ಊದ್ರ್ವಮುಖವಾದ, ಅನಂತೇಶನೆಂಬ ವಾಸುಕಿಯ
ಶಿರದ ಮೇಲಿಹ ಅಷ್ಟದಳಾಬ್ಜಮಧ್ಯದಲ್ಲಿ,
ಒಪ್ಪುತ್ತಿಹ ಶುದ್ಧವಿದ್ಯೆಯೇ ಪೀಠವಾದ
ಶಿವಲಿಂಗವೊಂದರಲ್ಲಿ, ದೃಢಭಕ್ತಿಯುಳ್ಳಾತನ ದೇಹವೇ
ಲಿಂಗದೇಹವು.
ಆ ಚಿದ್ರೂಪನಾದ ಪರಮ ಸ್ವರೂಪನ ಮೂರ್ತಿ
ತಾನೇ ಇಷ್ಟಲಿಂಗವು.
ಆ ಇಷ್ಟಲಿಂಗದಲ್ಲಿ ದೇಹವನಡಗಿಸಿದ ಮಹಾತ್ಮನ
ಮನ ಬುದ್ಧಿ ಅಹಂಕಾರ ಇಂದ್ರಿಯಾದಿ ಗುಣಂಗಳು
ಜನನಾದಿ ವಿಕಾರಂಗಳ ಹೊದ್ದವಾಗಿ, ಆತ ನಿರ್ದೇಹಿ,
ನಿಜಗುರು ಸ್ವತಂತ್ರಲಿಂಗೇಶ್ವರನ ಶರಣನುಪಮಾತೀತನು.