ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ವಾರಿಕಲ್ಲ ಪುತ್ಥಳಿಯ ಅಪ್ಪು ಕೊಂಡಂತಾಯಿತ್ತು. ಅಗ್ನಿಪುರುಷನ ಮುಸುಕ ತೆಗೆದ ಕರ್ಪುರದಂತಾಯಿತ್ತು. ಕತ್ತಲೊಳಗೆ ರವಿಯ ಬೆಳಗು ಹೊಕ್ಕಂತಾಯಿತ್ತು. ಗುಹೇಶ್ವರನ ಶರಣ ಮಡಿವಾಳ ಮಾಚಿತಂದೆಯ ಕೃಪೆಯಿಂದ ಬಸವಣ್ಣಾ ನಿನ್ನ ಕಂಡೆನು. ನಿನ್ನನ್ನು ಮಡಿವಾಳನನು ನೀನೆಂದೆ ಕಂಡೆನಯ್ಯಾ.
--------------
ಅಲ್ಲಮಪ್ರಭುದೇವರು
ವೇದಂಗಳೆಂಬವು ಬ್ರಹ್ಮನ ಬೂತಾಟ. ಶಾಸ್ತ್ರಂಗಳೆಂಬವು ಸರಸ್ವತಿಯ ಗೊಡ್ಡಾಟ. ಆಗಮಗಳೆಂಬವು ಋಷಿಯ ಮರುಳಾಟ. ಪುರಾಣಗಳೆಂಬವು ಪೂರ್ವದವರ ಗೊಡ್ಡಾಟ (ಒದ್ದಾಟ?) ಇಂತು ಇವನು ಅರಿದವರ ನೇತಿಗಳೆದು ನಿಜದಲ್ಲಿ ನಿಂದಿಪ್ಪಾತನೆ ಗುಹೇಶ್ವರನಲ್ಲಿ ಅಚ್ಚಲಿಂಗೈಕ್ಯನು !
--------------
ಅಲ್ಲಮಪ್ರಭುದೇವರು
ವಸ್ತುಕ ವರ್ಣಕ ತ್ರಿಸ್ಥಾನದ ಮೇಲೆ ನುಡಿವ ನುಡಿಗಳು ಇತ್ತಿತ್ತಲಲ್ಲದೆ ಅತ್ತತ್ತಲಾರು ಬಲ್ಲರು. ಇವರೆತ್ತಲೆಂದರಿಯರು_ಗಿಳಿವಿಂಡುಗೆಡೆವರು ನಿಮ್ಮನೆತ್ತಬಲ್ಲರು ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ವ್ರತಗೇಡಿ ವ್ರತಗೇಡಿ ಎಂಬರು, ವ್ರತ ಕೆಡಲು ಅದೇನು ಹಾಲಂಬಿಲವೆ ? ವ್ರತ ಕರಿದೊ ? ಬಿಳಿದೊ ? ಕಟ್ಟಿದಾತ ಭಕ್ತನಪ್ಪನೆ ? ಕೆಡಹಿದಾತ ವೈರಿಯಪ್ಪನೆ ? ಕಟ್ಟುವುದಕ್ಕೆ ಲಿಂಗವು ಒಳಗಾಗಬಲ್ಲುದೆ ? ಕೆಡಹುವುದಕ್ಕೆ ಲಿಂಗವು ಬೀಳಬಲ್ಲುದೆ ? ಲಿಂಗವು ಬಿದ್ದಡೆ ಭೂಮಿ ಆನಬಲ್ಲುದೆ ? ಲೋಕಾದಿ ಲೋಕಂಗಳುಳಿಯಬಲ್ಲವೆ ? ಪ್ರಾಣಲಿಂಗ ಬಿದ್ದಿತ್ತೆಂಬ ದೂಷಕರ ನುಡಿಯ ಕೇಳಲಾಗದು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ವಸುಧೆಯಿಲ್ಲದ ಬೆಳಸು ರಾಜಾನ್ನ ಹೆಸರಿಲ್ಲದ ಓಗರ, ವೃಷಭ ಮುಟ್ಟದ ಹಯನು, ಬೆಣ್ಣೆಯ ಹೊಸೆವರಿಲ್ಲದೆ ಕಂಡುಂಡೆ. ಶಿಶು ಕಂಡ ಕನಸಿನಂತೆ, ಗುಹೇಶ್ವರನೆಂಬುದು ಹೆಸರಿಲ್ಲದ ಬಯಲು !
--------------
ಅಲ್ಲಮಪ್ರಭುದೇವರು