ಅಂತರಂಗದಲ್ಲಿ ಭವಿಯನೊಳಕೊಂಡು, ಬಹಿರಂಗದಲ್ಲಿ
ಭಕ್ತಿಯನೊಳಕೊಂಡು,
ಆತ್ಮಸಂಗದಲ್ಲಿ ಪ್ರಸಾದವನೊಳಕೊಂಡು, ಇಪ್ಪ ಭಕ್ತರ ಕಾಣೆನಯ್ಯಾ
ನಾನು,
ಇಂತಪ್ಪ ಲಿಂಗೈಕ್ಯರ ಕಾಣೆನಯ್ಯಾ.
ಅಂತರಂಗದಲ್ಲಿ ಸುಳಿದಾಡುವ ತನುಗುಣಾದಿಗಳ, ಮನಗುಣಾದಿಗಳ,
ಪ್ರಾಣಗುಣಾದಿಗಳ ಕಳೆದಲ್ಲಿ ಶರಣರಹರೆ ?
ತನು ಮನ ಧನವ ಕೊಟ್ಟಲ್ಲಿ ಭಕ್ತರಹರೆ ?
ಉಂಬವರ ಕಂಡು ಕೈನೀಡಿದಡೆ ಪ್ರಸಾದಿಗಳಹರೆ ?
ಅಂತರಂಗ ಬಹಿರಂಗ ಆತ್ಮಸಂಗ_ಈ ತ್ರಿವಿಧದ ಭೇದವ
ಗುಹೇಶ್ವರಾ ನಿಮ್ಮ ಶರಣ ಬಲ್ಲ.