ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಏನೆಂದರಿಯರು ಎಂತೆಂದರಿಯರು, ಅರಿವನರಿದೆವೆಂಬರು, ಮರಹ ಮರೆದೆವೆಂಬರು. ಒಂದನರಿದೆನೆಂದಡೆ ಮುಖ ಮೂರಾಯಿತ್ತು. ಮೂರು ಮುಖವ ಏಕಾಗ್ರಹಕವ ಮಾಡಿದಲ್ಲದೆ ಶರಣನಲ್ಲ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಏನೂ ಇಲ್ಲದಠಾವಿನಲ್ಲಿ ನಾ ನೀನೆಂಬುದ ತಾನೆ ತಂದನು. ಇಲ್ಲಾದುದ ಉಂಟಾದುದ ಸಾವಿರವನಾಡಿದಡೇನು ? ಉಂಟಾದುದನು `ಇಲ್ಲ' ಮಾಡಬಲ್ಲಡೆ ಆ `ಇಲ್ಲ'ವೆ ತಾನೆ ಗುಹೇಶ್ವರ !
--------------
ಅಲ್ಲಮಪ್ರಭುದೇವರು
ಏನೂ ಏನೂ ಇಲ್ಲದ ಬಯಲೊಳಗೊಂದು ಬಗೆಗೊಳಗಾದ ಬಣ್ಣ ತಲೆದೋರಿತ್ತು. ಆ ಬಣ್ಣವು ಆ ಬಯಲ ಶೃಂಗರಿಸಲು, ಬಯಲು ಸ್ವರೂಪಗೊಂಡಿತ್ತು. ಅಂತಪ್ಪ ಸ್ವರೂಪಿನ ಬೆಡಗು ತಾನೆ, ನಮ್ಮ ಗುಹೇಶ್ವರಲಿಂಗದ ಪ್ರಥಮ ಭಿತ್ತಿ
--------------
ಅಲ್ಲಮಪ್ರಭುದೇವರು
ಏನೆಂದರಿಯರು ಎಂತೆಂದರಿಯರು, ಬರುಮಾತಿನ ಬೊಮ್ಮವನಾಡುತ್ತಿಪ್ಪರು. ರುದ್ರನ ನೊಸಲ ಕಣ್ಣ ಕಿಚ್ಚಿನೊಳಗೆ ತ್ರಿಪುರವ ಸುಡಲರಿಯದೆ ಕಾಮನ ಕಣ್ಣ ಕಿಚ್ಚಿನೊಳಗೆ ತ್ರಿಪುರವ ಸುಡುತ್ತಿಪ್ಪರು. ಭೂಮಿಯಾಕಾಶವ ಮೆಟ್ಟಿ, ಕಾಮಗುಣಂಗಳ ಕೂಡೆ ಕಾದಿ ಗೆಲಲರಿಯದೆ ನೀಲಗಿರಿಯ ಮೇಲೆ ನಿಂದು ಉಲಿವದ (ಉಲಿಯ?) ಉಯ್ಯಾಲೆಯನಾಡುತ್ತಿಪ್ಪರಯ್ಯಾ. ಗುಹೇಶ್ವರಾ ನಿಮ್ಮನರಿದೆಹೆವೆಂಬವರೆಲ್ಲ ಬರುದೊರೆವೋದರಯ್ಯಾ
--------------
ಅಲ್ಲಮಪ್ರಭುದೇವರು
ಏಳು ತಾಳ[ದ] ಮೇಲೆ ಕೇಳುವ ಸುನಾದ, ಸ್ಥೂಲ ಸೂಕ್ಷ್ಮ ಕೈಲಾಸದ ರಭಸ, ಗಂಗೆವಾಳುಕಸಮಾರುದ್ರರ ತಿಂಥಿಣಿ, ಗಗನಗಂಭೀರದ ಶಿವಸ್ತುತಿಯ ನೋಡನಲೊಡನೆಫ ಪಿಂಡ ಬ್ರಹ್ಮಾಂಡವಾಯಿತ್ತು_ ಅಖಂಡ ನಿರಾಳ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಏನ ಕಂಡಡೇನಯ್ಯಾ, ತನ್ನ ಕಾಣದಾತ ಕುರುಡ. ಏನ ಕೇಳಿದಡೇನಯ್ಯಾ ತನ್ನ ಕೇಳದಾತ ಕಿವುಡ. ಏನ ಮಾತಾಡಿದಡೇನಯ್ಯಾ ತನ್ನ ಮಾತಾಡದಾತ ಮೂಕ. ದಿಟದಿಂತ ತನ್ನ ತಾ ಕಾಣಬೇಕು, ದಿಟದಿಂದ ತನ್ನ ತಾ ಕೇಳಬೇಕು, ದಿಟದಿಂದ ತನ್ನ ತಾ ಮಾತಾಡಬೇಕು. ಇದೆ ತನ್ನ ನೆಲೆ, ಸ್ವಭೂಮಿ, ಸ್ವಸ್ವರೂಪು ಕಾಣಾ_ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಏನೂ ಎನಲಿಲ್ಲದ ಮಹಾಘನದೊಳಗೆ, ತಾನೆಂಬುದನಳಿದ ಪರಮಲಿಂಗೈಕ್ಯಂಗೆ, ಧ್ಯಾನ ಮೌನದ ಹಂಗುಂಟೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು