ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಚಿನ್ನವನೊರೆಯಬಹುದಲ್ಲದೆ ಬಣ್ಣವನೊರೆಯಬಹುದೆ ? ಹೂವ ಮುಡಿಯಬಹುದಲ್ಲದೆ ಗಂಧವ ಮುಡಿಯಬಹುದೆ ? ಕರ್ಮವ ಮಾಡಬಹುದಲ್ಲದೆ ವಸ್ತುವನರಿಯಬಹುದೆ ? ಗುಹೇಶ್ವರನೆನಬಹುದಲ್ಲದೆ, ಲಿಂಗವು ತಾನಾಗಬಾರದು ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು
ಚಿತ್ತುವೆಂಬ ಬಿತ್ತು ಬಲಿದು ಎರಡಾದಲ್ಲಿ, ಲಿಂಗವೆಂಬ ಕಳೆ ಅಂಕುರಿಸಿ ಮೂರ್ತಿಯಾಯಿತ್ತು. ಆ ಮೂರ್ತಿಯ ಘನತೆಯ ಏನೆಂದೂ ಉಪಮಿಸಬಾರದು ! ನೋಡಿದಡೆ ಮೂರ್ತಿ ಹಿಡಿದಡೆ ಬಯಲು ! ಆ ಮೂರ್ತಿಯೊಳಗದೆ ಈರೇಳು ಲೋಕದ ಪ್ರಾಣಕಳೆ. ಆ ಕಳೆಯ ಬೆಳಗು ತಾನೆ ನಮ್ಮ ಗುಹೇಶ್ವರಲಿಂಗದಲ್ಲಿ ಲೀಲಾಮೂಲದ ಪ್ರಥಮ ಭಿತ್ತಿ.
--------------
ಅಲ್ಲಮಪ್ರಭುದೇವರು
ಚಂದ್ರಮನೊಳಗಣ ಎರಳೆಯ ನುಂಗಿದ ರಾಹುವಿನ ನೋಟವು, ಅಂದಂದಿಗೆ ಬಂದು ಕಾಡಿತ್ತು ನೋಡಾ. ಒಂದರ ತಲೆ, ಒಂದರ ಬಸುರು_ಅಂದಂದಿಗೆ ಬಂದು ಕಾಡಿತ್ತು ನೋಡಾ. ನಂದಿ ನಂದಿಯ ನುಂಗಿ ಬಂದುದು ಮಹೀತಳಕ್ಕಾಗಿ, ಇಂದು, ರವಿಗಡಣವ ನಾನೇನೆಂಬೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಚಿತ್ತ ಶುದ್ಧವಿಲ್ಲದವರಲ್ಲಿ ಮನ ಸಂಚಲ ನಿಲ್ಲದು. ಮನ ಸಂಚಲ ನಿಲ್ಲದವರಲ್ಲಿ ಶಿವಧ್ಯಾನ ಕರಿಗೊಳ್ಳದು. ಶಿವಧ್ಯಾನ ಕರಿಗೊಳ್ಳದವನ ಮಾತು ಸಟೆ. ಗುಹೇಶ್ವರಲಿಂಗವನರಿಯದ ಭ್ರಾಂತಿಯೋಗಿಗಳ ಮನ ಬೇತಾಳನಂತೆ ಕಾಡುವುದು.
--------------
ಅಲ್ಲಮಪ್ರಭುದೇವರು
ಚಿತ್ತದ ಸ್ನೇಹವ ಸಜ್ಜನಕ್ಕರ್ಪಿತವ ಮಾಡೆ; ನಟ್ಟಿದ್ದ ಬೇಟಕ್ಕೆ ತಾಗು_ತಡೆಯುಂಟೆ ಎಲೆ ಮರುಳೆ ? ಆತುರದಲ್ಲಿ ಕಳವಳಿಸಿ, ವ್ಯಾಕುಳದಲ್ಲಿ ಡಾವರಿಸುತ್ತಿಪ್ಪುದೀ ಮನವು. ಈ ಮನವು ಚಿಹ್ನೆದೋರದ ಘನಕ್ಕೆ ಬೆಂಬತ್ತಿ ಬಿಡದಿರಬಲ್ಲಡೆ, ತನ್ಮೂರ್ತಿ ತನ್ನಲ್ಲಿ ಗುಹೇಶ್ವರಲಿಂಗವು !
--------------
ಅಲ್ಲಮಪ್ರಭುದೇವರು
ಚೌದಂತ ಮದಕರಿಯೊಳಡಗಿತ್ತು. ಬೆಳಗಿನ ಬಳಗದ ನವಪಂಜರವೊ ! ಮದಾಳಿಯ ಸುಳುಹಿನ ಸೂಕ್ಷ್ಮಂಗಲ್ಲದೆ. ಭಾವ ಪರಿಮಳವ ಭೇದಿಸಬಾರದು. ಅಳಿ ರತುನವ ನುಂಗಿದ ಪರಿಯೆಂತೊ ? ಸಾಧ್ಯವಾಯಿತ್ತು ಸುಖಸಂಭಾಷಣೆ ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣಂಗೆ.
--------------
ಅಲ್ಲಮಪ್ರಭುದೇವರು
ಚಂದ್ರಮನ ಕಾಂಬಡೆ ಆ ಚಂದ್ರನಿಂದೊದಗಿದ ಬೆಳಗೆ ಮುಖ್ಯ. ಸೂರ್ಯನ ಕಾಂಬಡೆ ಆ ಸೂರ್ಯನಿಂದೊದಗಿದ ಬೆಳಗೆ ಮುಖ್ಯ. ಜ್ಯೋತಿಯ ಕಾಂಬಡೆ ಆ ಜ್ಯೋತಿಯಿಂದೊದಗಿದ ಬೆಳಗೆ ಮುಖ್ಯ. ರತ್ನವ ಕಾಂಬಡೆ ಆ ರತ್ನದಿಂದೊದಗಿದ ಬೆಳಗೆ ಮುಖ್ಯ. ನಮ್ಮ ಗುಹೇಶ್ವರಲಿಂಗವ ಕಾಂಬಡೆ ಆ ಮಹಾವಸ್ತುವಿನ ಪರಮ ಪ್ರಕಾಶದಿಂದೊದಗಿದ ಭಸಿತವೇ ಮುಖ್ಯ ಕಾಣಿರಣ್ಣಾ.
--------------
ಅಲ್ಲಮಪ್ರಭುದೇವರು
ಚಂದ್ರಕಾಂತದ ಗಿರಿಗೆ ಉದಕದ ಸಂಚ, ಸೂರ್ಯಕಾಂತದ ಗಿರಿಗೆ ಅಗ್ನಿಯ ಸಂಚ, ಪರುಷದ ಗಿರಿಗೆ ರಸದ ಸಂಚ. ಬೆರಸುವ ಭೇದವಿನ್ನೆಂತೊ? ಅಪ್ಪುವನು ಅಗ್ನಿಯನು ಪಕ್ವಕ್ಕೆ ತಂದು ಅಟ್ಟುಂಬ ಭೇದವನು ಗುಹೇಶ್ವರ ಬಲ್ಲ.
--------------
ಅಲ್ಲಮಪ್ರಭುದೇವರು