ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಸಹಜದಿಂದ ನಿರಾಲಂಬವಾಯಿತ್ತು, ನಿರಾಲಂಬದಿಂದ ನಿರಾಳವಾಯಿತ್ತು. ನಿರಾಳದಿಂದ ನಿರವಯವಾಯಿತ್ತು, ನಿರವಯದಿಂದ ಅನಾದಿಯಾಗಿತ್ತು. ಅನಾದಿಯಲ್ಲಿ ಮೂರ್ತಿಯಾದನೊಬ್ಬ ಶರಣ. ಆ ಶರಣನ ಮೂರ್ತಿಯಿಂದ ಸದಾಶಿವನಾದ, ಆ ಸದಾಶಿವನ ಮೂರ್ತಿಯಿಂದ ಶಿವನಾದ, ಆ ಶಿವನ ಮೂರ್ತಿಯಿಂದ ರುದ್ರನಾದ, ಆ ರುದ್ರನ ಮೂರ್ತಿಯಿಂದ ವಿಷ್ಣುವಾದ. ಆ ವಿಷ್ಣುವಿನ ಮೂರ್ತಿಯಿಂದ ಬ್ರಹ್ಮನಾದ. ಆ ಬ್ರಹ್ಮನ ಮೂರ್ತಿಯಿಂದಾದವು ಸಕಲ ಜಗತ್ತುಗಳೆಲ್ಲಾ_ ಇವರೆಲ್ಲ ನಮ್ಮ ಗುಹೇಶ್ವರನ ಕರಸ್ಥಲದ ಹಂಗಿನಲ್ಲಿ ಹುಟ್ಟಿ ಬೆಳೆದರು
--------------
ಅಲ್ಲಮಪ್ರಭುದೇವರು
ಸಚರಾಚರವೆಂಬುದೊಂದು ಕಿಂಚಿತ್ತು. ಚತುರ್ಯುಗವೆಂಬುದೊಂದು ಕಿಂಚಿತ್ತು. ಅಪ್ಪುದೆಂಬುದೊಂದು ಕಿಂಚಿತ್ತು, ಆಗದೆಂಬುದೊಂದು ಕಿಂಚಿತ್ತು. ತಾನು ಶುದ್ಧವಾದ ಶರಣಂಗೆ ಗುಹೇಶ್ವರನೆಂಬುದೊಂದು ಕಿಂಚಿತ್ತು.
--------------
ಅಲ್ಲಮಪ್ರಭುದೇವರು
ಸಜ್ಜನಸನ್ನಹಿತವಾದ ಭಕ್ತಿ, ಹೊತ್ತಿಗೊಂದು ಪರಿಯುಂಟೆ ಹೇಳಾ ? ಒಮ್ಮೆ ಅಹಂಕಾರ ಒಮ್ಮೆ ಕಿಂಕಿಲವೆ ? ಮನಕ್ಕೆ ಮನ ಸಾಕ್ಷಿಯಾಗಿ ಮಾಡುವ ಭಕ್ತನಲ್ಲಿ ಗುಹೇಶ್ವರನಿಪ್ಪನಲ್ಲದೆ, ಪ್ರಪಂಚಿನೊಳಗಿಲ್ಲ ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಸುಖವಿಲ್ಲ ಸೂಳೆಗೆ ಪಥವಿಲ್ಲ ಶೀಲಕ್ಕೆ ಮಾಡಲಾಗದು ನೇಮವ, ನೋಡಲಾಗದು ಶೀಲವ. ಸತ್ಯವೆಂಬುದೆ ಸತ್‍ಶೀಲ,_ಗುಹೇಶ್ವರಲಿಂಗವನರಿಯ ಬಲ್ಲಂಗೆ !
--------------
ಅಲ್ಲಮಪ್ರಭುದೇವರು
ಸನಕ ಸನಂದಾದಿ ಮುನಿಜನಂಗಳೆಲ್ಲರೂ, ಭಸ್ಮಾಂಗಿಗಳೆಲ್ಲರೂ_ ಇವರು ಸತ್ಯರೆಂಬುದು ಹುಸಿ, ನಿತ್ಯರೆಂಬುದು ಹುಸಿ, ಸತ್ತರೆಂಬುದು ದಿಟ ಗುಹೇಶ್ವರಾ !
--------------
ಅಲ್ಲಮಪ್ರಭುದೇವರು
ಸತ್ತು ಹುಟ್ಟಿ ಕೆಟ್ಟವರೆಲ್ಲರು, ದೇವಲೋಕಕ್ಕೆ ಹೋದರೆಂಬ ಬಾಲಭಾಷೆಯ ಕೇಳಲಾಗದು. ಸಾಯದ ಮುನ್ನ ಸ್ವಯವನರಿದಡೆ ದೇವನೊಲಿವ ನಮ್ಮ ಗುಹೇಶ್ವರನು
--------------
ಅಲ್ಲಮಪ್ರಭುದೇವರು
ಸೃಷ್ಟಿಯ ಮೇಲಣ ಕಣಿಯ ತಂದು, ಅಷ್ಟತನುವಿನ ಕೈಯಲ್ಲಿ ಕೊಡಲು, ಅಷ್ಟತನು ತಪ್ಪಿ ಸೃಷ್ಟಿಯ ಮೇಲೆ ಬಿದ್ದಡೆ_ ಕೆಟ್ಟನಲ್ಲಾ, ಅನಾಚಾರಿಯೆಂದು ಮುಟ್ಟರು ನೋಡಾ, ಮುಟ್ಟದ ಭೇದವನು, ವಿಖಂಡಿಸಿದ ಭಾವವನು; ಭಾವವ್ರತಗೇಡಿಗಳು ತಾವೆತ್ತ ಬಲ್ಲರು ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಸರ್ವಶೂನ್ಯ ಆದಿ ಅನಾದಿ ಭಕ್ತಸ್ಥಲ. ನಾದ ಬಿಂದು ಮಹೇಶ್ವರಸ್ಥಲ. ಕಳೆ ಬೆಳಗು ಪ್ರಸಾದಿಸ್ಥಲ. ಅರಿವು ನಿರವಯವು ಪ್ರಾಣಲಿಂಗಿಸ್ಥಲ. ಜ್ಞಾನ ಸುಜ್ಞಾನ ಶರಣಸ್ಥಲ. ಭಾವವಿಲ್ಲದ ಬಯಲು ಬಯಲಿಲ್ಲದ ಭಾವ ಆಗಮ್ಯದ ಐಕ್ಯಸ್ಥಲ_ ಇಂತೀ ಷಡುಸ್ಥಲದ ಕೊರಡ ಮೆಟ್ಟಿ ನಿಂದಂಗೆ ಹೆಸರಿಲ್ಲ ಕುರುಹಿಲ್ಲ ತನಗೆ ತಾನಿಲ್ಲ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಸತ್ಯವೂ ಇಲ್ಲ, ಅಸತ್ಯವೂ ಇಲ್ಲ, ಸಹಜವೂ ಇಲ್ಲ, ಅಸಹಜವೂ ಇಲ್ಲ, ನಾನೂ ಇಲ್ಲ, ನೀನೂ ಇಲ್ಲ. `ಇಲ್ಲ' `ಇಲ್ಲ' ಎಂಬುದು ತಾನಿಲ್ಲ ಗುಹೇಶ್ವರನೆಂಬುದು ತಾ ಬಯಲು !
--------------
ಅಲ್ಲಮಪ್ರಭುದೇವರು
ಸೃಷ್ಟಿಗೆ ಹುಟ್ಟಿದ ಕಲ್ಲು, ಕಲ್ಲುಕುಟಿಕನಿಂದ ಮೂರ್ತಿಯಾಗಿ ಮಂತ್ರಕ್ಕೆ ಲಿಂಗವಾಯಿತಲ್ಲಾ ಇವರಿಗೆ ಹುಟ್ಟಿದ ಕೂಸ ಲಿಂಗವೆಂದು ಕೈವಿಡಿವ ವ್ರತಗೇಡಿಗಳನೇನೆಂಬೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಸೆರಗ ಹಿಡಿದನು ಸೀರೆಯ ಹರಿದನು. ಹುಟ್ಟ ಮುರಿದನು ಕಂದಲನೊಡೆದನು. ಭಂಡನವ್ವಾ ಲಜ್ಜೆಭಂಡನವ್ವಾ ಕಂಡಡೆ ನುಡಿಸದಿರು ಎಲೆ ಮಾಯಾದೇವಿ. ಆಯುಷ್ಯ ಹಿರಿದು ಭವಿಷ್ಯ ಕಿರಿದು, ಭವಗೆಟ್ಟು ಹೋದ ಗುಹೇಶ್ವರ ಅಲ್ಲಯ್ಯಂಗೆ ಮೂಗಿಲ್ಲ ತಂಗಿ
--------------
ಅಲ್ಲಮಪ್ರಭುದೇವರು
ಸಕಲ ಭುವನಾದಿಭುವನಂಗಳಿಗೆ ತಂದೆ, ಸಕಲದೇವಾಧಿದೇವರ್ಕಳಿಗೆ ತಂದೆ. ಭವಭವದಲ್ಲಿ ನೀನೆನ್ನ ತಂದೆ. ಗುಹೇಶ್ವರಲಿಂಗ, ನಿರಾಳದಲ್ಲಿ ನೀನೆನ್ನ ತಂದೆ.
--------------
ಅಲ್ಲಮಪ್ರಭುದೇವರು
ಸುಳಿಯ ಬಲ್ಲಡೆ ಸುಳುಹೆ ಲೇಸಯ್ಯಾ. ಗಮನವಿಲ್ಲದೆ ಸುಳಿಯ ಬಲ್ಲಡೆ, ನಿರ್ಗಮನಿಯಾಗಿ ನಿಲ್ಲಬಲ್ಲಡೆ, ಅದಕ್ಕದೆ ಪರಿಣಾಮ ಅದಕ್ಕದೆ ಸಂತೋಷ. ಗುಹೇಶ್ವರಲಿಂಗದಲ್ಲಿ ಅವರ ಜಗದಾರಾಧ್ಯರೆಂಬೆ.
--------------
ಅಲ್ಲಮಪ್ರಭುದೇವರು
ಸರ್ವಸುಯಿಧಾನಿ ಎಂದೆನಿಸಿಕೊಳ್ಳಬಲ್ಲಡೆ, ಬಂದ ಕಾಮ ಕ್ರೋಧವ ಲಿಂಗಕ್ಕರ್ಪಿತವ ಮಾಡಬೇಕು. ಅಲಗಿನ ಕೊನೆಯ ಮೊನೆಯ ಮೇಲಣ ಸಿಂಹಾಸನ ಹೊರಳಿ ಹೋಗಬಾರದು! ಶಿವಾಚಾರದ ಧಾರೆ ಮೇರೆ ಮುಟ್ಟದ ಮುನ್ನ, ಅರ್ಪಿತವ ಮಾಡಬಲ್ಲಡೆ; ಭಿನ್ನಭಾವವೆಲ್ಲಿಯದೊ_ಗುಹೇಶ್ವರಾ?
--------------
ಅಲ್ಲಮಪ್ರಭುದೇವರು
ಸುತ್ತಿಸುತ್ತಿ ಬಂದಡಿಲ್ಲ, ಲಕ್ಷ ಗಂಗೆಯ ಮಿಂದಡಿಲ್ಲ. ತುಟ್ಟ ತುದಿಯ ಮೇರುಗಿರಿಯ ಮೆಟ್ಟಿ ಕೂಗಿದಡಿಲ್ಲ. ನಿತ್ಯನೇಮದಿಂದ ತನುವ ಮುಟ್ಟಿಕೊಂಡಡಿಲ್ಲ. ನಿಚ್ಚಕ್ಕಿನ ಗಮನವಂದಂದಿಗೆ; ಅತ್ತಲಿತ್ತ ಹರಿವ ಮನವ ಚಿತ್ರದಲಿ ನಿಲಿಸಬಲ್ಲಡೆ ಬಚ್ಚಬರಿಯ ಬೆಳಗು ಗುಹೇಶ್ವರನೆಂಬ ಲಿಂಗವು.
--------------
ಅಲ್ಲಮಪ್ರಭುದೇವರು
ಸೊಪ್ಪಡಗಿದ ಸುಮ್ಮಾನಿಗಳವರಲ್ಲಿ ಗತಿಯನರಸುವರೆ ? ಅವರಲ್ಲಿ ಮತಿಯನರಸುವರೆ ? ಅಂಗವೆಲ್ಲ ನಷ್ಟವಾಗಿ ಲಿಂಗಲೀಯವಾದವರಲ್ಲಿ ಗತಿಯನರಸುವರೆ ? ಅವರಲ್ಲಿ ಮತಿಯನರಸುವರೆ ?_ ಗುಹೇಶ್ವರನೆಂಬ ನಿಜ ನಿಂದವರಲ್ಲಿ ?
--------------
ಅಲ್ಲಮಪ್ರಭುದೇವರು
ಸಂಸಾರಸಂಗವ ಭೇದಿಸಿ ನೋಡುವಡೆ, ದೂರವೆ ? ಕಪಟ ಕನ್ನಡವೆ ? ರವಿಯ ತಪ್ಪಿಸಿ ಸುಳಿವ ಗುಹೇಶ್ವರನೆಂದರಿದ ಶರಣ ಸಂಸಾರಿಯೆ ?
--------------
ಅಲ್ಲಮಪ್ರಭುದೇವರು
ಸಂಸಾರವ ಬಿಟ್ಟೆನೆಂದು, ನಿರಾಶಾಪದವ ಮಾಡಿ, ತಲೆಯ ಬೋಳಿಸಿಕೊಂಡು, ಕುದಿದು ಕೋಟಲೆಗೊಂಡು, ಮನೆ ಮನೆ ತಪ್ಪದೆ ಭಿಕ್ಷವ ಬೇಡಿ, ಉಂಡು, ಎದ್ದು ಹೋಗಿ ತತ್ವವ ಬೋಧಿಸಿ, ಉದರವ ಹೊರೆವಂದು ಮುನ್ನವಿಲ್ಲ ಮರುಳಾ ? ಕಾಡಿ ಬೇಡಿ ಹಾಡಿ ಒಡಲ ಹೊರೆವಂಗೆ, ಮುಕ್ತಿಯುಂಟೆ ಮರುಳಾ ? ಜಂಗಮದಂಗವು ನಿರ್ಗಮನಿ, ಭಕ್ತಪ್ರಿಯ ನಮ್ಮ ಗುಹೇಶ್ವರಲಿಂಗದಲ್ಲಿ ಜಂಗಮದ ನಡೆಯಿಲ್ಲ ಕಾಣಾ, ಎಲೆ ಮರುಳಾ.
--------------
ಅಲ್ಲಮಪ್ರಭುದೇವರು
ಸತ್ತ ಬಳಿಕ ಮುಕ್ತಿಯ ಹಡೆದೆಹೆನೆಂದು ಪೂಜಿಸ ಹೋದಡೆ, ಆ ದೇವರೇನ ಕೊಡುವರೊ ? ಸಾಯದೆ ನೋಯದೆ ಸ್ವತಂತ್ರನಾಗಿ, ಸಂದುಭೇದವಿಲ್ಲದಿಪ್ಪ ಗುಹೇಶ್ವರಾ ನಿಮ್ಮ ಶರಣ.
--------------
ಅಲ್ಲಮಪ್ರಭುದೇವರು
ಸಹಜವ ನುಡಿದಡೆ ಸೇರುವರಿಲ್ಲ ಕಾಣಿರಣ್ಣಾ. ಅಸಹಜಕ್ಕಲ್ಲದೆ ಲೋಕ ಭಜಿಸದು. ಕೆರೆಯ ಕಟ್ಟಿಸುವನ (ಕಟ್ಟುವನ?) ಕಂಡು ಒಡ್ಡರಾಮಯ್ಯನೆಂದಡೆ ಮುಳಿಸಿನಿಂದ ಲಿಂಗತನುವ ನೋಯಿಸುವರೆ ? ನಮ್ಮ ಗುಹೇಶ್ವರಲಿಂಗವು ಜಗದೊಳಗೆ ಪರಿಪೂರ್ಣವಾದ ಕಾರಣ, ಶರಣರ ನೋವು ಮರಳಿ, ಪಾತಕರ ತಾಗಿದಡೆ, ಅಲ್ಲಯ್ಯ ನೋಡಿ ನಗುತಿರ್ದನು
--------------
ಅಲ್ಲಮಪ್ರಭುದೇವರು
ಸತಿ ಭಕ್ತೆಯಾದಡೆ ಹೊಲೆಗಂಜಲಾಗದು, ಪತಿ ಭಕ್ತನಾದೆಡೆ ಕುಲಕಂಜಲಾಗದು. ಸತಿ_ಪತಿಯೆಂಬ ಅಂಗಸುಖ ಹಿಂಗಿ, ಲಿಂಗವೇ ಪತಿಯಾದ ಬಳಿಕ ಸತಿಗೆ ಪತಿಯುಂಟೆ? ಪತಿಗೆ ಸತಿಯುಂಟೆ? ಹಾಲುಂಡು ಮೇಲುಂಬರೆ ಗುಹೇಶ್ವರಾ?
--------------
ಅಲ್ಲಮಪ್ರಭುದೇವರು
ಸುಖವ ಬಲ್ಲಾತ ಸುಖಿಯಲ್ಲ, ದುಃಖವ ಬಲ್ಲಾತ ದುಃಖಿಯಲ್ಲ. ಸುಖ_ದುಃಖವೆರಡನೂ ಬಲ್ಲಾತ ಜ್ಞಾನಿಯಲ್ಲ. ಹುಟ್ಟದ ಮುನ್ನ ಸತ್ತವರ ಕುರುಹ ಬಲ್ಲಡೆ, ಬಲ್ಲ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಸಂಬಂಧ ಅಸಂಬಂಧವೆಂದು ಹೆಸರಿಟ್ಟುಕೊಂಡು ನುಡಿವಿರಿ. ಸಂಬಂಧವಾವುದು? ಅಸಂಬಂಧವಾವುದು ?_ ಬಲ್ಲಡೆ ನೀವು ಹೇಳಿರೆ? ಕಾಯಸಂಬಂಧ ಜೀವಸಂಬಂಧ ಪ್ರಾಣಸಂಬಂಧ_ ಇಂತೀ ತ್ರಿವಿಧಸಂಬಂಧವನರಿದಡೆ ಆತನೆ ಸಂಬಂಧಿ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಸೃಷ್ಟಿಯ ಮೇಲಣ ಕಣಿಯ ತಂದು, ಅಷ್ಟತನುವಿನ ಕೈಯಲ್ಲಿ ಕೊಟ್ಟು, ಕಟ್ಟಿ ಪೂಜೆಯ ಮಾಡಬೇಕೆಂಬರಯ್ಯಾ. ಅದೆಂತೆಂದಡೆ:ಭೂಮಿಗೆ ಹುಟ್ಟಿ ಶಿಲೆಯಾದ, ಕಲ್ಲುಕುಟಿಕನ ಕೈಯಲ್ಲಿ ರೂಪಾದ, ಗುರುವಿನ ಕೈಯಲ್ಲಿ ಮೂರ್ತಿಯಾದ. ಇಂತೀ ಮೂವರಿಗೆ ಹುಟ್ಟಿದ ಸೂಳೆಯ ಮಗನ ನಾನೇನೆಂದು ಪೂಜೆಯ ಮಾಡಲಿ ? ಅದು ಬಿದ್ದಿತ್ತೆಂದು ಸಮಾಧಿಯ ಹೊಕ್ಕಿಹೆನೆಂಬವನು, ಅಸ್ತ್ರ ಸಮಾಧಿ ಜಲಾಂತರ ವನಾಂತರ ದಿಗಂತರದಲ್ಲಿ ಸತ್ತಡೆ ಕುಂಭಿನಿಪಾತಕ ನಾಯಕನರಕ. ಕೈಯ ಲಿಂಗ ಹೋದಡೆ ಮನದ ಲಿಂಗ ಹೋದುದೆ ?_ಎಂದು ಎತ್ತಿಕೊಂಡು, ಅಷ್ಟವಿಧಾರ್ಚನೆ ಷೋಡಶೋಪಚಾರ ಮಾಡುವುದೆ ವ್ರತವು. ಇದ ಕಟ್ಟುವ ಭೇದವ, ಮುಟ್ಟುವ ಪಥವ ಚೆನ್ನಬಸವಣ್ಣನೊಬ್ಬನೆ ಬಲ್ಲನಲ್ಲದೆ ಮಿಕ್ಕ ಅಭ್ಯಾಸಕ್ಕೆ ಅಗ್ಘವಣಿಯ ಕೊಟ್ಟು ಪರವನೆಯ್ದಿದೆನೆಂಬ ಲಜ್ಜಗೇಡಿಗಳನೇನೆಂಬೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಸರ್ವಾಂಗ ಲಿಂಗಸ್ವಾಯತವಾದ ಶರಣಂಗೆ, ದೇಹ ದಹನವಾಗಲಾಗದು, ನಿಕ್ಷೇಪಿಸದೆ ಇರಲಾಗದು ಸಂಸಾರಸಂಗದ ಕಷ್ಟವ ನೋಡಾ ! ಅನಾಹತದಲ್ಲಿ ನಿರೂಪ ಸ್ವಾಯತ, ಗುಹೇಶ್ವರಾ, ನಿಮ್ಮ ಶರಣರಂತಹರಿಂತಹರೆಂದಡೆ, ನಾಯಕನರಕ.
--------------
ಅಲ್ಲಮಪ್ರಭುದೇವರು

ಇನ್ನಷ್ಟು ...