ಅಥವಾ
(37) (14) (0) (3) (3) (2) (0) (0) (8) (1) (1) (4) (3) (0) ಅಂ (9) ಅಃ (9) (42) (0) (10) (1) (0) (0) (0) (10) (0) (0) (0) (0) (0) (0) (0) (13) (0) (3) (0) (16) (11) (0) (16) (8) (18) (0) (2) (0) (7) (9) (9) (0) (13) (12) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಒಂದ ಬಿಟ್ಟು ಒಂದನರಿದೆಹೆನೆಂಬನ್ನಕ್ಕ ಮರದ ಸಂದಿನ ಬೊಂಬೆಯೆ? ಅರಿವುದು ಕುರುಹೊ ಅರಿವೊರಿ ಸುಡುವುದು ಮರನೊ ಬೆಂಕಿಯೊರಿ ಎರಡರ ಹೆಚ್ಚು ಕುಂದ ತಿಳಿದು ಹೇಳೆಂದನಂಬಿಗ Zõ್ಞಡಯ್ಯ.
--------------
ಅಂಬಿಗರ ಚೌಡಯ್ಯ
ಒಬ್ಬ ತಂದೆಯ ಬಸಿರಿನಲ್ಲಿ ಒಂಬತ್ತು ಮಕ್ಕಳು ಹುಟ್ಟಿದಡೇನಯ್ಯ ? ಅವರೊಳಗೊಬ್ಬಾತಂಗೆ ಸೆರಗ ಕಟ್ಟಿ ಮದುವೆಯ ಮಾಡಿದ ಬಳಿಕ, ಆತಂಗೆ ತನ್ನಂಗದ ಸುಖವನೊಪ್ಪಿಸಬೇಕಲ್ಲದೆ, ಉಳಿದಿರ್ದವರೆಲ್ಲ ತನ್ನ ಮಾವನ ಮಕ್ಕಳೆಂದು ಅವರಿಗೆ ಸೆರಗು ಹಾಸುವವಳನು ಒಪ್ಪುವರೆ ಲೋಕದೊಳು ? ಪರಮಾತ್ಮನೆಂಬ ಶಿವನಿಗೆ ಆಶ್ರಯವಾಗಿ ಹುಟ್ಟಿತ್ತು ಲಿಂಗ, ಆತಂಗೆ ವಾಹನವಾಗಿ ಹುಟ್ಟಿದಾತ ವೃಷಭ, ಆತಂಗೆ ಯೋಗವಾಗಿ ಹುಟ್ಟಿದಾತ ವಿನಾಯಕ, ಆತಂಗೆ ಯುದ್ಧಕ್ಕೆ ಸರಿಯಾಗಿ ಹುಟ್ಟಿದಾತ ವೀರಭದ್ರ. ಇಂತಿವರೆಲ್ಲ ಶಿವನ ಮಕ್ಕಳಾದರೆ, ತನಗೊಂದು ಪ್ರಾಣಲಿಂಗವೆಂದು ಕಂಕಣ ಕಟ್ಟಿ, ಕರಸ್ಥಲಕ್ಕೆ ಬಂದ ಬಳಿಕ ಅದನು ನಂಬಲರಿಯದೆ ಮತ್ತನ್ಯದೈವಕ್ಕೆರಗಿದಡೆ ನಾಯಕನರಕವೆಂದಾತ ನಮ್ಮ ಅಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಒಂದನರಿದು ಒಂದ ಮರೆದೆಹೆನೆಂಬ ಸಂದೇಹದವನಲ್ಲ. ಸರ್ವರ ಕೂಡಿಕೊಂಡು ಅರಿದೆಹೆನೆಂಬ ಬಂಧಮೋಕ್ಷದವನಲ್ಲ. ಆಗಿಗೆ ಮುಯ್ಯಾಂತು, ಚೇಗೆಗೆ ಮನಗುಂದುವನಲ್ಲ. ಸುಖದುಃಖವೆಂಬ ಉಭಯವ ಸರಿಗಾಬವನಲ್ಲ. ನಿಂದ ನಿಜವೆ ತಾನಾಗಿದ್ದವಂಗೆ ಬೇರೆ ಬಂಧವೊಂದೂಯಿಲ್ಲ. ಎಂಬನಬಿಂಗ ಚೌಡಯ್ಯ
--------------
ಅಂಬಿಗರ ಚೌಡಯ್ಯ
ಒಡಲಿಂಗಾರು ಬಾಯಿ, ನಡುವೆ ಮೂರು ದೇಹ, ಹಿಡಿದ ಪ್ರಾಣತೆ ಹದಿನಾರು. ಆ ಸೊಡರಿಂಗೆರೆದೆಣ್ಣೆ ಬಯಲೆಣ್ಣೆ ಆ ಸೊಡರೊಳಲಗಳ ಬೆಳಗ ದೃಢವಾಗಿ ಹಿಡಿದು ಕಡೆಗಾಣಿಸೆಂದಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ