ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಊರ ಹೊರಗೊಂದು ದೇಗುಲ, ದೇಗುಲದೊಳಗೊಬ್ಬ ಗೊರತಿ ನೋಡಯ್ಯಾ. ಗೊರತಿಯ ಕೈಯಲ್ಲಿ ಸೂಜಿ, ಸೂಜಿಯ ಮೊನೆಯಲ್ಲಿ ಹದಿನಾಲ್ಕು ಲೋಕ ! ಗೊರತಿಯ, ಸೂಜಿಯ, ಹದಿನಾಲ್ಕು ಲೋಕವ; ಒಂದಿರುಹೆ ನುಂಗಿತ್ತ ಕಂಡೆ !_ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಊರದ ಚೇಳಿನ ಏರದ ಬೇನೆಯಲ್ಲಿ, ಮೂರುಲೋಕವೆಲ್ಲಾ ನರಳಿತ್ತು ! ಹುಟ್ಟದ ಗಿಡುವಿನ ಬಿಟ್ಟ ಎಲೆಯ ತಂದು ಮುಟ್ಟದೆ ಹೂಸಲು; ಮಾಬುದು_ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಊರೊಳಗಣ ಘನಹೇರಡವಿಯೊಳೊಂದು ಬೇರು ಮೇಲು, ಕೊನೆ ಕೆಳಗಾಗಿ ಸಸಿ [ಹುಟ್ಟಿತ್ತು] ಆರೈದು ನೀರನೆರೆದು ಸಲುಹಲಿಕ್ಕೆ, ಅದು ಸಾರಾಯದ ಫಲವಾಯಿತ್ತಲ್ಲಾ ! ಬಾರುಗೊಂಬಿನಲುದುರಿದ ಹಣ್ಣ ಮೆಲಿದವ ಘೋರ ಸಂಸಾರಭವಕ್ಕೆ ಸಿಕ್ಕಿದ. ಬೇರಿಂದಲಾದ ಫಲವ ದಣಿದುಂಡವ, ಊರಿಂದ ಹೊರಗಾದ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಊರ ಮಧ್ಯದ ಕಣ್ಣ ಕಾಡಿನೊಳಗೆ, ಬಿದ್ದೈದಾವೆ ಐದು ಹೆಣನು. ಬಂದು ಬಂದು ಅಳುವರು. ಬಳಗ ಘನವಾದ ಕಾರಣ_ಹೆಣನೂ ಬೇಯದು ಕಾಡೂ ನಂದದು. ಮಾಡ ಉರಿಯಿತ್ತು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಊರಕ್ಕಿ ಊರೆಣ್ಣೆ;_`ಮಾರಿಕವ್ವ ತಾಯೆ ಬಾರೆ, ಕುಮಾರನ ತಲೆಗಾಯಿ' ಎಂಬಂತೆ; ಕಾಡ ಹೂ ಕೈಯ ಲಿಂಗವ ಪೂಜಿಸುವಾತನ ಭಕ್ತನೆಂಬರು, ಅಲ್ಲ. ತಾನು ಲಿಂಗ ತನ್ನ ಮನವೆ ಪುಷ್ಪ. ಪೂಜೆಯ ಪೂಜಿಸುವಾತನೆ ಸದ್ಭಕ್ತನು_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು