ಓ ಪದದಿಂದ ಪ್ರಾರಂಭವಾಗುವ ವಚನಗಳು:
ಓಂಕಾರದಲ್ಲಿ ಉಗ್ಘಡಿಸುತ್ತಿರಲಾಗಿ,ಕೆಲಬಲದವರು ಓಡರಿನ್ನೆಂತೊ ?ಅದು ಎನ್ನಾಜ್ಞೆಯಲ್ಲ; ಎನ್ನೊಡೆಯನ ಹಂದೆತನ.ಸುಮ್ಮನಿರ್ದಡೆ ಎನ್ನ ಕೇಡು, ಹೇಳಿದಡೆ ಒಡೆಯಂಗೆ ಹಾನಿ.ಕೂಡಲಸಂಗಮದೇವರಲ್ಲಿ ಬಸವಣ್ಣಾ ಹಿಂಗದಿರು ನಿನ್ನ ಭೃತ್ಯನೆಂದು.