ಅಥವಾ
(153) (60) (11) (2) (21) (3) (0) (0) (26) (3) (2) (13) (5) (0) ಅಂ (54) ಅಃ (54) (91) (2) (73) (4) (0) (4) (0) (33) (0) (0) (0) (0) (0) (0) (0) (55) (0) (17) (4) (48) (61) (1) (30) (49) (62) (6) (20) (0) (58) (24) (65) (2) (69) (42) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಚಂದ್ರಶಿಲೆಯಲ್ಲಿ ಪಾವಕ ಹುಟ್ಟಿ, ಈಡಾ ಪಿಂಗಳ ಮಧ್ಯದಲ್ಲಿ ಅನಿಲ ತುಂಬಿ, ಅರಿದರಿದು ! ನಿಮ್ಮ ನೆನೆವ ಪರಿಕರ ಹೊಸತು ! ಅರಿವಡೆ ತಲೆಯಿಲ್ಲ, ಹಿಡಿವಡೆ ಮುಡಿಯಿಲ್ಲ ! ಕೂಡಲಚೆನ್ನಸಂಗಮದೇವಾ ನಿಮ್ಮ ಶರಣನ ಪರಿಯಿಂತುಟು; ಅರಿದರಿದು !
--------------
ಚನ್ನಬಸವಣ್ಣ
ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವನಂತಪ್ಪ ನಿಧಾನ ದೊರಕಿತ್ತೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವನಂತಪ್ಪ ಪರುಷ ದೊರಕಿತ್ತೆನಗೆ. ಚೆನ್ನಸಂಗಾ ನಿಮ್ಮಲ್ಲಿ ಬಯಸಿ ಬೇಡುವಡೆ ಬಸವನಂತಪ್ಪ ಕಾಮಧೇನು ದೊರೆಯಿತ್ತೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವನಂತಪ್ಪ ಸುರತರು ದೊರಕಿತ್ತೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ತ್ರಿವಿಧ ತ್ರಿವಿಧ[ದ] ಮೊದಲನೆ ತೋರಿದ ಬಸವಣ್ಣನೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವಣ್ಣನಿಂದ ನೀವಾದಿರಾಗಿ, ಕೂಡಲಚೆನ್ನಸಂಗಯ್ಯನಲ್ಲಿ ಪ್ರಸಾದಿಯ ಪ್ರಸಾದಿಯಾದೆನು.
--------------
ಚನ್ನಬಸವಣ್ಣ
ಚಿದ್ಘನ ಚಿತ್ಪ್ರಕಾಶ ಚಿದಾನಂದ ಲಿಂಗವೆ, ಎನ್ನ ಹೃದಯಕಮಲವ ಬೆಳಗುವ ಪರಂಜ್ಯೋತಿ ಲಿಂಗವೆ, ಎನ್ನ ಕರಸ್ಥಲಕ್ಕನುವಾದ ಲಿಂಗವೆ, ಎನ್ನ ಕಂಗಳ ಕೊನೆಯಲ್ಲಿ ಮೂರ್ತಿಯಪ್ಪೆಯಯ್ಯಾ ಧರ್ಮಿ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಚಾಂಡಾಲಭಾಂಡದಲ್ಲಿ ಭಾಗೀರಥಿಯುದಕವ ತುಂಬಿದಡೇನೊ ಶುದ್ಧವಾಗಬಲ್ಲುದೆ ? ಪಾಪಿ ಗುರುಮುಖವಾದಡೇನೊ ಲಿಂಗವನರಿಯಬಲ್ಲನೆ ? ಇದು ಕಾರಣ_ಕೂಡಲಚೆನ್ನಸಂಗಮದೇವಾ ಕೂಡೆ ಮಜ್ಜನಕ್ಕೆರೆವರೆಲ್ಲ ಭಕ್ತರಾಗಬಲ್ಲರೆ ?
--------------
ಚನ್ನಬಸವಣ್ಣ