ಅಥವಾ
(11) (7) (0) (0) (1) (0) (0) (0) (6) (2) (0) (4) (0) (0) ಅಂ (1) ಅಃ (1) (10) (4) (2) (0) (0) (4) (0) (3) (0) (0) (0) (0) (0) (0) (0) (14) (0) (4) (3) (10) (5) (0) (5) (10) (8) (0) (0) (0) (7) (15) (0) (0) (13) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಧೂಳುಪಾವಡವಾದಲ್ಲಿ ಆವ ನೀರನು ಹಾಯಬಹುದು. ಕಂಠಪಾವಡದಲ್ಲಿ ಉರದಿಂದ ಮೀರಿ ಹಾಯಲಾಗದು. ಸರ್ವಾಂಗಪಾವಡದಲ್ಲಿ ಹೊಳೆ ತಟಾಕ ಮಿಕ್ಕಾದ ಬಹುಜಲಂಗಳ ಮೆಟ್ಟಲಾಗದು. ಅದೆಂತೆಂದಡೆ ಆ ಲಿಂಗವೆಲ್ಲವು ವ್ರತಾಚಾರ ಲಿಂಗವಾದ ಕಾರಣ. ತಮ್ಮ ಲಿಂಗದ ಮಜ್ಜನದ ಅಗ್ಗಣಿಯಲ್ಲದೆ ತಮ್ಮಂಗವ ಮುಟ್ಟಲಾಗದು. ಇಂತೀ ಇವು ತಾವು ಕೊಂಡ ವ್ರತದಂಗದ ಭೇದವಲ್ಲದೆ ನಾನೊಂದು ನುಡಿದುದಿಲ್ಲ. ಇದಕ್ಕೆ ನಿಮ್ಮ ಭಾವವೆ ಸಾಕ್ಷಿ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ವ್ರತದಂಗದ ಭೇದ.
--------------
ಅಕ್ಕಮ್ಮ
ಧನಶೀಲ ಮನಶೀಲ ತನುಶೀಲ ಸರ್ವಮಯ ದೃಕ್ಕಿಂಗೆ ಕಾಂಬುದೆಲ್ಲವು ಶೀಲ. ಇಂತೀ ವ್ರತಸಂಪದವೆಲ್ಲವು ಅದಾರ ಕುರಿತು ಮಾಡುವ ನೇಮ ಎಂಬುದ ತಾನರಿಯಬೇಕು. ಗುರುವಿಂಗೆ ತನುವನರ್ಪಿಸಿ, ಲಿಂಗಕ್ಕೆ ಮನವನರ್ಪಿಸಿ, ಜಂಗಮಕ್ಕೆ ಧನವನರ್ಪಿಸಿ, ತ್ರಿವಿಧಕ್ಕೆ ತ್ರಿವಿಧವ ಕೊಟ್ಟು, ತನ್ನ ವ್ರತಕ್ಕೆ ಭಿನ್ನಭಾವವಿಲ್ಲದೆ ನಿಂದುದೆ ವ್ರತ. ಹೀಗಲ್ಲದೆ, ಇದಿರ ಮಾತಿಂಗಂಜಿ ಕೊಡುವ ಕೊಂಬುವರ ನಿಹಿತಕ್ಕಂಜಿ ನಡೆವನ ವ್ರತ ಜಂಬುಕ ಶೀಲವಹಿಡಿದು ನಾಲಗೆಮುಟ್ಟದೆ ನುಂಗುವ ತೆರದಂತೆ ಸರ್ವವ ತಾ ಮುಟ್ಟುವಲ್ಲಿ ಜಂಗಮಮುಟ್ಟದೆ ತಾ ಮುಟ್ಟಿದನಾದಡೆ ಸಜ್ಜನಸ್ತ್ರೀ ಕೆಟ್ಟುನಡೆದಂತೆ. ಬಾಯಿಯಿದ್ದು ಬಯ್ಯಲಾರೆ, ಕಯ್ಯಿದ್ದು ಪೊಯ್ಯಲಾರೆ, ಕಾಂಬುದಕ್ಕೆ ಮೊದಲೆ ಕಣ್ಣ ಮುಚ್ಚುವೆನು. ಈ ಗುಣ ತಪ್ಪದು ನಿಮ್ಮಾಣೆ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ಆಣತಿ.
--------------
ಅಕ್ಕಮ್ಮ
ಧೂಳುಪಾವಡ ಕಂಠಪಾವಡ ಸರ್ವಾಂಗಪಾವಡ ಇಂತೀ ತ್ರಿವಿಧಶೀಲವ ನಡೆಸುವಲ್ಲಿ ಆ ಭೇದವನರಿತು, ಕಡೆ ನಡು ಮೊದಲು ಮೂರು ವ್ರತ ಕೂಡುವಲ್ಲಿ ವ್ರತದ ಬಿಡುಮುಡಿಯನರಿಯಬೇಕು. ಮನ ವಚನ ಕಾಯ ಈ ಮೂರರ ತೆರನ ಅರಿಯಬೇಕು. ಹೆಣ್ಣು ಹೊನ್ನು ಮಣ್ಣಿನಂಗವನರಿಯಬೇಕು. ಅರ್ಪಿತ, ಅನರ್ಪಿತ, ತೃಪ್ತಿ ಈ ಮೂರರ ಚಿತ್ರವನರಿಯಬೇಕು. ಮರ್ಕಟ ವಿಹಂಗ ಪಿಪೀಲಿಕ ಈ ಮೂರು ಮುಟ್ಟುವ ಭೇದವನರಿಯಬೇಕು. ಇಂತೀ ಇವು ಆವ ಶೀಲವಾದಡೂ ಭಾವಶುದ್ಧವಾಗಿರಬೇಕು, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ.
--------------
ಅಕ್ಕಮ್ಮ