ಅಥವಾ

ಒಟ್ಟು 37 ಕಡೆಗಳಲ್ಲಿ , 1 ವಚನಕಾರರು , 25 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಥ ಬ್ರಹ್ಮಾಂಡವ ಎಪ್ಪತ್ತೈದುಲಕ್ಷದ ಮೇಲೆ ಸಾವಿರದೇಳುನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭದ್ರವೆಂಬ ಭುವನ. ಆ ಭುವನದೊಳು ಭದ್ರಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಎಪ್ಪತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಎಂಟುನೂರಾ ಎಪ್ಪತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣ ಇಂದ್ರಾದಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತೇಳುಲಕ್ಷದ ಮೇಲೆ ಸಾವಿರದೇಳುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪಾಶಹಸ್ತವೆಂಬ ಭುವನ. ಆ ಭುವನದೊಳು ಗಜಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಎಂಬತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಎಂಟುನೂರಾ ಎಂಬತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತುಲಕ್ಷದ ಮೇಲೆ ಸಾವಿರದಾರುನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸುನಾದವೆಂಬ ಭುವನ. ಆ ಭುವನದೊಳು ನಾದಾಂತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ನಲವತ್ತೈದುಕೋಟಿ ಇಂದ್ರ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು. ಎಂಟುನೂರಾ ನಲವತ್ತೈದುಕೋಟಿ ಬ್ರಹ್ಮನಾರಾಯಣ ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತು ಲಕ್ಷದ ಮೇಲೆ ಸಾವಿರದ ಎಂಟುನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಧರ್ಮವೆಂಬ ಭುವನ. ಆ ಭುವನದೊಳು ಧರ್ಮಸ್ವರೂಪನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತು ನೂರಾ ನಾಲ್ವತ್ತೈದು ಕೋಟಿ ದೇವರ್ಕಳು ವೇದಪುರುಷರು ಇಂದ್ರಚದ್ರಾದಿತ್ಯರು ಇಹರು ನೋಡಾ. ಒಂಬತ್ತು ನೂರಾ ನಾಲ್ವತ್ತೈದು ಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತಾರುಲಕ್ಷದ ಮೇಲೆ ಸಾವಿರದ ಎಂಟುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಉಭಯನಖವೆಂಬ ಭುವನ. ಆ ಭುವನದೊಳು ಉಪಮಾತೀತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬಯಿನೂರಾ ಇಪ್ಪತ್ತೈದು ಕೋಟಿ ಬ್ರಹ್ಮ ನಾರಾಯಣ ರುದ್ರಾದಿಗಳಿಹರು ನೋಡಾ. ಒಂಬಯಿನೂರಾ ಇಪ್ಪತ್ತೈದು ಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತೇಳುಸಾವಿರದಾ ಎಂಟುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ದ್ವಿರಂಡವೆಂಬ ಭುವನ. ಆ ಭುವನದೊಳು ದ್ವಿರಂಡಬ್ಥಿನ್ನನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರಮೂವತ್ತೈದುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತೊಂಬತ್ತು ಸಾವಿರದ ಎಂಟುನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಚಂಡವೆಂಬ ಭುವನ. ಆ ಭುವನದೊಳು ಪ್ರಚಂಡನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರನಲವತ್ತೈದು ಕೋಟಿ ದೇವರ್ಕಳು ಮುನೀಂದ್ರರು ವೇದಪುರುಷರು ಇಂದ್ರಚಂದ್ರಾದಿತ್ಯರಿಹರು ನೋಡಾ. ನಾನೂರನಲವತ್ತೈದು ಕೋಟಿ ಬ್ರಹ್ಮ ನಾರಾಯಣ ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತೆಂಟುಸಾವಿರದ ಎಂಟುನೂರಾ ಎಪ್ಪತ್ತೆಂಟು ಬ್ರಹ್ಮಾಡವನೊಳಕೊಂಡುದೊಂದು ಛಂಗವೆಂಬ ಭುವನ. ಆ ಭುವನದೊಳು ಚಕ್ರೇಶ್ವರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರಾನಲವತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ನಾನೂರಾನಲವತ್ತುಕೋಟಿ ಬ್ರಹ್ಮ-ರುದ್ರ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರುವತ್ತೇಳು ಲಕ್ಷದ ಮೇಲೆ ಸಾವಿರದಾ ಆರುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ವಾಯುವೇಗವೆಂಬ ಭುವನ. ಆ ಭುವನದೊಳು ಭೂತನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಮೂವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಎಂಟುನೂರಾ ಮೂವತ್ತುಕೋಟಿ ಇಂದ್ರಚಂದ್ರಾದಿತ್ಯರು, ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತೆರಡುಸಾವಿರದಾ ಎಂಟುನೂರಾ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸ್ಥೂಲೇಶ್ವರವೆಂಬ ಭುವನ. ಆ ಭುವನದೊಳು ಶಾರ್ದೂಲಮುಖನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರಾಹತ್ತುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು ನೋಡಾ. ನಾನೂರಾ ಹತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತೇಳು ಲಕ್ಷದ ಮೇಲೆ ಸಾವಿರದ ಎಂಟುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಕ್ಷರದೃಷ್ಟಿಯೆಂಬ ಭುವನ. ಆ ಭುವನದೊಳು ಅಷ್ಟಮೂರ್ತಿಯೆ ಪಾದಂಗಳಾಗಿಹ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಮೂವತ್ತುಕೋಟಿ ನಾರಾಯಣ ರುದ್ರ ಬ್ರಹ್ಮೇಂದ್ರಾದಿಗಳಿಹರು. ಒಂಬತ್ತುನೂರಾ ಮೂವತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತೈದುಸಾವಿರದಾ ಎಂಟುನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮಂಡಲೇಶ್ವರವೆಂಬ ಭುವನ. ಆ ಭುವನದೊಳು ಮಂಡಲಾಧಿಪನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರಿಪ್ಪತ್ತೈದುಕೋಟಿ ಬ್ರಹ್ಮ-ನಾರಾಯಣ- ರುದ್ರರಿಹರು ನೋಡಾ. ನಾನೂರಿಪ್ಪತ್ತೈದುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರುವತ್ಮೂರುಲಕ್ಷದ ಮೇಲೆ ಸಾವಿರದಾ ಆರುನೂರಾ ಇಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪ್ರಪಂಚಾಂತಕವೆಂಬ ಭುವನ. ಆ ಭುವನದೊಳು ಪಂಚಾನನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಹತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಎಂಟುನೂರಾ ಹತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತಾರುಲಕ್ಷದ ಮೇಲೆ ಸಾವಿರದೇಳುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಶ್ವೇತಮಹಾಬಲವೆಂಬ ಭುವನ. ಆ ಭುವನದೊಳು ಗೋಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಎಪ್ಪತ್ತೈದುಕೋಟಿ ವೇದಪುರುಷರು ಮುನೀಂದ್ರರು ಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ಎಂಟುನೂರಾ ಎಪ್ಪತ್ತೈದುಕೋಟಿ ಇಂದ್ರ ಬ್ರಹ್ಮ ನಾರಾಯಣ ರುದ್ರರಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತೊಂಬತ್ತು ಲಕ್ಷದ ಮೇಲೆ ಸಾವಿರದ ಎಂಟುನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮಾರಣನಿರುತಿಯೆಂಬ ಭುವನ. ಆ ಭುವನದೊಳು ಮಹಾಭೂತಪ್ರಳಯನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತು ನೂರಾ ನಾಲ್ವತ್ತು ಕೋಟಿ ಇಂದ್ರ ಬ್ರಹ್ಮ ನಾರಾಯಣ ರುದ್ರರಿಹರು. ಒಂಬತ್ತು ನೂರಾ ನಾಲ್ವತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->