ಖ ಪದದಿಂದ ಪ್ರಾರಂಭವಾಗುವ ವಚನಗಳು:
ಖ್ಯಾತಿಲಾಭದ ಪೂಜೆ, ದ್ರವ್ಯವ ಕೆಡಿಸುವುದಕ್ಕೆ ಮೊದಲಾಯಿತ್ತು.ವೈರಾಗ್ಯದ ವಿರಕ್ತಿ ಮೂರಕ್ಕೆ ಒಡಲುಗೊಳಿಸಿತ್ತು.ವಾಗದ್ವೈತದ ಕೇಣಸರ,ಗೆಲ್ಲ ಸೋಲಕ್ಕೆ ಕಲ್ಲೆದೆಯ ಮಾಡಿತ್ತು.ಇವೆಲ್ಲವ ತಿಳಿದು, ಇಲ್ಲ ಉಂಟು ಎಂಬಲ್ಲಿಯೆ,ಮನಸಂದಿತ್ತು ಮಾರೇಶ್ವರಾ.
ಖ್ಯಾತಿಲಾಭಕ್ಕೆ ಮಾಡುವಾತ ಭಕ್ತನಲ್ಲ.ಡಂಬಕಕ್ಕೆ ಡೊಂಬರಂತೆ ತಿರುಗುವವ ಜಂಗಮವಲ್ಲ.ತನು ತಲೆ ಬತ್ತಲೆಯಾಗಿ,ಮನ ತ್ರಿವಿಧ ಆಸೆ ಉಳ್ಳನ್ನಕ್ಕ ವಿರಕ್ತನಲ್ಲ.ಇಂತೀ ಗುಣವ ಸಂಪಾದಿಸುವನ್ನಕ್ಕ,ಎನಗೆ ಮುಕ್ತಿಯೆಂಬ ಬಟ್ಟೆಯಿಲ್ಲ.ನೀ ಸತ್ತೆ, ನಾ ಕೆಟ್ಟೆ, ಮನಸಂದಿತ್ತು ಮಾರೇಶ್ವರಾ.