ಅಥವಾ

ಒಟ್ಟು 114 ಕಡೆಗಳಲ್ಲಿ , 1 ವಚನಕಾರರು , 114 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಥ ಬ್ರಹ್ಮಾಂಡವ ಅರವತ್ತಾ ್ನಲ್ಕು ಸಾವಿರದ ಆರುನೂರಾ ಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಉಗ್ರವೆಂಬ ಭುವನ. ಆ ಭುವನದೊಳು ಲೋಕನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಇಪ್ಪತ್ತುಕೋಟಿ ನಾರಾಯಣ ರುದ್ರ ಬ್ರಹ್ಮಾದಿಗಳಿಹರು ನೋಡಾ. ಮುನ್ನೂರಾ ಇಪ್ಪತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತೆಂಟುಸಾವಿರದ ಮುನ್ನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಅಂಗುಷ್ಠಮಾತ್ರಭುವನಯೆಂಬ ಭುವನ. ಆ ಭುವನದೊಳು ಅಖಂಡಿತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾತೊಂಬತ್ತುಕೋಟಿ ದೇವರ್ಕಳು, ಇಂದ್ರಚಂದ್ರಾದಿತ್ಯರು, ವೇದಪುರುಷರು, ಮುನೀಂದ್ರರು, ನೂರಾತೊಂಬತ್ತುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತೊಂದು ಲಕ್ಷದ ಮೇಲೆ ಸಾವಿರದ ಒಂಬಯಿನೂರಾಯೆಂಟು ಬ್ರಹ್ಮಾಂಡವನೊಳಕೊಂಡುದೊಂದು ಧರ್ಮಪರೇಣವೆಂಬ ಭುವನ. ಆ ಭುವನದೊಳು ಧರ್ಮಾಧರ್ಮರಹಿತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಐವತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಒಂಬತ್ತುನೂರಾ ಐವತ್ತುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತೇಳುಲಕ್ಷದ ಮೇಲೆ ಸಾವಿರದೇಳುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪಾಶಹಸ್ತವೆಂಬ ಭುವನ. ಆ ಭುವನದೊಳು ಗಜಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಎಂಬತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಎಂಟುನೂರಾ ಎಂಬತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರವತ್ತೊಂಬತ್ತು ಸಾವಿರದ ಆರುನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಬ್ರಾಹ್ಮಣವೆಂಬ ಭುವನ. ಆ ಭುವನದೊಳು ಬ್ರಹ್ಮಾದ್ಥಿಪತಿಯೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ನಲವತ್ತೈದುಕೋಟಿ ದೇವರ್ಕಳು ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ಇಹರು ನೋಡಾ. ಮೂನ್ನೂರಾ ನಲವತ್ತೈದುಕೋಟಿ ನಾರಾಯಣರು-ಬ್ರಹ್ಮ-ರುದ್ರಾದಿಗಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತಾರುಲಕ್ಷದ ಮೇಲೆ ಸಾವಿರದ ಮುನ್ನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಉದಂಬರೀಶವೆಂಬ ಭುವನ. ಆ ಭುವನದೊಳು ಉಮಾರಹಿತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರೆಪ್ಪತ್ತೈದುಕೋಟಿ ನಾರಾಯಣರು ಬ್ರಹ್ಮ ರುದ್ರಾದಿಗಳಿಹರು ನೋಡಾ. ಆರುನೂರೆಪ್ಪತ್ತೈದುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತುಕೋಟಿಯ ಮೇಲೆ ಮೂರುಸಾವಿರದಾ ಎಂಟು ಬ್ರಹ್ಮಾಂಡವನೊಳಕೊಂಡುದೊಂದು ವಿಭೂತಿಯೆಂಬ ಭುವನ. ಆ ಭುವನದೊಳು ಅನಾದಿಯೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಸಾವಿರಕೋಟಿಯ ಮೇಲೆ ಇನ್ನೂರುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ಸಾವಿರಕೋಟಿಯ ಮೇಲೆ ಇನ್ನೂರು ಕೋಟಿ ಬ್ರಹ್ಮ ನಾರಾಯಣ ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೆರಡು ಸಾವಿರದ ಇನ್ನೂರಾಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ನಿತ್ಯಾನಂದವೆಂಬ ಭುವನ ಆ ಭುವನದೊಳು ನೀಲಲೋಹಿತನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾಹತ್ತುಕೋಟಿ ರುದ್ರ ಬ್ರಹ್ಮ ನಾರಾಯಣರು ಇಂದ್ರಚಂದ್ರಾದಿತ್ಯರು, ನೂರಾಹತ್ತುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ನಾಲ್ವತ್ತೊಂಬತ್ತುಸಾವಿರದ ನಾನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪಂಚಾಂತಕವೆಂಬ ಭುವನ. ಆ ಭುವನದೊಳು ಅನಂತದೇವಸಂಹಾರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ನಾಲ್ವತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣ, ಇಂದ್ರಚಂದ್ರಾದಿತ್ಯರು, ಇನ್ನೂರಾ ನಾಲ್ವತ್ತೈದುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತಾರುಸಾವಿರದ ಮುನ್ನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಬಲಪ್ರಮದಿನಿಯೆಂಬ ಭುವನ. ಆ ಭುವನದೊಳು ಜ್ಯೋತಿರ್ಮಯನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾ ಎಂಬತ್ತುಕೋಟಿ ಬ್ರಹ್ಮ ನಾರಾಯಣ ರುದ್ರರು, ವೇದಪುರುಷರು, ಮುನೀಂದ್ರರು, ನೂರಾ ಎಂಬತ್ತುಕೋಟಿ ಇಂದ್ರಚಂದ್ರಾದಿತ್ಯರು, ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೈದುಸಾವಿರದ ಇನ್ನೂರನಾಲ್ವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಏಕರುದ್ರವೆಂಬ ಭುವನ. ಆ ಭುವನದೊಳು ಕಾಲಾಂತಕನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾ ಇಪ್ಪತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರು, ಇಂದ್ರಚಂದ್ರಾದಿತ್ಯರು, ನೂರಾ ಇಪ್ಪತ್ತೈದುಕೋಟಿ ವೇದಪುರುಷರು, ಮುನೀಂದ್ರರು, ದೇವರ್ಕಳಿಹರು ನೋಡಾ, ಅಪ್ರಮಾಣಕೂಡಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರುವತ್ತೆರಡು ಸಾವಿರದ ಆರುನೂರಾ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪ್ರಚಂಡವೆಂಬ ಭುವನ. ಆ ಭುವನದೊಳು ಪ್ರಳಯಾಂತಕನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಹತ್ತುಕೋಟಿ ಬ್ರಹ್ಮ ನಾರಾಯಣ ರುದ್ರರಿಹರು. ಮುನ್ನೂರಾ ಹತ್ತುಕೋಟಿ ಇಂದ್ರಚಂದ್ರಾದಿತ್ಯರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತು ಲಕ್ಷದ ಮೇಲೆ ಸಾವಿರದ ಎಂಟುನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಧರ್ಮವೆಂಬ ಭುವನ. ಆ ಭುವನದೊಳು ಧರ್ಮಸ್ವರೂಪನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತು ನೂರಾ ನಾಲ್ವತ್ತೈದು ಕೋಟಿ ದೇವರ್ಕಳು ವೇದಪುರುಷರು ಇಂದ್ರಚದ್ರಾದಿತ್ಯರು ಇಹರು ನೋಡಾ. ಒಂಬತ್ತು ನೂರಾ ನಾಲ್ವತ್ತೈದು ಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತೊಂದುಸಾವಿರದ ಮುನ್ನೂರಾ ಎಂಟು ಬ್ರಹ್ಮಾಂಡವನೊಳಕೊಂಡುದೊಂದು ರೌದ್ರಿಯೆಂಬ ಭುವನ. ಆ ಭುವನದೊಳು ಸಹಸ್ರಾಕ್ಷನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾಐವತ್ತೈದು ಕೋಟಿದೇವರ್ಕಳು, ಇಂದ್ರಚಂದ್ರಾದಿತ್ಯರು, ವೇದಪುರುಷರು, ಮುನೀಂದ್ರರು, ನೂರಾಐವತ್ತೈದು ಕೋಟಿ ನಾರಾಯಣ ರುದ್ರ ಬ್ರಹ್ಮಾದಿಗಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಐವತ್ತೊಂಬತ್ತುಸಾವಿರದ ಐನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಅಜವೆಂಬ ಭುವನ. ಆ ಭುವನದೊಳು ಅಜಕಪಾಲಿಯೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ತೊಂಬತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಇನ್ನೂರಾ ತೊಂಬತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಆಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->