ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಬ್ರಹ್ಮಪಾಶ, ವಿಷ್ಣುಮಾಯೆ ಎಂಬ ಬಲೆಯ ಬೀಸಿ, ಹೊನ್ನು ಹೆಣ್ಣು ಮಣ್ಣು ತೋರಿ, ಮುಕ್ಕಣ್ಣನಾಡಿದ ಬೇಂಟೆಯ. ಆಸೆಯೆಂಬ ಕುಟುಕನಿಕ್ಕಿ, ಹೇಸದೆ ಕೊಂದೆಯಲ್ಲಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಬಂದ ಬಟ್ಟೆಯ ನಿಂದು ನೋಡಲೊಲ್ಲೆ ಕಂದಾ, ಅದೇನು ಸೋಜಿಗವೊ ? ಬಿಂದು ಛಂದವಲ್ಲ ಬಂದ ಪರಿಯನು ಗುಹೇಶ್ವರ ಬಲ್ಲ ಕಂದಾ.
--------------
ಅಲ್ಲಮಪ್ರಭುದೇವರು
ಬೆಂಕಿ ಸುಡಬಲ್ಲಡೆ ಕಲ್ಲು ನೀರು ಮರಂಗಳಲ್ಲಡಗಬಲ್ಲುದೆ ? ಅರಿವು ಶ್ರೇಷ್ಠವೆಂದಡೆ ಕುರುಹಿನಲ್ಲಡಗಿ ಬೇರೊಂದೆಡೆಯುಂಟೆಂದು ನುಡಿವಾಗ ಅದೇತರಲ್ಲಿ ಒದಗಿದ ಅರಿವು ? ಪಾಷಾಣದಲ್ಲಿ ಒದಗಿದ ಪ್ರಭೆಯಂತೆ, ಆ ಪಾಷಾಣ ಒಡೆಯೆ ಆ ಪ್ರಭೆಗೆ ಕುರುಹುಂಟೆ ? ಇಂತೀ ಲೇಸಪ್ಪ ಕುರುಹನರಿಯಬೇಕು ಕಾಣಾ, ನಮ್ಮ ಗುಹೇಶ್ವರನುಳ್ಳನ್ನಕ್ಕ ಅಂಬಿಗರ ಚೌಡಯ್ಯ.
--------------
ಅಲ್ಲಮಪ್ರಭುದೇವರು
ಬಿರುಗಾಳಿ ಬೀಸಿ ಮರ ಮುರಿವಂತಹ ಸುಳುಹ ಸುಳಿಯದೆ, ತಂಗಾಳಿ ಪರಿಮಳದೊಡಗೂಡಿ ಸುಳಿವಂತೆ ಸುಳಿಯಬೇಕು. ಸುಳಿದಡೆ ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದಡೆ ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದು ಜಂಗಮವಾಗಲರಿಯದ, ನಿಂದು ಭಕ್ತನಾಗಲರಿಯದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಬಾರದುದೆಲ್ಲವನು ಹಿಂಗಿ, ಬಂದುದನೆಲ್ಲವನು ನುಂಗಿ, ಆರಿಗೂ ಇಲ್ಲದ ಅವಸ್ಥೆ ಎನಗಾಯಿತ್ತಯ್ಯಾ. ಆ ಅವಸ್ಥೆಯರತು, ನಾನು ನೀನೆಂದಿದ್ದೆ ಕಾಣಾ ಗುಹೇಶ್ವರಯ್ಯಾ.
--------------
ಅಲ್ಲಮಪ್ರಭುದೇವರು
ಬತ್ತೀಸಾಯುಧವನು ಅನಂತ ದಿನ ಸಾಧಿಸಿ ಪಿಡಿದರೂ ಕಾದುವುದು ಒಂದೇ ಕೈದು ಒಂದೇ ದಿನ. ಆ ಹಾಂಗೆ_ಫಲ ಹಲವಾದಡೂ ಅರಿವುದೊಂದೇ ಮನ, ಒಂದೇ ಲಿಂಗ ! ಆ ಮನವು ಆಲಿಂಗದ ನೆಲೆಯಲ್ಲಿ ನಿಂದು ಸ್ಥಲಲೇಪವಾದ ಮತ್ತೆ ಸ್ಥಲವಿಲ್ಲ ನಿಃಸ್ಥಲವಿಲ್ಲ, ನಿಜ ನೀನೇ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಬೆಣ್ಣೆಯ ಕಂದಲ ಕರಗಲಿಟ್ಟಡೆ ಕಂದಲು ಕರಗಿತ್ತು ಬೆಣ್ಣೆ ಉಳಿಯಿತ್ತು ! ತುಂಬಿ ಇದ್ದಿತ್ತು ಪರಿಮಳವಿಲ್ಲ, ಪರಿಮಳವಿದ್ದಿತ್ತು ತುಂಬಿಯಿಲ್ಲ. ತಾನಿದ್ದನು ತನ್ನ ಸ್ವರೂಪವಿಲ್ಲ; ಗುಹೇಶ್ವರನಿದ್ದನು ಲಿಂಗವಿಲ್ಲ
--------------
ಅಲ್ಲಮಪ್ರಭುದೇವರು
ಬ್ರಹ್ಮ ಘನವೆಂದಡೆ ಬ್ರಹ್ಮನ ನುಂಗಿತ್ತು ಮಾಯೆ ವಿಷ್ಣು ಘನವೆಂದಡೆ ವಿಷ್ಣುವ ನುಂಗಿತ್ತು ಮಾಯೆ ರುದ್ರ ಘನವೆಂದಡೆ ರುದ್ರನ ನುಂಗಿತ್ತು ಮಾಯೆ ತಾ ಘನವೆಂದಡೆ ತನ್ನ ನುಂಗಿತ್ತು ಮಾಯೆ ಸರ್ವವೂ ನಿನ್ನ ಮಾಯೆ ! ಒಬ್ಬರನ್ನೊಳಕೊಂಡಿತ್ತೆ ಹೇಳಾ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಬಂ(ಬಿಂ?)ದು ನಿಂದು ಮೊ(ಹೊ?)ಲೆನೀರ ಮಿಂದವರೆಲ್ಲರು ಹೆಂಡತಿಯರಾಗಬಲ್ಲರೆ ? ಬಂದು ನಿಂದು ಸುಳಿದು ಮಾಡುವರೆಲ್ಲರು ಸಂಗನಬಸವಣ್ಣನಂತೆ ಗುಹೇಶ್ವರಲಿಂಗವ ಬಲ್ಲರೆ ?
--------------
ಅಲ್ಲಮಪ್ರಭುದೇವರು
ಬಂದುದನೆಲ್ಲವ ನುಂಗಿ, ಬಾರದುದನೆಲ್ಲವ ನುಂಗಿ, ಆರಿಗಿಲ್ಲದ ಅವಸ್ಥೆ ಎನಗಾಯಿತ್ತು. ಆ ಅವಸ್ಥೆ ಅರತು ನೀನು, ನಾನೆಂದರಿದೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಬೆಲ್ಲದ ಪುತ್ಥಳಿಯ ಕೈಯಲ್ಲಿ ಹಿಡಿದು ಎಲ್ಲಿ ಚುಂಬಿಸಿದಡೂ ಇನಿದಹುದು. ಒಳ್ಳಿಹ ಬೇವಿನ ಹಣ್ಣ ಮೆಲ್ಲನೆ ಚುಂಬಿಸಿದಡೆ ಇನಿದಹುದೆ? ಎಲ್ಲ ವಿದ್ಯೆಯನೂ ಬಲ್ಲೆವೆಂದೆಂಬರು, ಅವರು ಅ(ಸ?)ಲ್ಲದೆ ಹೋದರಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಬಂದೂ ಬಾರದು ಹೊಂದಿಯೂ ಹೊಂದದು, ನಿಂದೂ ನಿಲ್ಲದ ಪರಿಯ ನೋಡಾ ! ಬಿಂದು ನಾದವ ನುಂಗಿತ್ತು, ಮತ್ತೊಂದಧಿಕವುಂಟೆ? ನವಖಂಡ ಪೃಥ್ವಿಯನೊಳಕೊಂಡ ಅಗಮ್ಯ ಸನ್ಮತ ಸುಖವಿರಲು ಗುಹೇಶ್ವರನ ಬೇರೆ ಅರಿಯ(ಅರಸ?)ಲುಂಟೆ?
--------------
ಅಲ್ಲಮಪ್ರಭುದೇವರು
ಬಟ್ಟೆಗೊಂಡು ಹೋಗುತ್ತೊಂದ ಕೊಟ್ಟುಹೋದರೆಮ್ಮವರು. ಎಲ್ಲಿಯದು ಲಿಂಗ ಎಲ್ಲಿಯದು ಜಂಗಮ ? ಎಲ್ಲಿಯದು ಪಾದೋದಕ ಪ್ರಸಾದವಯ್ಯಾ ? ಅಲ್ಲದವರೊಡನಾಡಿ ಎಲ್ಲರೂ ಮುಂದುಗೆಟ್ಟರಯ್ಯಾ. ಅನು ನಿಮ್ಮ ನಂಬಿ ಬಯಲಾದೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಬಲ್ಲತನವನೇರಿಸಿಕೊಂಡು ಅಲ್ಲದಾಟವನಾಡಿದಡೆ ಬಲ್ಲತನಕ್ಕೆ ಭಂಗವಾಯಿತ್ತು. ವ್ಯಸನದಿಚ್ಛೆಗೆ ಹರಿದಾಡುವವರು ಬಲ್ಲಡೆ ಹೇಳಿರೆ ? ಕಾಮ ಕ್ರೋಧ ಲೋಭ ಮೋಹ ಮದ ಮತ್ಸರದಿಚ್ಛೆಗೆ ಹರಿದು ಹಂದಿಯೊಡನಾಡಿದ ಕಂದಿನಂತಾದರು. ಇನ್ನು ಬಲ್ಲರೆ ಗುಹೇಶ್ವರಾ ಮಾಯಾಮುಖರು ನಿಮ್ಮನು ?
--------------
ಅಲ್ಲಮಪ್ರಭುದೇವರು
ಬಿಂದುವೆ ಪೀಠವಾಗಿ, ನಾದವೇ ಲಿಂಗವಾದಡೆ ಅದು ಭಿನ್ನಲಿಂಗ ನೋಡಾ. ಕಳೆ ಎಂಬ ಪೂಜೆ ನಿರ್ಮಾಲ್ಯವಾಗಿ, ನಾದಬಿಂದುಕಳಾತೀತ ನೋಡಾ ಮಹಾಘನವು. ಅಲ್ಲಿ ಇಲ್ಲಿ ಸಿಲುಕಿದ ಅಚಲವಪ್ಪ ನಿರಾಳವ ಪ್ರಣವರೂಪೆಂದು ಹೆಸರಿಡಬಹುದೆ ? ನಮ್ಮ ಗುಹೇಶ್ವರನ ನಿಲುವು `ನಿಶ್ಯಬ್ದಂ ಬ್ರಹ್ಮ ಉಚ್ಯತೇ' ಎಂಬುದನರಿಯಾ ಸಿದ್ಧರಾಮಯ್ಯಾ ?
--------------
ಅಲ್ಲಮಪ್ರಭುದೇವರು
ಬಯಕೆ ಎಂಬುದು ದೂರದ ಕೂಟ, `ಬಯಸೆ' ಎಂಬುದು ಕೂಟದ ಸಂದು. ಈ ಉಭಯವೂ ಕಪಟ ಕನ್ನಡವಲ್ಲದೆ ಸಹಜವಲ್ಲ. ಕೂಡಿ ಕಂಡ ಪರಿಯೆಂತು ಹೇಳಾ ಇನ್ನು ಲಿಂಗೈಕ್ಯವನು ? ಕೂಪಠಾವಿನಲ್ಲಿ ಪರವಶವಾದೆನೆಂಬ ಮಾತ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗ ?
--------------
ಅಲ್ಲಮಪ್ರಭುದೇವರು
ಬಾಯೆ ಭಗವಾಗಿ ಕೈಯೆ ಇಂದ್ರಿಯವಾಗಿ ಹಾಕುವ ತುತ್ತುಗಳೆಲ್ಲಾ ಬಿಂದು ಕಾಣಿರೊ ! ಪ್ರಥಮವಿಷಯವಿಂತಿರಲಿಕೆ, ಗುಹೇಶ್ವರ ಏಕೋ ಅದ್ವೈತ !
--------------
ಅಲ್ಲಮಪ್ರಭುದೇವರು
ಬೆಳಗಪ್ಪ ಜಾವದಲ್ಲಿ ಲಿಂಗವ ಮುಟ್ಟಿ ಪೂಜಿಸಿ ಪ್ರಾತಃಕಾಲದಲ್ಲಿ ಜಂಗಮದ ಮುಖದ ನೋಡಿದಡೆ, ಹುಟ್ಟಿದೇಳು ಜನ್ಮದ ಪಾಪ ಹಿಂಗುವುದು. ಅದೆಂತೆಂದಡೆ: `ಸೂರ್ಯೋದಯವೇಲಾಯಾಂ ಯಃ ಕರೋತಿ ಶಿವಾರ್ಚನಂ ಋಣತ್ರಯವಿನಿರ್ಮುಕ್ತೋ ಯಸ್ಯಾಂತೇ ಬ್ರಹ್ಮ ತತ್ಪದಂ '_ಎಂದುದಾಗಿ ಇಂತಪ್ಪ ಸತ್ಕ್ರೀ ಇಲ್ಲದವರನೊಲ್ಲ ನಮ್ಮ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಬಲ್ಲೆನು, ಒಲ್ಲೆ ಮರ್ತ್ಯದ ಹಂಗ, ಹಿಂದಣ ಮರವೆಯಿಂದ ಬಂದು ನೊಂದೆ, ಸಾಕು. ಇನ್ನು ಅರಿದೆ, ತ್ರಿವಿಧಪಾಶವ ಹರಿದೆ. ಗುಹೇಶ್ವರಾ, ಇನ್ನು ಮರ್ತ್ಯದ ಸುಖವ ಮನದಲ್ಲಿ ನೆನೆದೆನಾದಡೆ ನಿಮ್ಮಾಣೆ ನಿಮ್ಮ ರಾಣಿವಾಸದಾಣೆಯಯ್ಯಾ.
--------------
ಅಲ್ಲಮಪ್ರಭುದೇವರು
ಬಣ್ಣವುಂಡ ಚಿನ್ನದಂತೆ, ಬೆಣ್ಣೆ ಉಂಡ ಘೃತದಂತೆ, ಪ(ಸ್ವ?)ರವುಂಡ ಶಬ್ದದಂತೆ, ಪರಿಮಳವುಳ್ಳ ಪುಷ್ಪದಂತೆ, ಗುಹೇಶ್ವರಲಿಂಗದಲ್ಲಿ ಹೊರೆಯಿಲ್ಲದಿರ್ಪ ಸಂಗನಬಸವಣ್ಣನ ಭಕ್ತಿಯಾಚಾರದ ಮಹಾತ್ಮೆಯೆಂತು ಪೇಳಾ ಮಡಿವಾಳ ಮಾಚಯ್ಯಾ.
--------------
ಅಲ್ಲಮಪ್ರಭುದೇವರು
ಬಲ್ಲ ಹಿರಿಯರೆನಿಸಿಕೊಂಡು ಎಲ್ಲರನು ಕೂಡಿಕೊಂಡು ಹಳ್ಳಿ ಹಿರಿಯರು ಪಟ್ಟಣದಲ್ಲಿ ತಿರಿದುಂಡು ಅಲ್ಲದಾಟವನಾಡಿದಡೆ ತಮ್ಮ ಬಲ್ಲತನಕ್ಕೆ ಭಂಗವಾಯಿತ್ತು. ಅಶನ, ವ್ಯಸನ, ಹಸಿವು, ತೃಷೆ, ನಿದ್ರೆ ಇಚ್ಛೆಗೆ ಹರಿದಾಡುವರೆಲ್ಲ ಇನ್ನು ಬಲ್ಲರೆ ಹೇಳಿರೆ ! ಅನಂತ ಮೇಳಾಪದಚ್ಚಗೋಷಿ*ಯ ಭಂಡರೆಲ್ಲ ಇನ್ನು ಬಲ್ಲರೆ, ಹೇಳಿರೆ ! ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರದಿಚ್ಛೆಗೆ ಹರಿದಾಡುವ ಹಂದಿಗಳೆಲ್ಲ ನಾಯನೊಡನಾಡಿದ ಕಂದನಂತಾಯಿತ್ತು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಬಸವಣ್ಣ ನಿನ್ನ ಹೊಗಳತೆ ಅಂತಿರಲಿ, ಎನ್ನ ಹೊಗಳತೆ ಅಂತಿರಲಿ, ಗುರುವಾಗಬಹುದು ಲಿಂಗವಾಗಬಹುದು ಜಂಗಮವಾಗಬಹುದು, ಇಂತೀ ತ್ರಿವಿಧವೂ ಆಗಬಹುದು. ನಿನ್ನ ಆಚಾರಕ್ಕೆ ಪ್ರಾಣವಾಗಿ, ಎನ್ನ ಜ್ಞಾನಕ್ಕೆ ಆಚಾರವಾಗಿ ಈ ಉಭಯ ಸಂಗದ ಸುಖದ ಪ್ರಸನ್ನಕ್ಕೆ ಪರಿಣಾಮಿಯಾಗಿ ಬಂದ ಘನಮಹಿಮನು ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣನಾಗಬಾರದು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಬಸಿರೊಳಗಣ ಕೂಸಿಂಗ ಬೇರೆ ಊಟ ಬೇರೆ ಮೀಹ ಉಂಟೆ ? ಜ್ಞಾನವೆಂಬ ಗರ್ಭದೊಳಗೆ ಲಿಂಗವೆಂಬ ಶಿಶುವಿರಲು ಬೇರೆ ಕೊಡುವ ಕೊಂಬ ಪರಿಯೆಂತೊ ? ದೇಹದೊಳಗಿನ ಪ್ರಾಣವ ಬೇರೆ ಮಾಡಿ ಭೋಗಿಸಲುಂಟೆ ? ಅನುಮಾನ ಅಳಿದು ಮಹದಲ್ಲಿ ಮನ ಮುಸುಕಿದ ಬಳಿಕ ಭಿನ್ನವ ಮಾಡಲುಂಟೆ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಬಿಸಿಲೆಂಬ ಗುರುವಿಂಗೆ ನೆಳಲೆಂಬ ಶಿಷ್ಯ. ನಿರಾಳಲಿಂಗಕ್ಕೆ ಬಯಲೆ ಸೆಜ್ಜೆ, ವಾಯುವೆ ಶಿವದಾರ, ಬೆಳಗೆ ಸಿಂಹಾಸನ. ಅತ್ತಲಿತ್ತ ಚಿತ್ತವ ಹರಿಯಲೀಯದೆ, ಮಜ್ಜನಕ್ಕೆರೆದು ಸುಖಿಯಾದೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಬಟ್ಟೆಯ ಬಡಿವ ಕಳ್ಳಂಗೆ, ಬೇಹು ಸಂದು ಕಳವು ದೊರಕಿದಂತಾಯಿತ್ತು. ಕುರುಡನು ಎಡಹುತ್ತ ತಡಹಿ ಹಿಡಿದು ಕಂಡಂತಾಯಿತ್ತು. ನಿರ್ಧನಿಕ ಧನದ ಬಯಕೆಯಲ್ಲಿ ನಡೆವುತ್ತ ಎಡಹಿದ ಕಲ್ಲು ಪರುಷವಾದಂತಾಯಿತ್ತು. ಅರಸುವಂಗೆ ಅರಿಕೆ ತಾನಾದಂತಾಯಿತ್ತು. ಎಲೆ ಗುಹೇಶ್ವರಾ ನೀನು ಎನಗೆ ದೊರಕುವುದೆಂಬುದು, ನಾ ಮುನ್ನ ಮಾಡಿದ ಸುಕೃತದ ಫಲ ! ಏನ ಬಣ್ಣಿಪೆ ಹೇಳಾ ?
--------------
ಅಲ್ಲಮಪ್ರಭುದೇವರು

ಇನ್ನಷ್ಟು ...