ಅಥವಾ
(0) (0) (0) (0) (0) (0) (0) (0) (2) (0) (0) (0) (0) (0) ಅಂ (0) ಅಃ (0) (2) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಎರಳೆ ಯತಿಯಂತೆ, ಕಾಕ ಪಿಕದಂತಿರಬೇಡವೆ ? ತಿಟ್ಟನೆ ತಿರುಗಿ, ತೊಟ್ಟನೆ ತೊಳಲಿ ಬಳಲುವರ ಕಳ ಹೇಸಿಕೆಯ ನೋಡಾ! ಇರುಳು ಹಗಲೆನ್ನದೆ ತಿರುಗುವವರ ಕಂಡು ಹೇಸಿದೆ. ಅರಿದಡೆ ಶರಣ, ಮರೆದಡೆ ಮಾನವ. ಸತ್ತ ಕಸನ ಹೊತ್ತುಕೊಂಡು ಊರೂರಿಗೆ ಮಾರುವ ಕಾಶಾಂಬರಧಾರಿಗಳನೊಲ್ಲ, ನಿಜಗುರು ಶಂಕರದೇವ.
--------------
ಅಂಗಸೋಂಕಿನ ಲಿಂಗತಂದೆ
ಎನ್ನ ಕಾಯಕ್ಕೆ ಗುರುವಾದನಯ್ಯಾ ಬಸವಣ್ಣನು. ಎನ್ನ ಜೀವಕ್ಕೆ ಲಿಂಗವಾದನಯ್ಯಾ ಚೆನ್ನಬಸವಣ್ಣನು. ಎನ್ನ ಪ್ರಾಣಕ್ಕೆ ಪ್ರಸಾದವಾದನಯ್ಯಾ ಮರುಳಶಂಕರದೇವರು. ಎನ್ನ ಜ್ಞಾನಕ್ಕೆ ಜಂಗಮವಾದನಯ್ಯಾ ಪ್ರಭುದೇವರು. ಇಂತಿವರ ಕರುಣದಿಂದಲಾನು ಬದುಕಿದೆನಯ್ಯಾ, ನಿಜಗುರು ಶಂಕರದೇವಾ.
--------------
ಅಂಗಸೋಂಕಿನ ಲಿಂಗತಂದೆ