Some error occurred
ಅಥವಾ

ಒಟ್ಟು 85 ಕಡೆಗಳಲ್ಲಿ , 25 ವಚನಕಾರರು , 81 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

Created with Highcharts 3.0.6Chart context menuಪದವಿರುವ ವಚನಗಳುವಚನಕಾರರು111711178210111312215251232ಒಟ್ಟು66ಅಮುಗೆರಾಯಮ್ಮ18ಅರಿವಿನಮಾರಿತಂದೆ3ಅಲ್ಲಮಪ್ರಭುದೇವರು36ಆದಯ್ಯ32ಉರಿಲಿಂಗಪೆದ್ದಿ97ಕುಷ್ಟಗಿಕರಿಬಸವೇಶ್ವರ 7ಚನ್ನಬಸವಣ್ಣ24ಜಕ್ಕಣಯ್ಯ 30ತೋಂಟದಸಿದ್ಧಲಿಂಗಶಿವಯೋಗಿಗಳು 11ದೇಶಿಕೇಂದ್ರಸಂಗನಬಸವಯ್ಯ 9ನಗೆಯಮಾರಿತಂದೆ48ನೀಲಮ್ಮ 112ಪ್ರಸಾದಿಭೋಗಣ್ಣ 1ಬಸವಣ್ಣ41ಬಾಲಸಂಗಯ್ಯಅಪ್ರಮಾಣದೇವ79ಭೋಗಣ್ಣ 26ಮಡಿವಾಳಮಾಚಿದೇವ 29ಮೋಳಿಗೆಮಹಾದೇವಿ 19ಮೋಳಿಗೆಮಾರಯ್ಯ 25ಷಣ್ಮುಖಸ್ವಾಮಿ5ಸಿದ್ಧರಾಮೇಶ್ವರ31ಸೊಡ್ಡಳಬಾಚರಸ 42ಸ್ವತಂತ್ರಸಿದ್ಧಲಿಂಗ 12ಹಡಪದಅಪ್ಪಣ್ಣ 20ಹಡಪದಪ್ಪಣ್ಣಗಳಪುಣ್ಯಸ್ತ್ರೀಲಿಂಗಮ್ಮ01020
ಲಿಂಗಕ್ಕೆ ಕೊಟ್ಟು ಕೊಂಡರೆ ಪ್ರಸಾದ. ಜಂಗಮವಾರೋಗಣೆಯ ಮಾಡಿ ಮಿಕ್ಕುದು ಪ್ರಸಾದ, ಇದೇ ಪ್ರಸಾದದಾದಿ ಕಂಡಯ್ಯಾ. ಆದಿಯ ಪ್ರಸಾದವ ವೇದಿಸಬಲ್ಲರೆ ಇದೆ ಕಂಡಯ್ಯಾ. ಲಿಂಗಕ್ಕೆ ಕೊಡದೆ, ಜಂಗಮಕ್ಕೆ ನೀಡದೆ ಕೊಂಡರೆ ಹುಳುಕುಂಡುದಲಿಕ್ಕುವ ನಮ್ಮ ಕೂಡಲಚೆನ್ನಸಂಗಮದೇವ.
--------------
ಚನ್ನಬಸವಣ್ಣ
ಎಲೆ ಕಲಿದೇವಯ್ಯಾ, ಆದಿಯ ಕುಳವೂ ಅನಾದಿಯ ಕುಳವೂ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಮೂಲಶುದ್ಧದ ಮುಕ್ತಾಯ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಉಭಯಕುಳದ ಕಿರಣಶಕ್ತಿ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಭಾವವೂ ನಿರ್ಭಾವವೂ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಅರ್ಥ ಪ್ರಾಣ ಅಬ್ಥಿಮಾನ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಅಂಗಲಿಂಗಸಂಗ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಅಷ್ಟದಳಕಮಲದ ಸಪ್ತಕರ್ಣಿಕೆಯು ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಎನ್ನ ನಡೆಗೆಟ್ಟಿತ್ತು ನಿಮ್ಮ ಜಂಗಮಮೂರ್ತಿಯಿಂದ. ಎನ್ನ ನುಡಿಗೆಟ್ಟಿತ್ತು ನಿಮ್ಮ ಜಂಗಮಮೂರ್ತಿಯಿಂದ ಎನ್ನ ನೋಟ ಕೆಟ್ಟಿತ್ತು ನಿಮ್ಮ ಜಂಗಮಮೂರ್ತಿಯಿಂದ. ಎನ್ನ ಮಾಟ ಸಮಾಪ್ತಿಯಾಯಿತ್ತು ನಿಮ್ಮ ಜಂಗಮಮೂರ್ತಿಯಿಂದ. ನಿಮ್ಮ ಪ್ರಸಾದದಿಂದ ತನು ಶುದ್ಧವಾಯಿತ್ತು. ಬಸವಣ್ಣ ತೋರಿದ ಕಾರಣ, ನಿಮ್ಮ ಜಂಗಮಮೂರ್ತಿಯ ಕಂಡು ಬದುಕಿದೆನು ಕಾಣಾ ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ಅನಾದಿಯ ಮಗನು ಆದಿ, ಆದಿಯ ಮಗನತೀತ, ಅತೀತನ ಮಗನು ಆಕಾಶ,. ಆಕಾಶನ ಮಗನು ವಾಯು, ವಾಯುವಿನ ಮಗನಗ್ನಿ, ಅಗ್ನಿಯ ಮಗನು ಅಪ್ಪು, ಅಪ್ಪುವಿನ ಮಗನು ಪೃಥ್ವಿ. ಪೃಥ್ವಿಯಿಂದ ಸಕಲ ಜೀವರೆಲ್ಲರು ಉದ್ಭವಿಸಿದರು ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಬೇರು ಇಲ್ಲದ ಮರ ಹೋಗಿ ಆದಿಯ ಸೇರಿತ್ತಯ್ಯ, ಆ ಮರಕ್ಕೆ ಐದು ಕೊಂಬೆಗಳು ಬೆಳೆದಿರ್ಪವು ನೋಡಾ. ಬ್ರಹ್ಮವೊಂದನೇರಿದ, ವಿಷ್ಣುವೊಂದನೇರಿದ, ರುದ್ರವೊಂದನೇರಿದ, ಈಶ್ವರನೊಂದನೇರಿದ, ಸದಾಶಿವನೊಂದನೇರಿದ- ಈ ಐದು ಕೊಂಬೆಗಳ ಮೆಟ್ಟಿ ತುಟ್ಟತುದಿಯಲೊಂದು ಬಟ್ಟಬಯಲ ಹಣ್ಣಾಗಿಪ್ಪುದು ನೋಡಾ ! ಆ ಹಣ್ಣ ಸವಿಯಲೊಡನೆ, ಹಣ್ಣಿನ ಒಡೆಯ ಬಂದು ಸವಿದಾತನ ನುಂಗಿದ ನೋಡಾ, ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಆದಿಯ ಲಿಂಗ ನಿನ್ನಿಂದ ಎನಗಾಯಿತ್ತು. ಅನಾದಿಯ ಜ್ಞಾನ ನಿನ್ನ ನೆನೆದಡೆ ಎನಗಾಯಿತ್ತು. ನಿನ್ನ ಕೃಪೆಯಿಂದ ಪ್ರಾಣ ಲಿಂಗವೆಂದರಿದೆನೆಂಬುದ, ನಿಮ್ಮ ಪ್ರಮಥರೆ ಬಲ್ಲರು. ಗುಹೇಶ್ವರ ಸಾಕ್ಷಿಯಾಗಿ, ಸಂಗನಬಸವಣ್ಣ ನಿನ್ನ ಪ್ರಸಾದದ ಶಿಶು ನಾನು ನೋಡಯ್ಯಾ.
--------------
ಅಲ್ಲಮಪ್ರಭುದೇವರು
ಆದಿಯ ಮೂರ್ತಿಯಲ್ಲ, ಅನಾದಿಯ ಬಚ್ಚಬರಿಯ ಶೂನ್ಯವಲ್ಲ, ಅಂಗವಿದ್ದು ಅಂಗವಿಲ್ಲದ ಸಂಗ ಘನಪದದ್ಲ ವೇದ್ಯವಾದ ಮರುಳಶಂಕರದೇವರ ನಿಲವ ಪ್ರಭು ಬಸವಣ್ಣನಿಂದ ಕಂಡು ಬದುಕಿದೆನು ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಕಂಗಳ ತಿರುಳನುರುಹಿ, ಆದಿಯ ಬೀಜವ ವೇದವರಿಯಲ್ಲಿ ಸುಟ್ಟು, ಆ ಭಸ್ಮವ ಹಣೆಯಲ್ಲಿ ಧರಿಸಿ, ಅರಳಿಯ ಮರದೊಳಗಾಡುವ ಗಿಳಿಯ ಎಲೆ ನುಂಗಿತ್ತ ಕಂಡೆ. ಅರಳಿ ಹೂವಾಯಿತ್ತು, ಫಲ ನಷ್ಟವಾಯಿತ್ತು ನೋಡಾ. ಎಲೆ ಉದುರಿತ್ತು, ಆ ಮರದ ಮೊದಲಲ್ಲಿಗೆ ಕಿಚ್ಚನಿಕ್ಕಿ, ಬ್ರಹ್ಮನ ತಲೆಯಲ್ಲಿ ಬೆಣ್ಣೆಯ ಬೆಟ್ಟ ರುದ್ರಲೋಕಕ್ಕೆ ದಾಳಿ ಮಾಡಿ, ಗ್ರಾಮದ ಮಧ್ಯದೊಳಗೊಂದು ಕೊಂಡವ ಸುಟ್ಟು, ಯಜ್ಞ ಪುರುಷನ ಹಿಡಿದು, ಕೈ ಸಂಕಲೆಯನಿಕ್ಕಿ, ಗಂಗೆವಾಳುಕರಿಗೆ ಕೈವಲ್ಯವನಿತ್ತು, ಅಷ್ಟಮೂರ್ತಿಯೆಂಬ ನಾಮವ ನಷ್ಟವ ಮಾಡಿ, ವಿಶ್ವಮೂರ್ತಿಯ ಪಾಶವಂ ಪರಿದು, ಮುಕ್ತಿ ರಾಜ್ಯಕ್ಕೆ ಪಟ್ಟಮಂ ಕಟ್ಟಿ, ರುದ್ರಲೋಕಕ್ಕೆ ದಾಳಿ ಮಾಡಿ, ಆ ಮೂರ್ತಿಗಣೇಶ್ವರರಿಗೆ ಐಕ್ಯಪದವನಿತ್ತು, ಬಟ್ಟಬಯಲ ಕಟ್ಟಕಡೆಯೆನಿಪ ಸಿದ್ಭ ನಿಜಗುರು ಭೋಗಸಂಗನಲ್ಲಿ ಸಯವಾದ ಅಲ್ಲಮ ಅಜಗಣ್ಣ ಚೆನ್ನಬಸವ ಬಸವರಾಜ ಮುಖ್ಯವಾದ ಲಿಂಗಾಂಗಿಗಳ ಪಾದಕ್ಕೆ ನಮೋ ನಮೋ ಎಂದು ಬದುಕಿದೆ.
--------------
ಭೋಗಣ್ಣ
ಒಂದೊಂದು ಮಠದಲ್ಲಿ ತುಂಬಿ ಒಂಬತ್ತರಾಳಾಪ ಸಂಭ್ರಮ ಮೊರೆವುತದೆ ಅಯ್ಯಾ. ಆನತದ ಮೀರಿಪ್ಪ ಮೇಣು ಆದಿಯ ಆಧಾರದಿಂದತ್ತ ತುಂಬಿದಾ ಕೊಡದಲಿ ಒಂದು ಬಿಂದು ಭವಿಸಲು ಸಂದುದಖಿಳ ಬ್ರಹ್ಮಾಂಡವು. ಎನ್ನ ತಂದೆ, ಕಪಿಲಸಿದ್ಧಮಲ್ಲಿಕಾರ್ಜುನಯ್ಯ ನಿಮ್ಮ ಭಕ್ತಿಯಾದಂದ ವಾರುದ್ಥಿಯ ಪರಿಯಾಯ.
--------------
ಸಿದ್ಧರಾಮೇಶ್ವರ
ಪೃಥ್ವಿಯನೆ ಆದಿಯ ಮಾಡಿ, ಅಪ್ಪುವಿನಲ್ಲಿ ಗೋಡೆಯನಿಕ್ಕಿ, ಅಗ್ನಿಯನೆ ಅಪ್ಪುವಿನೊಳಗೆ ಹುದುಗಿಸಿ, ಅಸ್ತಿಯನೆ ಗಳುವ ಮಾಡಿ, ವಾಯುವನೆ ಬೀರಿ, ಆಕಾಶವನೆ ಹೊದಿಸಿ, ಸಹಸ್ರದಳ ಕಮಲವನೆ ಮೇಲುಕಟ್ಟ ಕಟ್ಟಿ, ಬಯಲಮಂಟಪವ ಶೃಂಗಾರವ ಮಾಡಿ, ಒಡೆಯನ ಬರವ ಹಾರುತಿದ್ದೆನಯ್ಯಾ. ಒಡೆಯನ ಬರವ ಹಾರೈಸುವ ಅವಸ್ಥೆಯನೆ ಕಂಡು, ಹಡದಪ್ಪಣ್ಣನೆ ಕರ್ಪುರದ ಸಿಂಹಾಸನವಾಗಿ ನಿಂದರು. ಅದಕ್ಕೆ ಚೆನ್ನಮಲ್ಲೇಶ್ವರನೆ ಜ್ಯೋತಿರ್ಮಯಲಿಂಗವಾಗಿ ಬಂದು ನೆಲೆಗೊಂಡರು. ಜ್ಯೋತಿರ್ಮಯಲಿಂಗವು ಕರ್ಪುರವು ಏಕವಾಗಿ ಪ್ರಜ್ವಲಿಸಿ ಪರಮಪ್ರಕಾಶವಾಯಿತ್ತು. ಈ ಬೆಳಗಿನಲ್ಲಿ ನಾ ನಿಜಮುಕ್ತಳಾದೆನಯ್ಯಾ ಚೆನ್ನಮಲ್ಲೇಶ್ವರ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ತನುಸೂತ್ರಚೈತನ್ಯಕ್ಕಿದ್ದನೊಬ್ಬ, ಮನಸೂತ್ರಚೈತನ್ಯಕ್ಕಿದ್ದನೊಬ್ಬ, ಆತ್ಮಸೂತ್ರಚೈತನ್ಯಕ್ಕಿದ್ದನೊಬ್ಬ, ಈ ಮೂವರ ಮುಂಭಾರವ ಹೊತ್ತು ನಡೆಯದೆ, ಮರೆದು ಬಳಸಿದರ್ಥದ ಬಡ್ಡಿಯನರಿದು ಕೊಟ್ಟು ಮೂಲದ್ರವ್ಯದಲ್ಲಡಗಿ ಅಮರಿಸಬಲ್ಲರೆ ಆದಿಯ ಭಕ್ತನಹುದು ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಆದಿಯ ಮುಟ್ಟಿಬಂದ ಶರಣಂಗೆ ಬದ್ಧ(ಬಂಧ?)ವಿಲ್ಲಯ್ಯಾ. ಜನ್ಮಕೋಟಿ ಕ್ರೂರಕರ್ಮವ ಮಾಡಿದವಂಗೆ, ಸೋಂಕಿನ ಸೊಬಗ ಹೇಳಲಿ(ಲೇ?)ಕೆ ? ಅಂಗದಲ್ಲಿ ಲಿಂಗ ಸೋಂಕಿದ ಶರಣಂಗೆ, ಕಾಯದೊಳಗುಳ್ಳ ಕರಣಂಗಳು ಕಳಾಕುಳ ಕಳಾಭೇದವಯ್ಯಾ ಸುಖದ ಸೋಂಕಿನ ಸೊಬಗ, ಇನ್ನಾರಿಗೆಯೂ ಹೇಳಲಿಲ್ಲ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಅಷ್ಟತನುಮೂರ್ತಿ ಲಿಂಗವೆಂದೆಂಬರು ಕೇಳಿರಯ್ಯಾ: ಆದಿಯ ಮಗ ಅತೀತ, ಅತೀತನ ಮಗ ಆಕಾಶ, ಆಕಾಶನ ಮಗ ವಾಯು, ವಾಯುವಿನ ಮಗ ಅಗ್ನಿ, ಅಗ್ನಿಯ ಮಗ ಅಪ್ಪು, ಅಪ್ಪುವಿನ ಮಗ ಪೃಥ್ವಿ, ಪೃಥ್ವಿಯಿಂದ ಸಕಲ ಜನನವು. ಮನಸಿನ ಮಗ ಚಂದ್ರ, ನಯನದ ಮಗ ಸೂರ್ಯ, ದೇಹದ ಮಗನಾತ್ಮ, ಇಂತೀ ಅಷ್ಟತನುವೆಲ್ಲಕ್ಕೆಯು ಉತ್ಪತ್ಯವುಂಟು. ಉತ್ಪತ್ಯರಹಿತ ಅಯೋನಿಜ ಶೂನ್ಯನಿರಾಳ ನಮ್ಮ ಕೂಡಲಸಂಗಮದೇವಂಗೆ ಮಾತಾಪಿತರಿಲ್ಲ.
--------------
ಬಸವಣ್ಣ
ಮದ್ದ ನಂಬಿಕೊಂಡಡೆ ರೋಗ ಮಾಣದಿಪ್ಪುದೆ ? ಸಜ್ಜನಿಕೆಯುಳ್ಳಡೆ ಪ್ರಸಾದಕಾಯ ಕೆಡುವುದೆ ? ಪ್ರಾಣ, ಲಿಂಗವಾದಡೆ ಪ್ರಾಣ ಬೇರಪ್ಪುದೆ ? ಪ್ರಾಣಲಿಂಗ ಪ್ರಸಾದವನು ತಿಳಿದು ನೀವು ನೋಡಿರೆ, ನಾದ ಬಿಂದು ಸೂಸದ ಮುನ್ನ, ಆದಿಯ ಪ್ರಸಾದವ ಭೇದಿಸಿಕೊಂಡರು_ ಗುಹೇಶ್ವರಾ ನಿಮ್ಮ ಶರಣರು.
--------------
ಅಲ್ಲಮಪ್ರಭುದೇವರು
ಪಾರ್ವತಿಯು ಪರಶಿವನ ಸತಿಯೆಂಬ ಶಿವದ್ರೋಹಿಗಳು ನೀವು ಕೇಳಿರೆ. ಬೆನಕನು ಪರಶಿವನ ಮಗನೆಂಬ ಪಾತಕ ದುಃಖಿಗಳು ನೀವು ಕೇಳಿರೆ. ಸ್ವಾಮಿ ಕಾರ್ತಿಕೇಯನು ನಮ್ಮ ಹರಲಿಂಗನ ಮಗನೆಂಬ ಲಿಂಗದ್ರೋಹಿಗಳು ನೀವು ಕೇಳಿರೆ. ಭೈರವನು ಭಯಂಕರಹರನ ಮಗನೆಂಬ ಭವಹರಗುರುದ್ರೋಹಿಗಳು ನೀವು ಕೇಳಿರೆ. ಅಜಾತನ ಚರಿತ್ರ ಪವಿತ್ರ. ನಮ್ಮ ಗುಹೇಶ್ವರಲಿಂಗಕ್ಕೆ ಪ್ರಸಾದವ ಸಲಿಸಿದಾತ ಪೂರ್ವಾಚಾರಿ ಸಂಗನಬಸವಣ್ಣನ ಮಗನಾಗಿ, ಆದಿಯ ಲಿಂಗ ಅನಾದಿಯ ಶರಣ ಗುರುವಿನ ಗುರು ಪರಮಗುರುವರ[ನ] ತೋರಿದೆನಯ್ಯಾ ಸಿದ್ಧರಾಮಯ್ಯ ಚೆನ್ನಬಸವಣ್ಣನು
--------------
ಅಲ್ಲಮಪ್ರಭುದೇವರು
ಅನಾದಿಯ ಲಿಂಗವ ಕಂಡು, ಆದಿಯ ಪ್ರಸಾದ ಕೊಂಡು, ಆ ಪ್ರಸಾದವಪ್ಪ ಪರಿಣಾಮದಲ್ಲಿ ಬೆಳಗುತಿರ್ಪನಯ್ಯಾ, ಸೌರಾಷ್ಟ್ರ ಸೋಮೇಶ್ವರಾ ನಿಮ್ಮ ಶರಣ.
--------------
ಆದಯ್ಯ
ಇನ್ನಷ್ಟು ... -->
Some error occurred