ಧ ಪದದಿಂದ ಪ್ರಾರಂಭವಾಗುವ ವಚನಗಳು:
ಧರೆಯ ಮೇಲೆ ಬಿದ್ದ ಬೀಜ,ಧರೆಯಲ್ಲಿಯೆ ಅಳಿದು, ಆಕಾಶದಲ್ಲಿ ಫಲವಾಯಿತ್ತು.ಆ ಫಲವ ಬಯಲ ಕಣದಲ್ಲಿ ಒಕ್ಕಿ, ಮನದ ಹಗಹದಲ್ಲಿ ತುಂಬಿ,ಬಾಯ ಹಗಹದಲ್ಲಿ ತೆಗೆದು, ಕಣ್ಣಿನ ಕೊಳಗದಲ್ಲಿ ಅಳೆವುತ್ತಿರಲಾಗಿ,ಖಂಡುಗವೆಂಬುದಕ್ಕೆ ಮೊದಲೆ ಕೊರಳಡಗಿತ್ತು.ಕುಂಭೇಶ್ವರಲಿಂಗದಲ್ಲಿದ್ದ ಜಗನ್ನಾಥನರಿಕೆಯಾಗಿ.