ಅಥವಾ
(4) (2) (2) (0) (4) (1) (0) (0) (1) (0) (0) (5) (0) (0) ಅಂ (1) ಅಃ (1) (14) (0) (10) (0) (0) (4) (0) (2) (0) (0) (0) (0) (0) (0) (0) (5) (0) (1) (2) (3) (8) (0) (1) (4) (7) (0) (1) (0) (1) (0) (5) (0) (5) (7) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಧರೆಯನಾಳುವ ಪರವಾದಿ ಬಿಜ್ಜಳನು ಮಡಿವಾಳಯ್ಯಗಳು ಕರೆಯಕಳುಹಿದರೆ ಬಾರದಿರಲು ಪಟ್ಟದಾನೆಯ ಮೇಲೆ ಪರಿಪರಿಬಣ್ಣ ಸಣ್ಣವಸ್ತ್ರವ ಹೇರಿಸಿ ಶರದ್ಥಿಯ ಮುಂದೆ ನೀ ನೂಕಿ ಬಾಯೆಂದು ಕಳುಹಲು, ಬರುವ ಪಟ್ಟದಾನೆಯ ಕಂಡು ಕಂಗೆಡದೆ ಕಡೆಗೋಡದೆ ತಟ್ಟನೆ ಸೀಳಿ ನಿಟ್ಟೆಲುವ ಮುರಿದು ಹೊದಕೆಯ ಮುರಿಗಿ ಮಾಡಿ ತಲೆಯ ಹರಿಯಲಿಟ್ಟು ದುಕೂಲವ ಸುಟ್ಟು ಪರಿಚಾರರ ನೆರೆಯಟ್ಟಿ ತಲೆಗಳ ಕುಟ್ಟುವದ ಕೇಳಿ ಕಂಗೆಟ್ಟು ಕಾಲಿಗೆರಗಲು ಕರುಣವ ಪಡೆದ ನಿಷ್ಠೆಯ ವೀರಮಡಿವಾಳಯ್ಯಗಳಿಗೆ ಶರಣು ಶರಣಾರ್ಥಿ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಧೂಳಿಪಾವುಡ, ಸರ್ವಾಂಗಪಾವುಡ, ಸಮಯಾಚಾರ, ಸಹಭೋಜನವೆಂಬ ಶೀಲವಂತರು ನೀವು ಕೇಳಿರೊ. ಗಾಳಿಗೂಳಿತನವ ಬಿಟ್ಟುದೆ ಧೂಳಿಪಾವುಡ. ಸರ್ವ ಗರ್ವವನಳಿದು ನಿಗರ್ವವಾದುದೆ ಸರ್ವಾಂಗಪಾವುಡ. ಸಮತೆ ಸೈರಣೆ ಉಳ್ಳುದೆ ಸಮಯಾಚಾರ. ಶರಣಸತಿ ಲಿಂಗಪತಿಯಾದುದೆ ಸಹಭೋಜನ. ಇಂತಲ್ಲದೆ ಸಂತೆಯ ಸೂಳೆಯಂತೆ ಬಂದವರ ಸಂತವಿಟ್ಟು ತಾವು ಮುನ್ನಿನಂತೆ ಇರುವ ಭ್ರಾಂತು ಭ್ರಮಿತ ವ್ರತಿ ಗಿತಿಗಳಿಗೆ ಶೀಲವೆಲ್ಲಿಯದೊ ? ಇಲ್ಲ, ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ