ಅಥವಾ
(0) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (4) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (1) (0) (0) (0) (1) (1) (0) (0) (0) (1) (0) (0) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ.
--------------
ಹೊಡೆಹುಲ್ಲ ಬಂಕಣ್ಣ
ಕೂಲಿ ಕೃಷಿ ಕಾಯಕಂಗಳಿಂದ ಮಾಡುವ ಗುರುಲಿಂಗಜಂಗಮದ ಸೇವೆ, ಅದಾವ ತೆರನೆಂದರಿದು, ಭಾವ ಶುದ್ಧವಾಗಿ ಮಾಡುವ ಸುಕಾಯಕವಂತನಿರವು ಎಂತುಟೆಂದಡೆ : ಮಾಡಿಕೊಂಡ ಕೃತ್ಯದಲ್ಲಿ ಆರಿಗೂ ಒಡಲೆಡೆಗೂಡದೆ, ಕೊಂಡುದು ಪ್ರಸಾದ, ನಿಂದುದು ಸಯಿದಾನವೆನ್ನದೆ, ಉಭಯ ಪ್ರತಿಪಾಕದಲ್ಲಿ ಆದ ಸಯಿದಾನಕ್ಕೆ ಸಂಕಲ್ಪವಳಿದು, ಉಭಯಭಾಂಡವೂ ಸರಿಯೆಂದ ಪ್ರಸಾದಿಗೆ ಪ್ರಸಾದವ ಎಡೆಮಾಡಬೇಕು. ಅದು ನಿರ್ಮಾಲ್ಯವಲ್ಲ, ಅದು ಲಿಂಗಾಂಗ, ಕುಂಭದಲ್ಲಿ ನಿಂದಪ್ರಸಾದ. ಇದರ ಸಂದೇಹವ ಹರಿದು ಕೊಂಬ ನಿರಂಗಪ್ರಸಾದಿಗೆ ಕುಂಭೇಶ್ವರಲಿಂಗದಲ್ಲಿದ್ದ ಜಗನ್ನಾಥ ಸಾಕ್ಷಿಯಾಗಿ ನಮೋ ನಮೋ ಎನುತಿದ್ದೆನು.
--------------
ಹೊಡೆಹುಲ್ಲ ಬಂಕಣ್ಣ
ಕಾಷ್ಟವಗ್ನಿಯೊಳಗಿಡಲಿಕ್ಕಾಗಿ, ಆ ಕಾಷ್ಟದೊಳಗಿದ್ದಗ್ನಿ ನಾನಿದ್ದೇನೆ, ನೀ ಬೇಡಾ ಎಂದಿತ್ತೆ ? ತಾನಡಗಿ ಇದಿರಿಟ್ಟ ಅಗ್ನಿಗೆ ಒಡಲಾಯಿತ್ತು. ಇಂತು ಇದ್ದ ಇದಿರಿಂಗೆ ಒಡಲೆಡೆಗೊಡದ ಅಗಮ್ಯಂಗೆ ಪಡಿಪುಚ್ಚವಿಲ್ಲ, ಕುಂಭೇಶ್ವರಲಿಂಗದಲ್ಲಿದ್ದ ಜಗನ್ನಾಥನನರಿದವಂಗೆ.
--------------
ಹೊಡೆಹುಲ್ಲ ಬಂಕಣ್ಣ
ಕಾಯ ಪ್ರಸಾದವಾದಲ್ಲಿ ಗುರುಪ್ರಸಾದವನೊಲ್ಲ. ಭಾವ ಪ್ರಸಾದವಾದಲ್ಲಿ ಲಿಂಗಪ್ರಸಾದವನೊಲ್ಲ. ಜ್ಞಾನ ಪ್ರಸಾದವಾದಲ್ಲಿ ಜಂಗಮಪ್ರಸಾದವನೊಲ್ಲ. ಇಂತೀ ತ್ರಿವಿಧ ಪ್ರಸಾದವ ಬಲ್ಲವ, ಮಹಾಪ್ರಸಾದವ ಕೊಂಬ. ಗುರುವಿಂಗೆ ತನುವಳಿದು, ಲಿಂಗಕ್ಕೆ ಮನವಳಿದು, ಜಂಗನಕ್ಕೆ ತ್ರಿವಿಧಮಲವಳಿದು, ಅರಿವಿಂಗೆ ಕುರುಹಳಿದು, ಸ್ವಯವೆ ತಾನಾದ, ಇಂದಿರೆಡೆಗೆ[ಟ್ಟ] ಐಕ್ಯಪ್ರಸಾದಿಗೆ ಕುಂಭೇಶ್ವರಲಿಂಗದಲ್ಲಿ ಜಗನ್ನಾಥ ಸಾಕ್ಷಿಯಾಗಿ ನಮೋ ನಮೋ ಎನುತಿದ್ದೆನು.
--------------
ಹೊಡೆಹುಲ್ಲ ಬಂಕಣ್ಣ