ಅಥವಾ
(5) (3) (3) (0) (0) (0) (0) (0) (5) (0) (0) (3) (0) (0) ಅಂ (1) ಅಃ (1) (5) (0) (2) (1) (0) (1) (0) (4) (0) (0) (0) (0) (0) (0) (0) (1) (0) (0) (0) (3) (2) (0) (5) (3) (3) (1) (0) (0) (2) (1) (2) (2) (3) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಷಡುಚಕ್ರವಳಯದೊಳಗೆ ನಾನಾಡುವೆ ಬಹುರೂಪ. ಭ್ರೂಮಧ್ಯಮಂಡಲ ಹೃದಯಕಮಲ ಮಧ್ಯದ ಅಬ್ಜಸ್ವರದ ಮಣಿಪೂರಕದ ಮೇಲೆ ನಾನಾಡುವೆ ಬಹುರೂಪ. ಉರಿಯುಂಡ ಕರ್ಪುರದಂತೆ ನಾನಾಡುವೆ ಬಹುರೂಪ. ಬಯಲ ಬೆರಸಿದ ಮರೀಚಿಯಂತೆ ನಾನಾಡುವೆ ಬಹುರೂಪ. ರೇಕಣ್ಣಪ್ರಿಯ ನಾಗಿನಾಥಾಬಸವಣ್ಣನಿಂದ ಬದುಕಿದೆನು.
--------------
ಬಹುರೂಪಿ ಚೌಡಯ್ಯ
ಷಡುಸ್ಥಲ ಷಡುಸ್ಥಲವೆಂದು ನುಡಿವುತ್ತಿರ್ಪಿರಿ, ಕೇಳಿರಣ್ಣಾ : ಒಬ್ಬ ರಾಯನ ಕೆಳಗೆ ಆರು ಬಲ ಉಂಟಾಗಿಪ್ಪಂತೆ ಆ ಪರಶಿವತತ್ವಕ್ಕೆ ಪ್ರಾಣಪದವಪ್ಪರು ಭಕ್ತರುಂಟು. ಆ ಭಕ್ತರಿಗೆ ಗುರುಲಿಂಗಜಂಗಮದ ದಾಸೋಹ. ಪಾದೋದಕ ಪ್ರಸಾದ, ಪಂಚ ಸದಾಚಾರ. ಇಂತಿವೆಲ್ಲವೂ ಪ್ರಾಣಪದವಾಗಿಪ್ಪವು. ಇವರೆಲ್ಲರಿಗೆಯೂ ಶರಣಸತಿ ಲಿಂಗಪತಿಗಳೆಂಬವೆ ಪ್ರಾಣಪದವಾಗಿ, ರೇಕಣ್ಣಪ್ರಿಯ ನಾಗಿನಾಥನಲ್ಲಿ ನಿಂದರು.
--------------
ಬಹುರೂಪಿ ಚೌಡಯ್ಯ