ಅಥವಾ
(0) (3) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (3) (0) (0) (0) (0) (2) (0) (0) (0) (0) (0) (0) (0) (0) (0) (1) (0) (0) (0) (2) (1) (0) (0) (1) (1) (0) (0) (0) (0) (1) (1) (0) (0) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ನಿನ್ನ ಸ್ವರೂಪ ಕಂಡೆನ್ನ ದೃಷ್ಟಿ ನಟ್ಟುದೆನಗೆ. ನಿನ್ನ ಲಾವಣ್ಯರಸವ ಕಂಡು ಮನ ಹಾರೈಸಿತ್ತೆನಗೆ. ನಿನ್ನ ಪ್ರವುಡಿಯಿಂದ ಕೂಡಿದೆನೆಂಬುದು ಭಾವದಲ್ಲಿ ಬಚ್ಚಬರಿಯ ಹೆಂಗುಸಾಗಿ ತೋರಿತ್ತೆನೆಗೆ. ಮಹಾಲಿಂಗ ತ್ರಿಪುರಾಂತಕನೆನಗೊಡ್ಡಿದ ಮಾಯೆಯ ನಿನ್ನ ಸಮಸುಖ ಕೂಟದೊಳಿರ್ದು ಶಿವಭಾವಭಕ್ತಿಯಿಂ ಗೆಲುವೆನು ಮಹಾ ಹೆಣ್ಣು ಎಂದು ಕೈವಿಡಿದೆನು.
--------------
ಕಿನ್ನರಿ ಬ್ರಹ್ಮಯ್ಯ
ನಿನ್ನ ಹರೆಯದ ರೂಹಿನ ಚೆಲುವಿನ, ನುಡಿಯ ಜಾಣಿನ, ಸಿರಿಯ ಸಂತೋಷದ, ಕರಿ ತುರಗ ರಥ ಪದಾತಿಯ ನೆರವಿಯ, ಸತಿ ಸುತರ ಬಂಧುಗಳ ಸಮೂಹದ, ನಿನ್ನ ಕುಲದಭಿಮಾನದ ಗರ್ವವ ಬಿಡು, ಮರುಳಾಗದಿರು. ಅಕಟಕಟಾ ರೋಮಜನಿಂದ ಹಿರಿಯನೆ? ಮದನನಿಂ ಚೆಲುವನೆ? ಸುರಪತಿಯಿಂದ ಸಂಪನ್ನನೆ? ವಾಮದೇವ ವಶಿಷ್ಟರಿಂದ ಕುಲಜನೆ? ಅಂತಕನ ದೂತರು ಬಂದು ಕೈವಿಡಿದೆಳದೊಯ್ಯುವಾಗ ನುಡಿ ತಡವಿಲ್ಲ ಕೇಳೋ ನರನೆ! ಎನ್ನ ಮಾಹಾಲಿಂಗ ತ್ರಿಪುರಾಂತಕದೇವರ ಪೂಜಿಸಿಯಾದರೆ ಕೇಡಿಲ್ಲದ ಪದ ದೊರಕೊಂಬುದು ಮರುಳೆ.
--------------
ಕಿನ್ನರಿ ಬ್ರಹ್ಮಯ್ಯ