ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಲಿಂಗವಂತಂಗೆ ಲಿಂಗದ ವಾರ್ತೆಯ ನುಡಿವುದೆ ಭಂಗ. ಹಂಗು ನೋಡಾ ಹಂಗಿನ ಶಬ್ದ ನೋಡಾ ! ಕೊಡನ ತುಂಬಿದ ಹಾಲನೊಡೆಯ ಹಾಯ್ಕಿ ಇನ್ನು ಉಡಿಗಿಹೆನೆಂದಡೆ ಉಂಟೆ ? ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಲಿಂಗವೆ ಕರಲಿಂಗವೆ ನುತಿವೆತ್ತ ಗುರುವಿತ್ತ_ ಅಂಗವೆ ತನುಕರಣ ಕಣು ಮನವು ಕರವೆನಿಸೆ ಮಂಗಳವು ಯೋಗದೊಳು ಸಮರಸದಿ ಷಟ್‍ಚಕ್ರ ಲಿಂಗೈಕ್ಯವಿರ್ವಗೆಯ ಕುಂಭಕ ಸಮಾಧಿಯೊಳು ಕುಂಡಲಿಯ ಕುಣಿಕೆ ಗುಹ್ಯ. ಲಿಂಗ ಬಿಂದುವೆ ನಾದ ಲಿಂಗವೆ ಸುಷುಮ್ನಾಗ್ರ_ ಲಿಂಗತನುವೀಡಾಡಿ ಸಂಗದೆರಕದೊಳಾಳೆ ಗುಹ್ಯತಮ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಲಿಂಗ-ಜಂಗಮದ ಸಂಬಂಧ ಸಯವ ಮಾಡಿಹೆನೆಂಬರು, ಗುರು ಮುನ್ನವೊ ? ಶಿಷ್ಯ ಮುನ್ನವೊ ? ಆವುದು ಮುನ್ನವೆಂದರಿಯರು ನೋಡಾ ! ಇದು ಕಾರಣ_ಆವ ಸಂಬಂಧವನರಿಯರು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಲಿಂಗದಲ್ಲಿ ಆಗಾಗಿ ಅಂಗವಿರಹಿತನಾಗಿ ಫಲವೇನಯ್ಯಾ ? ಜಂಗಮದಲ್ಲಿ ಸನ್ನಹಿತನಾಗಿ ದಾಸೋಹವ ಮಾಡಿ ಫಲವೇನಯ್ಯಾ ? `ನೀ' `ನಾ' ಎಂಬ ಭಾವ ಉಳ್ಳನ್ನಕ್ಕರ ಜಂಗಮದಲ್ಲಿ ಸಮಯಾಚಾರಿಯಾಗಿಪ್ಪನ್ನಕ್ಕರ ಮಾಡುವ ಭಕ್ತಿಗೆ ಭಿನ್ನವದೆ. ಗುಹೇಶ್ವರಲಿಂಗದಲ್ಲಿ ಸಂಗನಬಸವಣ್ಣಂಗೆ ಆಚರಣೆ ತಿಳಿಯದು ನೋಡಾ ಚೆನ್ನಬಸವಣ್ಣಾ.
--------------
ಅಲ್ಲಮಪ್ರಭುದೇವರು