ಅಥವಾ
(37) (14) (0) (3) (3) (2) (0) (0) (8) (1) (1) (4) (3) (0) ಅಂ (9) ಅಃ (9) (42) (0) (10) (1) (0) (0) (0) (10) (0) (0) (0) (0) (0) (0) (0) (13) (0) (3) (0) (16) (11) (0) (16) (8) (18) (0) (2) (0) (7) (9) (9) (0) (13) (12) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಓದಿ ಬೋದ್ಥಿಸಿ ಇದಿರಿಗೆ ಹೇಳುವನ್ನಬರ ಚದುರತೆಯಲ್ಲವೆ ? ತಾ ತನ್ನನರಿದಲ್ಲಿ, ಆ ಅರಿಕೆ ಇದಿರಿಗೆ ತೋರಿದಲ್ಲಿ ಅದೆ ದೇವತ್ವವೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಓಂಕಾರವೆಂಬಾಕಾರದಲ್ಲಿ ನಾಲ್ಕು ವೇದ, ನಾಲ್ಕು ವೇದದಲ್ಲಿ ಇಪ್ಪತ್ತೆಂಟಾಗಮ, ಇಪ್ಪತ್ತೆಂಟಾಗಮದಲ್ಲಿ ಹದಿನೆಂಟು ಪುರಾಣ, ಹದಿನೆಂಟು ಪುರಾಣದಲ್ಲಿ ಹದಿನಾರು ಶಾಸ್ತ್ರವಡಗಿದವು. ಆ ಶಾಸ್ತ್ರದ ಕೊನೆಯ ಮೊನೆಯ ಮೇಲಿಪ್ಪ ಷಡ್ದರ್ಶನದ ಕಹಿಯ ಬೇರ ಹಿಡಿದು, ವೀರಶೈವನೆಂಬ ಸಿದ್ಧನು ಕೀಳುವಾಗ, ಕಾಯಯ್ಯ ಎಂದು ಬಾಯ ಬಿಟ್ಟವು. ಅವಕ್ಕೆ ಕರುಣಿಸಿ ಬಿಟ್ಟಾತನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಓದಿಹೆನೆಂಬ ಒಡಲು, ಕಂಡೆಹೆನೆಂಬ ಭ್ರಾಂತು, ಸರ್ವರಿಗೆ ಹೇಳಿಹೆನೆಂಬ ತೇಜಸ್ಸು, ಇಂತಿವೆಲ್ಲವು ಇದಿರಿಗೆ ಹೇ[ಳೆ] ತನ್ನ ಉದರದ ಕಕ್ಕುಲತೆಯಲ್ಲದೆ ಆತ ಅರಿವಿಂಗೆ ಒಡಲಲ್ಲಾ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ