ಅಥವಾ
(4) (6) (8) (1) (0) (0) (0) (0) (0) (0) (0) (0) (1) (0) ಅಂ (1) ಅಃ (1) (4) (0) (4) (0) (0) (0) (0) (1) (0) (0) (0) (0) (0) (0) (0) (1) (0) (1) (0) (2) (1) (1) (2) (2) (3) (0) (0) (0) (1) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಆರುಲಿಂಗದಲ್ಲಿ ಅರತೆನೆಂಬ ಅರಿವುಗೇಡಿಗಳು ನೀವು ಕೇಳಿರೊ. ಆರುಲಿಂಗ ನಿಮಗೆಂತಪ್ಪವು? ಆಚಾರಲಿಂಗ ಬ್ರಹ್ಮಂಗೆ ಸಂಬಂಧವಾಯಿತ್ತು. ಗುರುಲಿಂಗ ವಿಷ್ಣುವಿಂಗೆ ಸಂಬಂಧವಾಯಿತ್ತು. ಶಿವಲಿಂಗ ರುದ್ರಂಗೆ ಸಂಬಂಧವಾಯಿತ್ತು. ಜಂಗಮಲಿಂಗ ಈಶ್ವರಂಗೆ ಸಂಬಂಧವಾಯಿತ್ತು. ಪ್ರಸಾದಲಿಂಗ ಸದಾಶಿವಂಗೆ ಸಂಬಂಧವಾಯಿತ್ತು. ಮಹಾಲಿಂಗ ಪರಶಿವಂಗೆ ಸಂಬಂಧವಾಯಿತ್ತು. ಇಂತೀ ಆರುದರುಶನಕ್ಕೆ ಸಂಬಂಧವಾಯಿತ್ತು. ನಿಮ್ಮ ಸಂಬಂಧವ ಬಲ್ಲರೆ ಹೇಳಿರೊ? ಗುರುಲಿಂಗಜಂಗಮವೆಂಬ ತ್ರಿವಿಧಸಂಬಂಧ; ಆರು ಪರಿಯ ಶಿಲೆಯ ಮೆಟ್ಟಿ ಮುಂಬಾಗಿಲವ ತೆರೆದು ಶ್ರೀಗುರುವಿನ ಪ್ರಸಾದವ ಸವಿದು ಮುಂದಿರ್ದ ಲಿಂಗಸಂಗದ ಅರ್ಪಿತ ದರುಶನವೆಂಬೊ ಜಂಗಮವ ನೋಡುತ್ತ ನೋಡುತ್ತ ನಿಬ್ಬೆರೆಗಾದರು ನೋಡಾ. ಆರನು ಮೀರಿ, ಮೂರನು ಮೆಟ್ಟಿ, ತಟ್ಟುಮುಟ್ಟುಗಳೆಂಬ ಭ್ರಮೆಗಳನೊಲ್ಲದೆ ಐವತ್ತೆರಡರೊಳಗಾಗಿ ಅರಿಯಲಾರದೆ ಮೀರಿಹೋದರು ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ಆರು ಗುಣವೆಂಬೊ ಅರಿಕೆಯನೈದೆವೆಂಬ ಅರುಹಿರಿಯರು ನೀವು ಕೇಳಿರೋ. ಅರುವೆಂಬುದನೆ ಅರಿದು, ಮರಬೆಂಬುದನೆ ಮರದು, ಪರಶಿವಗುರುಮೂರ್ತಿಯೆಂದು ಗುರುವ ಕೊಂಡಾಡುತ್ತ ಆ ಗುರುಮೂರ್ತಿ ಗುರುದೀಕ್ಷವನೆ ಶಿರದಮೇಲಿಹ ಹಸ್ತವನು ಆ ತತ್‍ಕ್ಷಣದಲ್ಲಿ ಕಾರುಣ್ಯದಿಂದಲಿ ಪರಮಪ್ರಸಾದವ ಸಾರಾಯವ ಕೊಂಡದನು ಅರಿತು, ಮನದಲ್ಲಿ ಆಧಾರಚಕ್ರವಂ ಬಲಿದು ಇಡಾ ಪಿಂಗಳ ಸುಷುಮ್ನವೆಂಬ ಸಂದೇಹವನಳಿದು, ಏಕನಾಳವ ಕೂಡುತ್ತ ಮೂರುಪುರದ ಬಾಗಿಲಂಗಳ ಪೊಕ್ಕು ಪರಮಪ್ರಸಾದವ ಕೊಡುತಿರ್ದ ಘನಲಿಂಗವ ಕೊಡಬಲ್ಲರೆ ಅದೇ ಅರುವು ಹಿರಿಯತನ. ಇದನರಿಯದೆ ಅರುಹಿರಿಯರೆಂದು ತಿರುಗುವ ಬೂಟಕರಿಗೆ ನಾನೇನೆಂಬೆನಯ್ಯಾ ಗೊಹೇಶ್ವರಪ್ರಿಯ ನಿರಾಳಲಿಂಗಾ !
--------------
ಗುಹೇಶ್ವರಯ್ಯ
ಆರು ಚಕ್ರದಲ್ಲಿ ಅರಿತೆನೆಂದು ನುಡಿವ ಅರಿವುಗೇಡಿಗಳು ನೀವು ಕೇಳಿರೋ. ಆಧಾರಚಕ್ರ ಪೃಥ್ವಿಗೆ ಸಂಬಂಧ ; ಅಲ್ಲಿಗೆ ಬ್ರಹ್ಮ ಅದ್ಥಿದೇವತೆ, ಆಚಾರಲಿಂಗವಿಡಿದು ಯೋಗಿಯಾಗಿ ಸುಳಿದ. ಸ್ವಾದ್ಥಿಷ್ಠಾನಚಕ್ರ ಅಪ್ಪುವಿಗೆ ಸಂಬಂಧ: ಅಲ್ಲಿಗೆ ವಿಷ್ಣು ಅದ್ಥಿದೇವತೆ, ಶ್ರೀಗುರುಲಿಂಗವ ಪಿಡಿದು ಜೋಗಿಯಾಗಿ ಸುಳಿದ. ಮಣಿಪೂರಕ ಚಕ್ರ ಅಗ್ನಿಗೆ ಸಂಬಂಧ ; ಅಲ್ಲಿಗೆ ರುದ್ರನದ್ಥಿದೇವತೆ, ಜಂಗಮಲಿಂಗವ ಪಿಡಿದು ಶ್ರಾವಣಿಯಾಗಿ ಸುಳಿದ. ವಿಶುದ್ಧಿಚಕ್ರ ವಾಯುವಿಗೆ ಸಂಬಂಧ ; ಅಲ್ಲಿಗೆ ಸದಾಶಿವನದ್ಥಿದೇವತೆ, ಪ್ರಸಾದಲಿಂಗವ ಪಿಡಿದು ಕಾಳಾಮುಖಿಯಾಗಿ ಸುಳಿದ. ಆಜ್ಞಾಚಕ್ರಕ್ಕೆ ಪರತತ್ವದ ಸಂಬಂಧ ; ಅಲ್ಲಿಗೆ ಪರಶಿವನದ್ಥಿದೇವತೆ, ಮಹಾಲಿಂಗವಪಿಡಿದು ಪಶುಪತಿಯಾಗಿ ಸುಳಿದ. ಇಂತೀ ಆರು ದರುಶನಕ್ಕೆ ಬಂದರೆ ಅಂಗಳ ಪೊಗಿಸಿರಿ. ಆ ಲಿಂಗವು ನಿಮಗೆ ತಪ್ಪಿದವು, ಮುಂದಿರ್ದ ಗುರುಲಿಂಗಜಂಗಮದ ಭೇದವನರಿಯದೆ ಆರು ಸ್ಥಲದಲ್ಲಿ ತೃಪ್ತಿಯಾಯಿತ್ತೆಂಬವರ ಕಂಡು ನಾಚಿತ್ತು ಎನ್ನ ಮನವು ಗೊಹೇಶ್ವರಪ್ರಿಯ ನಿರಾಳಲಿಂಗಾ
--------------
ಗುಹೇಶ್ವರಯ್ಯ
ಆದಿ ಅನಾದಿಗಳಿಲ್ಲದಂದಿನ ಕೂಗು, ನಾದಬಿಂದುಕಳೆಗಳಿಲ್ಲದಂದಿನ ಕೂಗು, ಇಡಾ ಪಿಂಗಳ ಸುಷಮ್ನನಾಳಾದ ಮಧ್ಯದ ಕೂಗು, ಕಂಡು ಕೂಗಿದೆ, ಅರಸು ಬಾರಯ್ಯ ಕಡಿಯ ಹೊಲಕೆ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ಆಕಾಶದಲ್ಲಿ ಹಾರಿಹೋಹ ಪಕ್ಷಿಯ ಮಾರ್ಗವನು ಹಿಂದೆ ಬಪ್ಪ ಪಕ್ಷಿ ಬಲ್ಲುದಲ್ಲದೆ, ಕೆಳಗಾಡುವ ಕುಕ್ಕುಟ ಬಲ್ಲುದೆ? ಆ ಲಿಂಗದ ಸಂಗದ ಸುಖವನು ಪ್ರಾಣಲಿಂಗಿಗಳೆ ಬಲ್ಲರಲ್ಲದೆ, ಮರವೆಯಲ್ಲಿ ಮಾತಾಡುವ ನರಗುರಿಗಳು ನಿಮ್ಮ ಹೊಲಬನವರೆತ್ತ ಬಲ್ಲರಯ್ಯ ಗೊಹೇಶ್ವರಪ್ರಿಯ ನಿರಾಳಲಿಂಗ ?
--------------
ಗುಹೇಶ್ವರಯ್ಯ
ಆರುಸ್ಥಲದಲ್ಲಿ ಅರತೆನೆಂದು ಸಹಭೋಜನದಲ್ಲಿ ಉಂಬುವ ಅಣ್ಣಗಳು ನೀವು ಕೇಳಿರೋ. ಅಂಗದ ಮೇಲೆ ಲಿಂಗವಿರ್ದಡೇನಯ್ಯಾ, ಲಿಂಗವ ಪ್ರಾಣಕ್ಕೆ ಅವಧರಿಸದನ್ನಕ್ಕ? ಲಿಂಗದ ಅಷ್ಟವಿಧಾರ್ಚನೆಯ ಬಲ್ಲ[ರೇ]ನಯ್ಯಾ, ಅಷ್ಟ [ಮದಂಗಳ] ನಷ್ಟವ ಮಾಡಿ, ಪಂಚೇಂದ್ರಿಯಂ[ಗಳ ಬಂಧಿಸಿ], ಲಿಂಗದ ಮುಖ ನೋಡದನ್ನಕ್ಕ? ಇಂತಪ್ಪ ವರ್ಮಾದಿವರ್ಮಂಗಳ ಭೇದವನರಿಯದೆ, ಕರಸ್ಥಲದಿ ಲಿಂಗವ ಪಿಡಿದು ಸಹಭೋಜನವೆಂದು ಒಂದಾಗಿ ಉಂಬುವ ಆ ಲಿಂಗದ್ರೋಹಿಗಳ ನೋಡಿ, ನಗುತಿರ್ದ, ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ