ಅಥವಾ
(37) (14) (0) (3) (3) (2) (0) (0) (8) (1) (1) (4) (3) (0) ಅಂ (9) ಅಃ (9) (42) (0) (10) (1) (0) (0) (0) (10) (0) (0) (0) (0) (0) (0) (0) (13) (0) (3) (0) (16) (11) (0) (16) (8) (18) (0) (2) (0) (7) (9) (9) (0) (13) (12) (0)

ಪದದಿಂದ ಪ್ರಾರಂಭವಾಗುವ ವಚನಗಳು:

ದೊಡ್ಡ ದೊಡ್ಡ ಶೆಟ್ಟಿಗಳ ಕಂಡು ಅಡ್ಡಗಟ್ಟಿ ಹೋಗಿ, ಶರಣಾರ್ಥಿ ಎಂಬ ಎಡ್ಡುಗಳ್ಳತನಕ್ಕೆ ತಮ್ಮ ಮಠಕ್ಕೆ ಬನ್ನಿ ಹಿರಿಯರೇ ಎಂಬರು. ಹೋಗಿ ಶರಣಾರ್ಥಿ ಭಕ್ತನೆಂದೊಡೆ ಕೇಳದ ಹಾಗೆ ಅಡ್ಡ ಮೋರೆಯನಿಕ್ಕಿಕೊಂಡು ಸುಮ್ಮನೆ ಹೋಗುವ ಹೆಡ್ಡ ಮೂಳರಿಗೆ ದುಡ್ಡೇ ಪ್ರಾಣವಾಯಿತ್ತು. ದುಡ್ಡಿಸ್ತರ ಕುರುಹನರಿಯದೆ ಮೊಳಪಾದದ ಮೇಲೆ ಹೊಡಹೊಡಕೊಂಡು ನಗುತಿರ್ದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ದೃಷ್ಟವ ಕಂಡುದಕ್ಕೆ ಮತ್ತೆ ಮೂದಲೆ ಉಂಟೆ? ವ್ರತಗೆಟ್ಟವಂಗೆ ಆಚಾರಭ್ರಷ್ಟಂಗೆ ಪರಸತಿ ಪರಧನ ದುರ್ಭಿಕ್ಷಂಗೆ ಪರ ಅಪರವನರಿಯದ ಪಾತಕಂಗೆ ಅಘೋರ ನರಕಕ್ಕೆಡೆಯಿಲ್ಲ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ದೇಹಾರವ ಮಾಡುವಣ್ಣಗಳಿರಾ, ಒಂದು ತುತ್ತು ಆಹಾರವನಿಕ್ಕಿರೆ. ದೇಹಾರಕ್ಕೆ ಆಹಾರವೆ ನಿಚ್ಚಣಿಗೆ. ದೇಹಾರವ ಮಾಡುತ್ತ ಆಹಾರವನಿಕ್ಕದಿರ್ದಡೆ, ಆ ಹರನಿಲ್ಲೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ