ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ತನ್ನಿಂದ ತನ್ನ ನೋಡಲು, ತನಗೆ ತಾ ಪ್ರತ್ಯಕ್ಷನಾಗೆ ಆ ಪ್ರತ್ಯಕ್ಷವೆಂಬುದೆ ಭ್ರಾಂತು ನೋಡಾ ! ಅದೇನು ಕಾರಣವೆಂದಡೆ; ತನಗೆ ತಾನು ಅನ್ಯವಲ್ಲಾಗಿ, ಎನಗೆ ಅನ್ಯವಿಲ್ಲ. ಅನ್ಯ ನಾನಲ್ಲ ಎಂದು; `ಬ್ರಹ್ಮವು ನಾನು' ಎಂಬೆಡೆ_ ಅದು ಅತಿಶಯದಿಂದ ಭ್ರಾಂತು_ಎಂಬುದನು ತಿಳಿದು ನೋಡಾ. ಅದೇನು ಕಾರಣವೆಂದಡೆ: `ಬ್ರಹ್ಮಕ್ಕೆ ನಾ ಬ್ರಹ್ಮ' ಎಂಬುದು ಘಟಿಸದಾಗಿ ! ಅತಿಶಯದ ಸುಖವಳಿದ ನಿರಂತರ ಸುಖವೆಂತುಟೆಂದಡೆ ಗುರು ಮುಗ್ಧನಾದೆಡೆಯ ತಿಳಿಯಲು ನೋಡಲು ಗುಹೇಶ್ವರಲಿಂಗದ ನಿಲವು ತಾನೆ.
--------------
ಅಲ್ಲಮಪ್ರಭುದೇವರು
ತನು ಶುದ್ಧವಾಯಿತ್ತು ಬಸವಾ ಇಂದೆನ್ನ. ಮನ ಶುದ್ಧವಾಯಿತ್ತು ಬಸವಾ ಇಂದೆನ್ನ. ಭಕ್ತಿ ಯುಕ್ತಿ ಮುಕ್ತಿ ಶುದ್ಧವಾಯಿತ್ತು ಬಸವಾ ಇಂದೆನ್ನ. ಇಂತೀ ಸರ್ವವೂ ಶುದ್ಧವಾಯಿತ್ತು ಬಸವಾ ಇಂದೆನ್ನ. ನಮ್ಮ ಗುಹೇಶ್ವರಲಿಂಗಕ್ಕೆ ಆದಿಯಾಧಾರವಾದೆಯೆಲ್ಲಾ ಬಸವಣ್ಣಾ ನೀನಿಂದು.
--------------
ಅಲ್ಲಮಪ್ರಭುದೇವರು
ತಮ್ಮ ತಾವರಿಯರು ಹೇಳಿದಡೂ ಕೇಳರು. ಆರರ ಹೊಲಬ ಏನೆಂದರಿಯರು. ಎಂಟರ ಕಂಟಕವ ಮುನ್ನರಿಯರು. ಏರಿದ ಬೆಟ್ಟವ ಇಳಿಯಲರಿಯದವರ ಏನೆಂಬೆ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ತನ್ನನರಿಯದ ಅರಿವೆಂತುಟೊ ? ತನ್ನ ಮರೆದ ಮರಹೆಂತುಟೊ ? ಅರಿದವರು ಮರೆದವರು ನಿಮ್ಮ ಪ್ರತಿಬಿಂಬದಂತಿಪ್ಪರು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತನ್ನ ತಾನರಿದೆನೆಂಬವನ ಮುನ್ನ ನುಂಗಿತ್ತು ಮಾಯೆ. ನಿನ್ನೊಳಗೆ ಅರಿವು ಭಿನ್ನವಾಗಿರುತ್ತಿರಲು ಮುನ್ನವೆ ನೀನು ದೂರಸ್ಥ ನೋಡಾ ! ಭಿನ್ನವಿಲ್ಲದ ಅಜ್ಞಾನವ ಭಿನ್ನವ ಮಾಡಬಲ್ಲಡೆ ತನ್ನಲ್ಲಿ ಅರಿವು ನಿಜವಪ್ಪುದು ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ತೆರಹಿಲ್ಲದ ಘನವ ಮನ ಒಳಕೊಂಡು ಆ ತಲೆಯಿಲ್ಲದ (ತಲಹಿಲ್ಲದ?) ಮನವ ಘನ ಒಳಕೊಂಡು ತನಗೆ ತಾ ತರಹರವಾದ ಬಳಿಕ ಇನ್ನು ಮರಳಿ ಇಂಬುಗೊಡಲುಂಟೆ ? ಗುಹೇಶ್ವರನ ಲೀಲೆ ಮಾಬನ್ನಕ್ಕರ ಉರಿಯೊಳಗಣ ಕರ್ಪುರದಂತಿರಬೇಕು ಕಾಣಾ ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು
ತಾಳಮರದ ಮೇಲೊಂದು ಬಾವಿ ಇದ್ದಿತ್ತಲ್ಲಾ. ಆ ಬಾವಿಯ ತಡಿಯ ಹುಲ್ಲನು, ಒಂದು ಮೊಲ ಬಂದು ಮೇಯಿತ್ತಲ್ಲಾ! ಕಾಯಸಹಿತಜೀವನ ಬಾಣಸ ಮಾಡಲರಿಯರು ಗುಹೇಶ್ವರಾ_ನಿಮ್ಮಾಣೆ.
--------------
ಅಲ್ಲಮಪ್ರಭುದೇವರು
ತೆರಹಿಲ್ಲದ ಘನವ ಅರಸಿಹೆನೆಂದಡೆ ಕಾಣಬಾರದು. ಅದೇನು ಕಾರಣವೆಂದಡೆ: ಆ ಅರಸುವಾತನು ತಾನೆ ವಸ್ತುವಾದ ಕಾರಣ. ವಿಚಾರಕ್ಕೆ ಬಾರದ[ದು] ನಿಶ್ಚಲಬ್ರಹ್ಮವೆಂಬುದು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತನು ಹೊರಗಿರಲು, ಪ್ರಸಾದ ಒಳಗಿರಲು ಏನಯ್ಯಾ ನಿಮ್ಮ ಮನಕ್ಕೆ ಮನ ನಾಚದು? ಪ್ರಾಣಕ್ಕೆ ಲಿಂಗದಲ್ಲಿ ಪ್ರಸಾದವ ಕೊಂಡಡೆ, ವ್ರತಕ್ಕೆ ಭಂಗ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತನು ಉಂಟೆಂದಡೆ ಪಾಶಬದ್ಧ, ಮನ ಉಂಟೆಂದಡೆ ಭವಕ್ಕೆ ಬೀಜ. ಅರಿವ ನುಡಿದು ಕೆಟ್ಟೆನೆಂದರೆ ಅದೇ ಅಜ್ಞಾನ. ಭಾವದಲ್ಲಿ ಸಿಲುಕಿದೆನೆಂಬ ಮಾತು ಬಯಲ ಭ್ರಮೆ ನೋಡಾ. ಒಮ್ಮೆ ಕಂಡೆ, ಒಮ್ಮೆ ಕಾಣೆ, ಒಮ್ಮೆ ಕೂಡಿದೆ, ಒಮ್ಮೆ ಅಗಲಿದೆ ಎಂದಡೆ ಕರ್ಮ ಬೆಂಬತ್ತಿ ಬಿಡದು. ನಿನ್ನೊಳಗೆ ನೀ ತಿಳಿದುನೋಡಲು ಭಿನ್ನವುಂಟೆ ? ಗುಹೇಶ್ವರಲಿಂಗವನರಿವಡೆ ನೀನೆಂದೇ ತಿಳಿದು ನೋಡಾ ಮರುಳೆ ?
--------------
ಅಲ್ಲಮಪ್ರಭುದೇವರು
ತನುವೆಂಬ ಏರಿಗೆ ಮನವೆಂಬ ಕಟ್ಟೆಯ ಮಾಡಿ, ಬಲಿದು ಷಡ್ವಿಧಭಕ್ತಿಯೆಂಬ ಸೋಪಾನದಿಂದ ಪರಮಾನಂದವೆಂಬ ಜಲವ ತುಂಬಿ ಕೆರೆಯ ಕಟ್ಟಬಲ್ಲವರನಾರನೂ ಕಾಣೆ ! ನಾನು ಕಟ್ಟಿದ ಕೆರೆ ಸ್ಥಿರವಾಯಿತ್ತು ಗುಹೇಶ್ವರಾ ನಿಮ್ಮಾಣೆ.
--------------
ಅಲ್ಲಮಪ್ರಭುದೇವರು
ತನುವ ಗೆಲಲರಿಯದೆ, ಮನವ ಗೆಲಲರಿಯದೆ ಧನವ ಗೆಲಲರಿಯದೆ, ಭ್ರಮೆಗೊಂಡಿತ್ತು ಲೋಕವೆಲ್ಲವು. ತನುವ ದಾಸೋಹಕ್ಕೆ ಸವೆಸಿ, ಮನವ ಲಿಂಗಧ್ಯಾನದಲ್ಲಿ ಸವೆಸಿ ಧನವ ಜಂಗಮದಲ್ಲಿ ಸವೆಸಿ ಗೆಲಬಲ್ಲಡೆ, ಸಂಗನಬಸವಣ್ಣನಲ್ಲದೆ ಮತ್ತಾರನು ಕಾಣೆ. ಗುಹೇಶ್ವರಾ_ನಿಮ್ಮ ಶರಣ ಸಂಗನಬಸವಣ್ಣಂಗೆ, ನಮೋ ನಮೋ ಎನುತಿರ್ದೆನು.
--------------
ಅಲ್ಲಮಪ್ರಭುದೇವರು
ತಾ ನಡೆವಡೆ ನಡೆಗೆಟ್ಟ ನಡೆಯ ನಡೆವುದಯ್ಯಾ. ತಾ ನುಡಿವಡೆ ನುಡಿಗೆಟ್ಟ ನುಡಿಯ ನುಡಿವುದಯ್ಯಾ. ರೂಹಿಲ್ಲದ ಸಂಗವ ಮಾಡಬೇಕು, ಭವವಿಲ್ಲದ ಭಕ್ತಿಯ ಮಾಡಬೇಕು. ತಾನಾವನೆಂದರಿಯದಂತಿಹುದು, ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತಾ ಸುಖಿಯಾದಡೆ ನಡೆಯಲು ಬೇಡ. ತಾ ಸುಖಿಯಾದಡೆ ನುಡಿಯಲು ಬೇಡ. ತಾ ಸುಖಿಯಾದಡೆ ಪೂಜಿಸಲು ಬೇಡ, ತಾ ಸುಖಿಯಾದಡೆ ಉಣಲು ಬೇಡಫ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತಲೆಯ ಮೇಲೆ ತಲೆಯಿದ್ದಿತ್ತಲ್ಲಾ ! ಆ ತಲೆಯಾತಲೆ ನುಂಗಿತ್ತಲ್ಲಾ ! ಸತ್ತು ಹಾಲ ಸವಿಯ ಬಲ್ಲಡೆ, ರಥದ ಕೀಲ ಬಲ್ಲಡೆ_ಅದು ಯೋಗ ! ಶಿಶು ಕಂಡ ಕನಸಿನಲುಳ್ಳ ತೃಪ್ತಿ ನಿನ್ನಲ್ಲಿ ಉಂಟೆ ಗುಹೇಶ್ವರಾ?
--------------
ಅಲ್ಲಮಪ್ರಭುದೇವರು
ತಲೆ ಇಲ್ಲದ ತಲೆಯಾತಂಗೆ ಕರುಳಿಲ್ಲದ ಒಡಲು ನೋಡಾ! ಆ ನಲ್ಲಂಗೆ ಅಂಗವಿಲ್ಲದ ಅಂಗನೆ ಸತಿಯಾಗಿಪ್ಪಳು! ಇವರಿಬ್ಬರ ಬಸುರಲ್ಲಿ ಹುಟ್ಟಿದಳೆಮ್ಮ ತಾಯಿ, ನಾ ಹುಟ್ಟಿ, ತಾಯ ಕೈವಿಡಿದು ಸಂಗವ ಮಾಡಿ ನಿರ್ದೋಷಿಯಾದೆನು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತ್ರಿಭುವನವೆಂಬ ಪಂಜರದೊಳಗೆ, ಸಂಸಾರಚಕ್ರದಲ್ಲಿ_ ಹೊನ್ನು ಪ್ರಾಣವೆ ಪ್ರಾಣವಾಗಿ, ಹೆಣ್ಣು ಪ್ರಾಣವೆ ಪ್ರಾಣವಾಗಿ ಮಣ್ಣು ಪ್ರಾಣವೆ ಪ್ರಾಣವಾಗಿ, ಆ ಸುಖದ ಸೊಕ್ಕಿನಲ್ಲಿ ಈಸಿಯಾಡುತ್ತಿರ್ದರಲ್ಲಾ, ಬಹುವಿಧದ ವ್ಯವಹಾರ ವೇಧಿಸಿದವರು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತನಗುಳ್ಳ ನಿಧಾನ ತನಗಿಲ್ಲದಂತೆ, ಬಂಧುಗಳೆಲ್ಲರ ನುಂಗಿ ಅಂಬುಧಿ ಬತ್ತಿತ್ತು. ಅದುಭುತ ಸತ್ತಿತ್ತು; ರಣರಂಗವತ್ತಿತ್ತು. ಇರುಳು ಮಾಣಿಕವ ನುಂಗಿ ಮರಣವಾದ ಬಳಿಕ ಅಮೃತದ ಪುತ್ಥಳಿಯ ಹಾಲ ಕುಡಿಯ ಕರೆದಡೆ ಗುಹೇಶ್ವರಲಿಂಗಕ್ಕೆ ಊಟವೆಂಬುದಿಲ್ಲ ನೋಡಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ತನುವ ತಾಗದ ಮುನ್ನ, ಮನವ ತಾಗದ ಮುನ್ನ, ಅಪ್ಯಾಯನ ಬಂದು ಎಡೆಗೊಳ್ಳದ ಮುನ್ನ_ಅರ್ಪಿತವ ಮಾಡಬೇಕು. ಗುರುವಿನ ಕೈಯಲ್ಲಿ ಎಳತಟವಾಗದ ಮುನ್ನ_ಅರ್ಪಿತವ ಮಾಡಬೇಕು. ಎಡದ ಕೈಯಲ್ಲಿ ಕಿಚ್ಚು, ಬಲದ ಕೈಯಲ್ಲಿ ಹುಲ್ಲು, ಉರಿ ಹತ್ತಿತ್ತು ಗುಹೇಶ್ವರಾ ನಿಮ್ಮ ಪ್ರಸಾದಿಯ !
--------------
ಅಲ್ಲಮಪ್ರಭುದೇವರು
ತೋರಿದ ಭೇದವ ತೋರಿದಂತೆ ಕಂಡಾತನಲ್ಲದೆ, ದ್ಯಷ್ಟಿವಾಳಕ ತಾನಲ್ಲ. ಬೇರೊಂದ ವಿವರಿಸಿಹೆನೆಂದಡೆ, ಆರ ಮೀರಿದಲ್ಲದೆ ಅರಿಯಬಾರದು. ಅರಿವನರಿದು ಮರಹ ಮರೆಯದೆ, ಮನದ ಬೆಳಗಿನೊಳಗಣ ಪರಿಯನರಿಯದೆ ವಾದಿಸಿ ಕೆಟ್ಟು ಹೋದರು ಗುಹೇಶ್ವರಾ, ಸಲೆ ಕೊಂಡ ಮಾರಿಂಗೆ !
--------------
ಅಲ್ಲಮಪ್ರಭುದೇವರು
ತತ್ವವೆಂಬುದ ನೀನೆತ್ತ ಬಲ್ಲೆಯೊ ? ಸತ್ತು ಮುಂದೆ ನೀನೇನ ಕಾಬೆಯೊ ? ಇಂದೆ ಇಂದೆಯೊ ಇಂದೆ ಮಾನವಾ ಮಾತಿನಂತಿಲ್ಲ ಶಿವಾಚಾರ, ದಸರಿದೊಡಕು ಕಾಣಿರಣ್ಣಾ. ರಚ್ಚೆಯ ಮಾತಲ್ಲ ಬೀದಿಯ ಮಾತಲ್ಲ. ಏಕೋ ರಾತ್ರಿಯ ಬಿಂದು ನೋಡಾ ! ಗುಹೇಶ್ವರನ ಕೂಡಿದ ಕೂಟ ಇಂದು ಸುಖ, ಮುಂದೆ ಲೇಸು
--------------
ಅಲ್ಲಮಪ್ರಭುದೇವರು
ತತ್ವಾತತ್ವಂಗಳಿಲ್ಲದಂದು, ಸಾಕ್ಷಿಸಭೆಗಳಿಲ್ಲದಂದು, ಏನೇನಿಲ್ಲದಂದು, ಬಯಲು ಬಲಿವಂದು ಈ ಬಿಂದುವಾಯಿತ್ತು. ಆ ಬಿಂದು ಅಕ್ಷರತ್ರಯ ಗದ್ದಿಗೆಯಲ್ಲಿ ಕುಳ್ಳಿರಲು ಲೋಕದುತುಪತಿಯಾಯಿತ್ತು. ನಾದದ ಬಲದಿಂದ ಮೂರ್ತಿಯಾದನೊಬ್ಬ ಶರಣ. ಆ ಶರಣನಿಂದಾದುದು ಪ್ರಕೃತಿ, ಆ ಪ್ರಕೃತಿಯಿಂದಾಯಿತು ಲೋಕ ಲೌಕಿಕ ಆ ಲೋಕ ಲೌಕಿಕವನತಿಗಳೆದು ನಿಜದಲ್ಲಿ ನಿವಾಸಿಯಾಗಿಪ್ಪ ಗುಹೇಶ್ವರ, ನಿಮ್ಮ ಶರಣ ಸಂಗನಬಸವಣ್ಣ.
--------------
ಅಲ್ಲಮಪ್ರಭುದೇವರು
ತಲೆಯಿಲ್ಲದ ಅಟ್ಟೆ ಜಗವ ನುಂಗಿತ್ತು. ಅಟ್ಟೆಯಿಲ್ಲದ ತಲೆ ಆಕಾಶವ ನುಂಗಿತ್ತು. ಅಟ್ಟೆ ಬೇರೆ, ತಲೆ ಬೇರಾದಡೆ_ಮನ ಸಂಚಲಿಸುತ್ತಿದ್ದಿತ್ತು ! ಅಟ್ಟೆಯನೂ ತಲೆಯನೂ ಬಯಲು ನುಂಗಿದಡೆ, ಅನು ನುಂಗಿದೆನು ಗುಹೇಶ್ವರನಿಲ್ಲದಂತೆ !
--------------
ಅಲ್ಲಮಪ್ರಭುದೇವರು
ತಪ್ಪಿ ನೋಡಿದಡೆ ಮನದಲ್ಲಿ ಅಚ್ಚೊತ್ತಿದಂತಿತ್ತು . ಇಪ್ಪೆಡೆಯ ವಿಚಾರಿಸಿ ನೋಡಿದಡೆ ಇಲ್ಲದಂತಾಯಿತ್ತು, ಲೆಪ್ಪದ ಜಲದ ಪಾದಘಾತದಂತೆ. ಕರ್ತೃತ್ವವೆಲ್ಲಿಯದೊ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತೋರುವುದೆಲ್ಲ ಬೇರಾಗಿ ಕಾಂಬುದು, ಕಂಡುದ ಬಿಡುವುದು ಕಾಣದುದ ಹಿಡಿವುದು. ಕಾಣದುದ ಕಂಡೆವೆಂದು ಬಿಟ್ಟಣ್ಣಗಳು ನಟ್ಟನಡುನೀರೊಳಗೆ ಕೆಟ್ಟ ಕೇಡ ನೋಡಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು

ಇನ್ನಷ್ಟು ...