ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ರೂಪ[ನೆ] ಕಂಡರು, ನಿರೂಪ[£] ಕಾಣರು. ಅನುವನೆ ಕಂಡರು, ತನುವನೆ ಕಾಣರು. ಆಚಾರವನೆ ಕಂಡರು, ವಿಚಾರವನೆ ಕಾಣರು. ಗುಹೇಶ್ವರಾ_ನಿಮ್ಮ ಕುರುಹನೆ ಕಂಡರು, ಕೂಡಲರಿಯದೆ ಕೆಟ್ಟರು !
--------------
ಅಲ್ಲಮಪ್ರಭುದೇವರು
ರೂಪಿಂಗೆ ಬಂದು ನಿಂದುದು ಮಾತಿಂಗೆ ಒಡಲಾಯಿತ್ತು. ಮಾತಿಂಗೆ ವೇಧಿಸಿದ ಮನ ರಾಟಾಳದ ಕುಂಭದಂತೆ. ಅದ ನೇತಿಗಳೆದು ನಿಂದಲ್ಲಿ ಗುಹೇಶ್ವರಲಿಂಗ ತಾನೆ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ರಸದ ಬಾವಿಯ ತುಡುಕಬಾರದು, ಕತ್ತರಿವಾಣಿಯ ದಾಂಟಿದವಂಗಲ್ಲದೆ. ಪರುಷವಿದೆ ಕಬ್ಬುನವಿದೆ ಸಾಧಿಸಬಲ್ಲವಂಗೆ. ಶ್ರೀಶೈಲದುದಕವ ಧರಿಸಬಾರದು ಗುಹೇಶ್ವರಾ_ ನಿಮ್ಮ ಶರಣಂಗಲ್ಲದೆ.
--------------
ಅಲ್ಲಮಪ್ರಭುದೇವರು
ರೂಪಿಂಗೆ ಕೇಡುಂಟು ನಿರೂಪಿಂಗೆ ಕೇಡಿಲ್ಲ. ರೂಪು ನಿರೂಪನೊಡಗೂಡುವ ಪರಿ ಎಂತು ಹೇಳಾ ? ಅಸಂಬಂಧ ಸಂಬಂಧವಾಗಿ ಇದೆ. ದೇಹ ಇಂದ್ರಿಯವೆಂಬ ಜಾತಿಸೂತಕವಿರಲು ಗುಹೇಶ್ವರಲಿಂಗವ ಮುಟ್ಟಬಾರದು ಕೇಳವ್ವಾ.
--------------
ಅಲ್ಲಮಪ್ರಭುದೇವರು
ರತ್ನದೀಪ್ತಿಯಾದಡೇನು ? ಬಂಧಿಸಿದ ಕುಂದಣದಲ್ಲಿಯೆ ಸಂದಿರಬೇಕು. ಸ್ವಾದುರಸದ ರುಚಿಯನೀವ ಫಲವೆಂದಡೇನು ವೃಕ್ಷವಿಲ್ಲದನ್ನಕ್ಕರ ? ಚಿತ್ರಸೌಂದರ್ಯ ನೋಟಕೆ ಸುಖವೆಂದಡೇನು ಭಿತ್ತಿಯ ಪಟ ಮುಖ್ಯಸ್ಥಾನದಲ್ಲಿಲ್ಲದನ್ನಕ್ಕರ ? ಅಂಜನ ಸಿದ್ಧಿಯಿಂ ನಿಧಾನವ ಕಂಡಡೇನು ಸಾಧನ ಕ್ರೀಯಿಂದ ಸಾಧ್ಯವ ಮಾಡಿಕೊಳ್ಳದನ್ನಕ್ಕರ ? ಇದು ಕಾರಣ_ ಕಾಯದ ಕರಸ್ಥಲಕ್ಕೆ ಇಷ್ಟಲಿಂಗಸಾಹಿತ್ಯವಿಲ್ಲದಿದ್ದಡೆ, ನಿರವಯವಾದ ಜ್ಞಾನಯೋಗ ಕೂಟ ಸಾಧ್ಯವಾಗದು. ಇದು ಕಾರಣ_ ಕ್ರಿಯಾಲಿಂಗಸಂಬಂಧವೆ ಭಕ್ತಂಗೆ ಮತವು, ಇದೇ ಕಾರಣ ದೇಹಶೌಚವು ! ನಮ್ಮ ಗುಹೇಶ್ವರನ ಶರಣರ ಮನ ಒಪ್ಪುವಂತೆ ಸಿದ್ಧರಾಮಯ್ಯಂಗೆ ಲಿಂಗಸಾಹಿತ್ಯವ ಮಾಡಾ ಚೆನ್ನಬಸವಣ್ಣಾ.
--------------
ಅಲ್ಲಮಪ್ರಭುದೇವರು
ರಂಜಕರೆಲ್ಲರು ರತ್ನವ ಕೆಡಿಸಿ ಅಂಧಕಾರದಲ್ಲಿ ಬಂದರಸುವರು. ಅದರಂದ ತಿಳಿಯದು ಛಂದ ತಿಳಿಯದು. ಬಂದ ಬಟ್ಟೆಯಲಿ ತೊಳಲುವರು. ಸಂದೆಗವಿಡಿದು ಸಂದವರೆಲ್ಲ ಅಂದಂದಿಗೆ ದೂರ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ರಕ್ಕಸಿಗಿಬ್ಬರು ಮಕ್ಕಳು, ತೊಟ್ಟಿಲ ಮೇಲೈವರು, ರಕ್ಕಸಿ ಬಾಣತಿಯಾದಡೆ ಮಕ್ಕಳಿಗಿನ್ನೆಂತೊ ! ತೊಟ್ಟಿಲ ತೂಗುವೆ ಜೋಗುಳವಾಡುವೆ ರಕ್ಕಸಿಬಾಣತಿಯ ತೊಟ್ಟಿಲು ನುಂಗಿತ್ತು_ಇದೇನು ಹೇಳಾ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ರಂಗ ಒಂದೇ ಕಂಭ ಒಂದೇ ದೇವರೊಂದೇ ದೇಗುಲ ಒಂದೇ. ಗುಹೇಶ್ವರಾ ನಿಮ್ಮ ಮನ್ನಣೆಯ ಶರಣರ ದೇವರೆಂದೆಂಬೆ.
--------------
ಅಲ್ಲಮಪ್ರಭುದೇವರು
ರವಿಕಾಂತಿಯ ಪ್ರಭೆ ಪಾಷಾಣವ ಕೂಡಿ ರತ್ನವೆನಿಸಿಕೊಂಬಂತೆ ಅರಿವ ಜ್ಞಾನ ಮಾಡುವ ಸತ್ಕ್ರೀಯಿಂದಲ್ಲದೆ ಆ ಸಾಕಾರದ ಪಟಲವು ಹರಿಯದು. ಈ ರವಿಕಾಂತಿಯ ಪ್ರಭೆಯಿಲ್ಲದಿದ್ದಡೆ ಆ ಪಾಷಾಣಕ್ಕೆ ರತ್ನವೆಂಬ ಕುಲ ಮುನ್ನವೇ ಇಲ್ಲ. ರವಿಕಾಂತಿಯ ಪ್ರಭೆಯಡಗೂದಕ್ಕೆ ಪಾಷಾಣ ಹೇಂಗೆ ಅರಿವಡಗೂದಕ್ಕೆ ಕುರುಹೆಂಬ ನಾಮ ಹಾಂಗೆ. ಆ ಉಭಯವಡಗಿ ಕುರುಹಿಲ್ಲದಿದ್ದಡೆ ಮತ್ತೆ ನಮ್ಮ ಗುಹೇಶ್ವರನೆಂಬ ಮಾತಿನ ಕುರುಹಿಲ್ಲದಿರಬೇಕು. ಕಾಣಾ ಎಲೆ ಅಂಬಿಗರ Zõ್ಞಡಯ್ಯ.
--------------
ಅಲ್ಲಮಪ್ರಭುದೇವರು
ರುದ್ರನೆಂಬಾತನೊಬ್ಬ ಗಣೇಶ್ವರನು, ಭದ್ರನೆಂಬಾತನೊಬ್ಬ ಗಣೇಶ್ವರನು. ಶಂಕರನೆಂಬಾತನೊಬ್ಬ ಗಣೇಶ್ವರನು, ಶಶಿಧರನೆಂಬಾತನೊಬ್ಬ ಗಣೇಶ್ವರನು. ಪೃಥ್ವಿಯೆ ಪೀಠ ಆಕಾಶವೆ ಲಿಂಗ_ಅಂತಹ ಆತನೊಬ್ಬ ಗಣೇಶ್ವರನು. ಬಲ್ಲಾಳನ ವಧುವ ಬೇಡಿದಾತನೊಬ್ಬ ಗಣೇಶ್ವರನು. ಸಿರಿಯಾಳನ ಮಗನ ಭಿಕ್ಷವ ಬೇಡಿದಾತನೊಬ್ಬ ಗಣೇಶ್ವರನು. ಬ್ರಹ್ಮಕಪಾಲ ವಿಷ್ಣುಕಂಕಾಳವನಿಕ್ಕಿ ಆಡುವಲ್ಲಿ ನೀಲಕÀಂಠನೆಂಬಾತನೊಬ್ಬ ಗಣೇಶ್ವರನು._ ಇವರೆಲ್ಲರು ನಮ್ಮ ಗುಹೇಶ್ವರಲಿಂಗದೊಳಡಗಿಪ್ಪರು
--------------
ಅಲ್ಲಮಪ್ರಭುದೇವರು
ರೂಪೆಂದಡೆ ನಷ್ಟ, ನಿರೂಪೆಂದಡೆ ಶೂನ್ಯ. ರೂಪು ನಿರೂಪನತಿಗಳೆದ ರೂಪ ಕಾಬಡೆ ಗುಹೇಶ್ವರಲಿಂಗದಲ್ಲಿ ತನ್ನ ರೂಪನತಿಗಳದು ಕಾಣಬೇಕು ಕಾಣಾ ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು
ರಾಜಸಭೆ ದೇವಸಭೆಯೊಳಗೆ, ದೇವ_ರಾಜ_ಪೂಜಕರೆಲ್ಲಾ ಮುಖ್ಯರಿಗೆ, ಗುರುವಿನ ಕರುಣ ! ಇದ ಬಲ್ಲರೆ ಅಯ್ಯಾ ಪೂಜಕರೆಲ್ಲರು ? ಇಂತಹ ಪರಿಗಳ ಕಂಡು ಬೆರಗಾದೆ, ಗುಹೇಶ್ವರಾ_ಇವರೆಲ್ಲ ಸಂಸಾರವ್ಯಾಪಕರು.
--------------
ಅಲ್ಲಮಪ್ರಭುದೇವರು
ರಾಗವಡಗಿ ತಾಮಸ ನಿಂದು, ಆಹಂಕಾರದ ಗಿರಿ ಉಡುಗಿ, ಮಾತಿನ ಬಣವೆಯ ಮೆದೆಯ ಸುಟ್ಟುರುಹದೆ, ಕಾಯ ಕರ್ಮದಲ್ಲಿ ಸವೆಯುತ್ತ, ಜೀವ ಸಕಲ ಸಂಸಾರದಲ್ಲಿ ನೋಯುತ್ತ [ಇದ್ದಡೆ] ಮತ್ತೆ ಭಾವಶುದ್ಧವುಂಟೆ ಗುಹೇಶ್ವರಲಿಂಗಕ್ಕೆ ?
--------------
ಅಲ್ಲಮಪ್ರಭುದೇವರು
ರಾತ್ರಿಯೆಂಬ ಹುತ್ತಿನೊಳಗೆ ನಿದ್ರೆಯೆಂಬ ಕಾಳೋರಗ, ಹೆಡೆಯನೆತ್ತಿ ಆಡಿ ಕಚ್ಚಲೊಡನೆ ಅಂಜನಸಿದ್ಧರ ಅಂಜನ ಕರಗಿತ್ತು, ಘುಟಿಕಾಸಿದ್ಧರ ಘುಟಿಕೆ ಉರುಳಿತ್ತು ಯಂತ್ರಿಗಳ ಯಂತ್ರ ಅದ್ದಿ ಹೋಯಿತ್ತು, ಮಂತ್ರಿಗಳ ಮಂತ್ರ ಮರೆತು ಹೋಯಿತ್ತು ಔಷಧಿಕರ ಔಷಧವನು ಆಳಿಗೊಂಡಿತ್ತು, ಸರ್ವ ವಿದ್ಯಾಮುಖದ ಜ್ಯೋತಿ ನಂದಿತ್ತು, ಇದರ ವಿಷವ ಪರಿಹರಿಸುವರನಾರನೂ ಕಾಣೆ. ಈ ರಾಹುವಿನ ವಿಷಯದಲ್ಲಿ ತ್ರಿಭುವನವೆಲ್ಲ ಮೂರ್ಛಿತವಾಗುತ್ತಿಹುದು ಗುಹೇಶ್ವರಾ
--------------
ಅಲ್ಲಮಪ್ರಭುದೇವರು