ಊ ಪದದಿಂದ ಪ್ರಾರಂಭವಾಗುವ ವಚನಗಳು:
ಊರಿಗೆ ಹೋಹಾತ ದಾರಿಯ ಭಯಂಗಳನರಿದುಆರೈಕೆಯಿಂದ ಹೋಗಬೇಕು.ಕುರಿತ ಕುರುಹ ಹಿಡಿವನ್ನಕ್ಕ ಭೇದ ವಿವರವ ಸೋಧಿಸಬೇಕು.ಸೋಧಿಸಿ ಸ್ವಸ್ಥವಾಗಿ ನಿಜನಿಂದಲ್ಲಿಉಭಯದ ಕುರುಹು ಅನಾದಿಯಲ್ಲಿ ಅಡಗಿತ್ತು.ಅಡಗಿದ ಮತ್ತೆ ವೀರಶೂರ ರಾಮೇಶ್ವರಲಿಂಗವ ಕುರುಹಿಡಲಿಲ್ಲ.