ತ ನೋಡಿದಡತ್ತ ಲಕ್ಷ್ಮಿ ತಾನಾಗಿಪ್ಪಳು ಮಾರಯ್ಯಪ್ರಿಯ ಅಮಲೇಶ್ವರಲಿಂಗದ ಸೇವೆಯುಳ್ಳನ್ನಕ್ಕರ.
--------------
ಆಯ್ದಕ್ಕಿ ಲಕ್ಕಮ್ಮ
ಮಾಡಿ ನೀಡಿ ಹೋದೆನೆಂಬಾಗ ಕೈಲಾಸವೇನು ಕೈಕೂಲಿಯೆ ? ಮುಂದೊಂದ ಕಲ್ಪಿಸದೆ, ಹಿಂದೊಂದ ಭಾವಿಸದೆ ಸಲೆಸಂದಿದ್ದಾಗವೆ ಮಾರಯ್ಯಪ್ರಿಯ ಅಮಲೇಶ್ವರಲಿಂಗವಿದ್ದ ಠಾವೆ ಕೈಲಾಸ.
--------------
ಆಯ್ದಕ್ಕಿ ಲಕ್ಕಮ್ಮ
ಮಾಡುವ ಮಾಟವುಳ್ಳನ್ನಕ್ಕ ಬೇರೊಂದು ಪದವನರಸಲೇತಕ್ಕೆ ? ದಾಸೋಹವೆಂಬ ಸೇವೆಯ ಬಿಟ್ಟು ನೀಸಲಾರದೆ ಕೈಲಾಸವೆಂಬ ಆಸೆ ಬೇಡ. ಮಾರಯ್ಯಪ್ರಿಯ ಅಮಲೇಶ್ವರಲಿಂಗವಿದ್ದ ಠಾವೆ ಕೈಲಾಸ.
--------------
ಆಯ್ದಕ್ಕಿ ಲಕ್ಕಮ್ಮ