ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಐದು ಮುಖದ ಅಂಗನೆಗೆ ಹದಿನೈದು ದೇಹ ನೋಡಾ! ಆ ಅಂಗನೆಯ ಮನೆಯೊಳಗಿರ್ದು, ತಾವಾರೆಂಬುದನರಿಯದೆ; ಬಾಯ್ಗೆ ಬಂದಂತೆ ನುಡಿವರು, ಗುಹೇಶ್ವರಾ ನಿಮ್ಮನರಿಯದ ಜಡರುಗಳು.
--------------
ಅಲ್ಲಮಪ್ರಭುದೇವರು
ಐದು ಸರ್ಪಂಗಳಿಗೆ ತನು ಒಂದು, ದಂತವೆರಡು. ಸರ್ಪ ಕಡಿದು ಸತ್ತ ಹೆಣನು ಸುಳಿದಾಡುವುದ ಕಂಡೆ. ಈ ನಿತ್ಯವನರಿಯದಠಾವಿನಲ್ಲಿ, ಭಕ್ತಿಯೆಲ್ಲಿಯದೊ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಐದರ ಮಧ್ಯದ ಕಣ್ಣ ಕಾಡಿನೊಳಗೆ ಬಿದ್ದಿದಾವೆ ಈರೈದು ಹೆಣನು ಬೆಂಬಳುವರು ಬಳಗ ಘನವಾದ ಕಾರಣ ಆ ಹೆಣನು ಬೇಯವು, ಕಾಡೂ ನಂದದು ಮಾಡು ಉರಿಯಿತ್ತು ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಐದು ಬಣ್ಣದ ಗಿಡುವಿಂಗೆ ಐದೆಲೆ ಐದು ಹೂ, ಐದು ಕಾಯಾಯಿತ್ತು. ಮತ್ತೈದರಠಾವಿನಲ್ಲಿ, ಐದು ಹೂವಿನ ಕ್ರಮದಲ್ಲಿ ಹಣ್ಣ ಮೆಲಬಲ್ಲಡೆ, ಗುಹೇಶ್ವರನೆಂಬ ಲಿಂಗವು ತಾನೆ ನೋಡಾ !
--------------
ಅಲ್ಲಮಪ್ರಭುದೇವರು
ಐದಿಂದ್ರಿಯವನರಿತಲ್ಲದೆ, ಒಂದಿಂದ್ರಿಯಕ್ಕೆ ಸಂದ ಗುಣವನರಿಯಬಾರದು. ಆ ಗುಣ ಏಕಮೂರ್ತಿ ತ್ರಿವಿಧರೂಪಾದ ಕಾರಣ. ಪೂಜೆಯೆಂಬುದ ಪುಣ್ಯವೆಂಬ ಭಾವವಿಲ್ಲದೆ ಮಾಡಿದಡೆ ನಮ್ಮ ಗುಹೇಶ್ವರಲಿಂಗಕ್ಕೆ ಅನ್ಯವಿಲ್ಲ ಕಾಣಾ ಚಂದಯ್ಯ
--------------
ಅಲ್ಲಮಪ್ರಭುದೇವರು
ಐದಾನೆಯ ಬೆನ್ನಲ್ಲಿ ಐದು ಒಂಟೆ ಹೋದವು, ಒಂಬತ್ತು ಸಾವಿರ ಕುದುರೆಯನು ಒಂದು ಎಳಗ ಎಯ್ದಿಸುತ್ತಿದ್ದಿತ್ತು. ಅರೆಮರುಳಾದವನ ನೆರೆ ಮರುಳಾದವ ಬಲ್ಲನೆ ? ಕುರುಬ ಕುರಿಯ ಹಾಲ ಕರೆದು ಒಲೆಯ ಮೇಲಿಕ್ಕೆ, ಇಕ್ಕಿದ ಹಾಲ ಬೆಕ್ಕು ಕುಡಿಯಿತ್ತು, ಬೆಣ್ಣೆಯ ಮುಂದಿಟ್ಟುಕೊಂಡಳುತಿರ್ದ ಕಾಣಾ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಐವರ ಸಂಗದಿಂದ ಬಂದೆ ನೋಡಯ್ಯಾ. ಐವರ ಸಂಗದಿಂದ ನಿಂದೆ ನೋಡಯ್ಯಾ. ಈ ಐವರೂ ತಮ್ಮ ತಮ್ಮ ಬಟ್ಟೆಯಲ್ಲಿ ಹೋದರು. ನಾನೊಬ್ಬನೆ ನಿಸ್ಸಂಗಿಯಾಗಿ ಉಳಿದೆನಲ್ಲಾ ! ಗುಹೇಶ್ವರನೆಂಬ ನಿತ್ಯನಿರಂಜನ ರೂಹಿಲ್ಲದ ಘನವ ಕಂಡೆನಯ್ಯಾ.
--------------
ಅಲ್ಲಮಪ್ರಭುದೇವರು
ಐದ ಕಟ್ಟಿ ಐದ ನೆಗಪಿ, ಮನಪವನಧ್ಯಾನ ಭಾವ ದೃಢದಿಂದ ಧ್ಯಾನದಿ ನೋಡಿ; ಕಾಯದ ಗಾಳಿಯ ಸಂಚವ ಶೋಧಿಸಿ, ಒಳಗೆ ಜಾರಿದ ಅಮೃತವನು ವಾಯುಮಂಡಲದಲೆತ್ತಿ, ನಾಭಿಮಂಡಲದಲ್ಲಿ ನುಂಗಿ ಮಾಯಾಮಂಡಲ ತೋರಲರಿಯ ಬಲ್ಲಡೆ ಗುಹೇಶ್ವರಲಿಂಗದಲ್ಲಿ ಆತ ಶಿವಯೋಗಿ
--------------
ಅಲ್ಲಮಪ್ರಭುದೇವರು