ಅಥವಾ
(5) (1) (1) (2) (2) (0) (0) (0) (1) (0) (0) (3) (0) (0) ಅಂ (1) ಅಃ (1) (18) (1) (4) (1) (0) (2) (0) (2) (0) (0) (0) (0) (0) (0) (0) (5) (0) (1) (1) (1) (5) (0) (5) (3) (8) (1) (3) (0) (0) (1) (3) (0) (6) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಈರೇಳುಲೋಕ, ಹದಿನಾಲ್ಕು ಭುವನವಳಯದಲ್ಲಿ ಜಂಬೂದ್ವೀಪ ನವಖಂಡ ಪೃಥ್ವಿ ಹಿಮಸೇತು ಮಧ್ಯದೊಳಗಾದ ಖಂಡಮಂಡಲ ಯುಗಜುಗಂಗಳು, ಪಂಚಭೌತಿಕ ಪಂಚವಿಂಶತಿತತ್ವ ಸಕಲವಾಸಂಗಳೆಲ್ಲವು ತನ್ನ ಸಾಕಾರದಲ್ಲಿ ತೋರುವುದು. ಉತ್ತಮ ಕನಿಷ* ಮಧ್ಯಮವೆಂಬ ಸುಕ್ಷೇತ್ರವಾಸ, ತನ್ನಂಗದಲ್ಲಿ ಸುಳಿದಾಡುವ ಮಂಗಳಮಯದಿರವ, ಸಕಲೇಂದ್ರಿಯವ ಬಂಧಿಸದೆ ಕೂಡಿ, ಅವರವರ ಅಂಗದ ಮುಖದಲ್ಲಿ ಲಿಂಗಕ್ಕೆ ಕೊಟ್ಟು, ಸುಸಂಗಿಯಾಗಿ ವಸ್ತುವಿನ ಅಂಗದಲ್ಲಿ ಬೆರಸು. ನೀನರಿದನೆಂಬುದಕ್ಕೆ ಬೇರೊಂದು ಕಡೆಯಿಲ್ಲ. ನೀ ಮರೆದನೆಂಬುದಕ್ಕೆ ಬೇರೊಂದು ಮನವಿಲ್ಲ. ವಸ್ತು ದ್ರವ್ಯವ ತೋರಿ ಅಳಿದ ಮತ್ತೆ ವಸ್ತುವ ಕೂಡಿದಂತೆ, ಜಗಕ್ಕೆ ಭಕ್ತಿಯ ತೋರಿ ವಸ್ತು ಲೇಪ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು ಐಕ್ಯಲೇಪವಾದ.
--------------
ಸಗರದ ಬೊಮ್ಮಣ್ಣ
ಈ ಧರೆಯ ಮಡಕೆಯಲ್ಲಿ, ಹೋದಬಾರಿಯ ಅಕ್ಕಿಯ ಹೊಯಿದು, ಬಹಬಾರಿಯ ಬೆಂಕಿಯ ಹಾಕಿ, ಅನಾಗತ ಸಂಸಿದ್ಧಿಯೆಂಬ ಒಲೆಯಲ್ಲಿ ಉಸುರುಸಾ ಉಪ್ಫೆಂದು ಉರುಹಲಾಗಿ, ಮಡಕೆ ಒಡೆದು, ಓಗರ ಬೆಂದಿತ್ತು. ಉಂಬ ಅಣ್ಣ ಓಗರವನೊಲ್ಲದೆ ಗಂಜಿಯ ಕುಡಿದು ಗಂಟಲು ಸಿಕ್ಕಿತ್ತು, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗಾ.
--------------
ಸಗರದ ಬೊಮ್ಮಣ್ಣ