ಅಥವಾ
(19) (3) (1) (1) (3) (0) (0) (0) (0) (1) (1) (0) (0) (0) ಅಂ (10) ಅಃ (10) (19) (0) (9) (1) (0) (1) (0) (7) (0) (0) (0) (0) (0) (0) (0) (8) (0) (0) (3) (4) (11) (0) (4) (3) (9) (0) (3) (0) (1) (8) (2) (0) (6) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಬಾಹ್ಯವ್ರತ, ಭ್ರಮೆವ್ರತ, ಸೀಮೋಲ್ಲಂಘನವ್ರತ, ಉಪಚರಿಯಕೂಟಸ್ಥವ್ರತ, ಸಮಕ್ರೀ ಭೋಜನವ್ರತ, ಇಷ್ಟಸಂಬಂಧಕೂಟವ್ರತ, ದ್ರವ್ಯ ಉಪಚರಿಯ ಸಂಪದವ್ರತ, ಅಹುದಲ್ಲವೆಂಬ ಸಂದೇಹ ಸಂಕಲ್ಪವ್ರತ, ತಿಲ ಮಧುರ ಕ್ರಮಕ ಲವಣ ಪರಿಪಾಕ ವಿಸರ್ಜನವ್ರತ, ಗಮನ ಸುಮನ ಸಮತೆ ನೇಮ ಸಂತೋಷವ್ರತ. ಇಂತೀ ಸೀಮೆಯೊಳಗಾದ ಅರುವತ್ತನಾಲ್ಕು ಶೀಲವನರಿದಡೇನು? ಪರವಧುವಿಂಗೆ ಪಲ್ಲಟಿಸದೆ, ಪರಧನಕ್ಕೆ ಕೈದುಡುಕದೆ, ಅನರ್ಪಿತಕ್ಕೆ ಮನ ಮುಟ್ಟದೆ, ತಾ ಕೊಂಡ ಸೀಮೆಯಲ್ಲಿ ಭಾವಭ್ರಮೆಯಿಲ್ಲದೆ, ಮನ ವಚನ ಕಾಯದಲ್ಲಿ ಕೊಂಡ ವ್ರತಕ್ಕೆ ಪೂಜಿಸುವ. ಗುರುಲಿಂಗಜಂಗಮಕ್ಕೆ ಉಭಯದೋರದೆ ನಿಂದುದು, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗಕ್ಕೆ ಸಂದುದು.
--------------
ಶಿವಲೆಂಕ ಮಂಚಣ್ಣ
ಬರಿಹುಂಡನ ಗಡಿವಾಡದಲ್ಲಿರಿಸಿದಂತೆ, ಒಡೆಯರಿಲ್ಲದ ಮನೆಯ ತುಡುಗುಣಿ ಹೊಕ್ಕು, ಗಡಬಡಿಯ ಮಾಡಿದಂತೆ, ಅಂಗಕ್ಕೆ ಕುರುಹಿಲ್ಲದೆ, ಮನಕ್ಕರಿವಿಲ್ಲದೆ ತ್ರಿಭಂಗಿಯಲ್ಲಿ ನೊಂದವಂಗೆ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವಿಲ್ಲಾ ಎಂದೆ.
--------------
ಶಿವಲೆಂಕ ಮಂಚಣ್ಣ
ಬಂಗಾರದ ರೂಪಿದ್ದಲ್ಲದೆ ಬಣ್ಣ ವನವಗವಿಸದು. ಬಣ್ಣ ರಂಜನೆಯಾಗಿ ರಂಜಿಸುತ್ತಿರೆ ಎಲ್ಲರ ಕಣ್ಣಿಗೆ ಮಂಗಲ. ಇಂತೀ ಕಾಯ ಜೀವ ಜ್ಞಾನದ ಬೆಳಗು. ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗದ ಒದಗು.
--------------
ಶಿವಲೆಂಕ ಮಂಚಣ್ಣ
ಬಹುರೂಪಕ್ಕೆ ಭಾಷಾಂಗವಿಲ್ಲದಿರೆ ಮೆಚ್ಚದು ಜಗ. ಗುರುಚರರೂಪ ತಾಳಲ್ಲಿ, ಗುರುವಿಂಗೆ ಗಂಭೀರತೆ, ಚರಕ್ಕೆ ನಿಸ್ಪೃಹತ್ವ. ಇಂತೀ ಉಭಯಮೂರ್ತಿ ಅಪೇಕ್ಷೆವಿರಹಿತವಾಗಿ ನಿಂದುದು, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ತಾನೆ.
--------------
ಶಿವಲೆಂಕ ಮಂಚಣ್ಣ