ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಗಂಡಂಗಿಂದ ಹೆಂಡತಿ ಮುನ್ನವೆ ಹುಟ್ಟಿ, ಗಂಡಂಗಿಂದ ಕಿರಿಯಳಾದಳು ಆ ಹೆಂಡತಿಯೆ ಒಡಹುಟ್ಟಿದಳಾದಳೆಂಬುದ ಕೇಳಿ, ಆ ಗಂಡ ಸಂಗವ ಮಾಡಿದಡೆ ಇಬ್ಬರಿಗೊಂದು ಮಗು ಹುಟ್ಟಿತ್ತಲ್ಲಾ! ಆ ಹುಟ್ಟಿದ ಮಗುವ ತಾಯಿ ಮುದ್ದಾಡಿಸಿದಡೆ ತಾಯ ತಕ್ಕೈಸಿತ್ತಿದೇನು ಹೇಳಾ? ತಾಯಿಯೆದ್ದು ಪತಿಭಕ್ತಿಯ ಮಾಡಿತ್ತ ಕಂಡು ಗುಹೇಶ್ವರಲಿಂಗಕ್ಕೆ ಭಕ್ತಿ ಪರಿಣಾಮವಾಯಿತ್ತು.
--------------
ಅಲ್ಲಮಪ್ರಭುದೇವರು
ಗಗನಕ್ಕೆ ನಿಚ್ಚಣಿಕೆಯನಿಕ್ಕಿದವರುಂಟೆ ? ವಾಯುವಿನ ಸ್ಥಳವನರಿದವರುಂಟೆ ? ಅಂಬುಧಿಯ ಗುಣ್ಪವನಳೆದವರುಂಟೆ ? ಲಿಂಗದ ಪ್ರಮಾಣ ಹೇಳಬಹುದೆ ? ಚಂದ್ರಮಂಡಲ ತಾರಾಮಂಡಲ ಸೂರ್ಯಮಂಡಲ ಇತ್ತಿತ್ತಲಯ್ಯಾ ! ಪಂಚಮುಖವಾಗಿ, ನೊಸಲಕಣ್ಣು ಚತುರ್ಭುಜ ಅಣುಮಾತ್ರವೆ ? ಒಬ್ಬ ಶರಣನಾಗಿ ಗುಹೇಶ್ವರನೆಂಬ ಘನನೆಲೆಯ ಬಲ್ಲಡೆ ಅಲ್ಲಿಂದತ್ತ ಶರಣು ಶರಣು.
--------------
ಅಲ್ಲಮಪ್ರಭುದೇವರು
ಗ್ರಾಮಮಧ್ಯದ ಮೇಲಣ ಮಾಮರ, ಸೋಮಸೂರ್ಯರ ನುಂಗಿತ್ತಲ್ಲಾ! ಅಮರಗಣಂಗಳ ನೇಮದ ಮಂತ್ರ, ಬ್ರಹ್ಮಾಂಡಕೋಟಿಯ ಮೀರಿತ್ತಲ್ಲಾ! ಸುಮನ ಸುಜ್ಞಾನದೊಳಗಾಡುವ ಮಹಾಮಹಿಮಂಗೆ, ನಿರ್ಮಳವಾಯಿತ್ತು_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಗಗನದ ಮೇಘಂಗಳೆಲ್ಲ ಸುರಿದು[ವು] ಭೂಮಿಯ ಮೇಲೆ. ಭೂಮಿ ದಣಿಯುಂಡು ಸಸಿಗಳೆಲ್ಲಾ ಬೆಳೆದವು. ಬಹುವಿಕಾರದಿಂದ ಬೆಳೆದ ಸಸಿ[ಯ], ವಿಕಾರದಿಂದ ಗ್ರಹಿಸುವ ಕಾಮವಿಕಾರಿಗಳು, ಲಿಂಗವನೆತ್ತ ಬಲ್ಲರು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಗುರುವಿಂಗೂ ಶಿಷ್ಯಂಗೂ,_ ಆವುದು ದೂರ ? ಆವುದು ಸಾರೆ ? ಎಂಬುದನು, ಆರುಬಲ್ಲರು ? ಗುರುವೆ ಶಿಷ್ಯನಾದ ತನ್ನ ವಿನೋದಕ್ಕೆ, ಶಿಷ್ಯನೆ ಗುರುವಾದ ತನ್ನ ವಿನೋದಕ್ಕೆ. ಕರ್ಮವೆಂಬ ಕೌಟಿಲ್ಯ ಎಡೆವೊಕ್ಕ ಕಾರಣ, ಭಿನ್ನವಾಗಿ ಇದ್ದಿತ್ತೆಂದಡೆ, ಅದು ನಿಶ್ಚಯವಹುದೆ ? ಆದಿ ಅನಾದಿಯಿಂದತ್ತತ್ತ ಮುನ್ನಲಾದ ಪರತತ್ವಮಂ ತಿಳಿದು ನೋಡಲು, ನೀನೆ ಸ್ವಯಂ ಜ್ಯೋತಿಪ್ರಕಾಶನೆಂದರಿಯಲು, ನಿನಗೆ ನೀನೆ ಗುರುವಲ್ಲದೆ ನಿನ್ನಿಂದಧಿಕವಪ್ಪ ಗುರುವುಂಟೆ ? ಇದು ಕಾರಣ ಗುಹೇಶ್ವರಲಿಂಗವು ತಾನೆ ಎಂಬುದನು ತನ್ನಿಂದ ತಾನೆ ಅರಿಯಬೇಕು ನೋಡಾ.
--------------
ಅಲ್ಲಮಪ್ರಭುದೇವರು
ಗುರು ಶಿಷ್ಯರಿಬ್ಬರ ಮಧ್ಯದಲ್ಲಿ ಒಂದು ಮಗು ಹುಟ್ಟಿತ್ತು ನೋಡಾ ! ಗುರುವಿಂಗೆ ಗುರುವಾದ ಪರಿಯೆಂತೊ ? ಶಿಷ್ಯಂಗೆ ಶಿಷ್ಯನಾದ ಪರಿಯೆಂತೊ ? ಆದಿಯ ಲಿಂಗವ ಸಾಧ್ಯವ ಮಾಡಿ ತೋರಿದ ಗುಹೇಶ್ವರನ ಚನ್ನಬಸವಣ್ಣಂಗೆ ಶರಣೆಂದು ಬದುಕಿದೆನು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಗುರುವಿದು ಲಿಂಗವಿದು ಜಂಗಮವಿದು ಎಂಬ ಭೇದವ ಏಕವ ಮಾಡಿ ನಿನಗೆ ತೋರಿದವರಾರು ಹೇಳಾ ? ಆದಿ ಅನಾದಿಯನು ಒಂದು ಮಾಡುವ, ಭಾವ ನಿರ್ಭಾವವನು ಅರುಹಿದವರಾರು ಹೇಳಾ ? ದೀಕ್ಷೆ ಶಿಕ್ಷೆ ಸ್ವಾನುಭಾವದ ಪರಿಯ ತೋರಿ ನಿಜಪದದಲ್ಲಿ ನಿಲಿಸಿದವರಾದು ಹೇಳಾ ? ಗುಹೇಶ್ವರಲಿಂಗದಲ್ಲಿ ನಿನ್ನ ಆಯತವ ಹೇಳಾ ಮಡಿವಾಳ ಮಾಚಯ್ಯಾ ?
--------------
ಅಲ್ಲಮಪ್ರಭುದೇವರು
ಗುರುವಿನಿಂದಾದ ಕಾಯವ ಬೆರಸಿ, ಗುರುವನರಿಯದಾದೆನಯ್ಯಾ. ಲಿಂಗದಿಂದಾದ ಜೀವ ಬೆರಸಿ, ಲಿಂಗವನರಿಯದಾದೆನಯ್ಯಾ. ಜಂಗಮದಿಂದಾದ ಮನವ ಬೆರಸಿ ಜಂಗಮವನರಿಯದಾದೆನಯ್ಯಾ. ಈ ತ್ರಿವಿಧ ಭಕ್ತಿಯುಕ್ತಿಯ ಅರುಹಿಸಿ ಕೊಟ್ಟ ಸಂಗನಬಸವಣ್ಣನ ಬೆರಸಿ_ನೀನು ನಾನು ಬದುಕಿದೆವು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಗಂಗೆಯ ತಡಿಯಲೊಂದು ಐವಾಗಿಲಪಟ್ಟಣದ ಕಾಲುವಳ್ಳಿಯಲ್ಲಿ ಹುಟ್ಟಿ ಬೆಳೆದೆ ನಾನು. ತರುವಕ್ಕಳ ಕೂಡಿ ನೀರಾಟವ ಹೊಕ್ಕು, ಉಟ್ಟುವ ಹೋಗಾಡಿಹಳೆಂದು ಬಾಯ ಬಾಯ ಕುಟ್ಟಿ, ಬ್ರಹ್ಮ ಪಾಶವೆಂಬ ಕಿರಿಗೆಯನುಗಿದುಕೊಂಡಳು ನಮ್ಮವ್ವೆ. ಇಂತಪ್ಪ ತಾಯಿತಂದೆಯರ ಕೂಡೆ ಮುನಿದು ಹೋಗಿ, ಗುಹೇಶ್ವರನಲ್ಲಯ್ಯನ ಮೊರೆಹೊಕ್ಕೆ. ಇನ್ನು ಮರಳಿ ಬಂದು ಆ ಕಿರಿಗೆಯನುಟ್ಟೆನಾದಡೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ.
--------------
ಅಲ್ಲಮಪ್ರಭುದೇವರು
ಗಿಡುವಿಲ್ಲದ ಪುಷ್ಪಕ್ಕೆ ಕುಸುಮವಿಲ್ಲದ ಪರಿಮಳವಿದ್ದಿತ್ತಯ್ಯಾ ! `ಕ್ಷಂ ಕ್ಷಂ' ಎನುತ್ತಿದ್ದಿತಯ್ಯಾ. `ಹಂ ಹಂ' ಎನುತ್ತಿದ್ದಿತಯ್ಯಾ. ಬಯಲುವಿಡಿದು ಹೋದಡೆ, ಪಿಂಡಕ್ಕೆ ಹೆಣನ ಸುಡುವರಿಲ್ಲ ಗುಹೇಶ್ವರಾ !
--------------
ಅಲ್ಲಮಪ್ರಭುದೇವರು
ಗುರುಸ್ಥಲ ಲಿಂಗಸ್ಥಲ ಜಂಗಮಸ್ಥಲ ಪ್ರಸಾದಸ್ಥಲವಡಗಿದ ಕರಸ್ಥಲ ಇನ್ನಾರಿಗೆ ಸಾರಿತ್ತು ? ನಿರ್ವಂಚಕತ್ವ ನಿತ್ಯನಿಜಸ್ಥಲವಾದ ಭಕ್ತಿಸ್ಥಲ ಇನ್ನಾರಿಗೆ ಸಾರಿತ್ತು ಬಸವಣ್ಣಂಗಲ್ಲದೆ ? ಗುಹೇಶ್ವರಾ ನಿಮ್ಮ ಶರಣ ಸಂಗನಬಸವಣ್ಣನ ಮೊರೆಯ ಹೊಕ್ಕು ನಾನು ಬದುಕಿದೆನು.
--------------
ಅಲ್ಲಮಪ್ರಭುದೇವರು
ಗುರುಶಿಷ್ಯಸಂಬಂಧಕ್ಕೆ ಲಿಂಗವ ಧರಿಸುವರಯ್ಯಾ. ನಿಮ್ಮ ಬಂಧನಕ್ಕಿಕ್ಕಿ ಆಳುವರಯ್ಯಾ. ಆನು ಕಂಡು ಮರುಗಿ `ಅಕಟಕಟಾ' ಎಂದೆನಲ್ಲಾ ! ಕೂಗಿಲ್ಲ ಬೊಬ್ಬೆಯಿಲ್ಲ ಹೋದ ಹೊಲಬನರಿಯರು ದೇವಾ ಗುಹೇಶ್ವರಾ ಬಾಳುದಲೆಯ ಹಿಡಿದೆನು.
--------------
ಅಲ್ಲಮಪ್ರಭುದೇವರು
ಗಂಗಾದೇವಿ ಮುಂಡೆಯಾದಳು, Uõ್ಞರೀದೇವಿ ಓಲೆಯ ಕಳೆದಳು. ಚಂದ್ರಸೂರ್ಯರಿಬ್ಬರೂ ನೀರಿಳಿದರು. ವಾಯುದೇವ ವಿಮಾನವ ಹೊತ್ತ, ವಾಸುದೇವ ತಲೆಗೂಳ್ಳಿಯನಿರಿದ. ಅಲ್ಲಿಂದತ್ತ ಗುಹೇಶ್ವರ ಸತ್ತನೆಂಬ ಸುದ್ದಿ !
--------------
ಅಲ್ಲಮಪ್ರಭುದೇವರು