ಅಥವಾ

ಒಟ್ಟು 6 ಕಡೆಗಳಲ್ಲಿ , 4 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಮನಿಸದಯ್ಯ ಭಕ್ತಿ, ಸೀಮೆಯ ಮೀರಿದ ಸಂಬಂಧಿಗಲ್ಲದೆ. ಸಮನಿಸದಯ್ಯ ಐಕ್ಯವು, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ನಿನ್ನ ಭಕ್ತಿ ನಿಧಾನ ಎಲ್ಲರಿಗೆ ಸುಲಭವೆ?
--------------
ಸಿದ್ಧರಾಮೇಶ್ವರ
ಪೃಥ್ವಿಯೇ ಶೂದ್ರನು, ಜಲವೇ ವೈಶ್ಯನು, ಅಗ್ನಿಯೇ ಕ್ಷತ್ರಿಯನು, ವಾಯುವೇ ಬ್ರಾಹ್ಮಣನು. ಸ್ಥೂಲಶರೀರವೇ ಶೂದ್ರನು, ಸೂಕ್ಷ್ಮಶರೀರವೇ ವೈಶ್ಯನು, ಕಾರಣಶರೀವೇ ಕ್ಷತ್ರಿಯನು, ಜೀವನೇ ಬ್ರಾಹ್ಮಣನು. ಬ್ರಾಹ್ಮಣರಿಗೆ ಋಗ್ವೇದವು, ಕ್ಷತ್ರಿಯರಿಗೆ ಯಜುರ್ವೇದವು, ವೈಶ್ಯರಿಗೆ ಸಾಮವೇದವು, ಶೂದ್ರರಿಗೆ ಅಥರ್ವಣವೇದವು. ಶೂದ್ರರಿಗೆ ಧರ್ಮವು, ವೈಶ್ಯರಿಗೆ ಅರ್ಥವು, ಕ್ಷತ್ರಿಯರಿಗೆ ಕಾಮವು, ಬ್ರಾಹ್ಮಣರಿಗೆ ಮೋಕ್ಷವು, ಬ್ರಾಹಣರಿಗೆ ಪೀತವರ್ಣವು, ಕ್ಷತ್ರಿಯರಿಗೆ ಅರುಣವರ್ಣವು, ವೈಶ್ಯರಿಗೆ ಶ್ಯಾಮವರ್ಣವು, ಶೂದ್ರರಿಗೆ ನೀಲವರ್ಣವು. ಬ್ರಾಹ್ಮಣರಿಗೆ ಸಾಮವು, ಕ್ಷತ್ರಿಯರಿಗೆ ಭೇದವು, ವೈಶ್ಯರಿಗೆ ದಾನವು, ಶೂದ್ರರಿಗೆ ದಂಡವು, ಬ್ರಾಹ್ಮಣರಿಗೆ ಇಂದ್ರನಧಿದೇವತೆಯು, ಕ್ಷತ್ರಿಯರಿಗೆ ಕಾಲನಧಿದೇವತೆಯು, ಶೂದ್ರರು ಭಕ್ತರನ್ನೂ, ವೈಶ್ಯರು ಗುರುವನ್ನೂ, ಕ್ಷತ್ರಿಯರು ಲಿಂಗವನ್ನೂ, ಬ್ರಾಹ್ಮಣರು ಅತಿಥಿಗಳನ್ನೂ ಪೂಜಿಸಬೇಕು. ಶಿವಭಕ್ತನೇ ಬ್ರಾಹ್ಮಣನು, ವಿಷ್ಣುಭಕ್ತನೇ ಕ್ಷತ್ರಿಯನು, ನಿಜವಸ್ತುವು ಉತ್ಕøಷ್ಟತ್ವವಂ ಹೊಂದಿದಲ್ಲಿ ಶ್ರೇಷ*ವಪ್ಪುದು; ಉತ್ಕøಷ್ಟ ವಸ್ತುವು ನಿಜವಂ ಹೊಂದಿದಲ್ಲಿ ಅದೇ ಪರತತ್ವವು. ಇಂತಪ್ಪ ಜಾತಿಧರ್ಮಂಗಳನ್ನು ತನ್ನಲ್ಲಿ ತಾನೇ ತಿಳಿದು ಭಕ್ತನಾಗಿ, ಶೂದ್ರತ್ವಮಂ ಕಳೆದು ಮಾಹೇಶ್ವರನಾಗಿ, ವೈಶ್ಯತ್ವಮಂ ಕಳೆದು ಪ್ರಸಾದಿಯಾದಿ, ಕ್ಷತ್ರಿಯತ್ವಮಂ ಕಳೆದು ಪ್ರಾಣಲಿಂಗಿಯಾಗಿ, ಬ್ರಹ್ಮತ್ವಮಂ ಪಡೆದು ಅಜಾತಮಾಗಿ, ಆಕಾಶರೂಪಮಾಗಿ, ಶುದ್ಧಸ್ಫಟಿಕಸಂಕಾಶಮಪ್ಪ. ಪ್ರಸಾದಲಿಂಗದಲ್ಲಿ ಪರಿಣಾಮಿಸುತ್ತಾ. ಲಿಂಗವೇ ಪತಿ ತಾನೇ ಸತಿಯಾಗಿರ್ಪನೇ ಶರಣನು. ಈ ಸತಿಪತಿನ್ಯಾವಳಿದು ವರ್ಣಾತೀತನೂ ವಾಗತೀತನೂ ಆಗಿ, ತಾನುತಾನಾಗಿರ್ಪುದೇ ಐಕ್ಯವು. ಇಂತಪ್ಪ ಕೇವಲನಿರ್ವಾಣಲಿಂಗೈಕ್ಯಪದವೆನಗೆ ಸಾಧ್ಯಮಪ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಜಂಗಮಕ್ಕೆ ಲಕ್ಷಣವಾವುದೆಂದಡೆ : ಲಿಂಗರೂಪಾಗಿ ಪಾದಾರ್ಚನೆಯ ಮಾಡಿಸಿಕೊಳ್ಳಬೇಕು. ಭಕ್ತಂಗೆ ಲಕ್ಷಣವಾವುದೆಂದಡೆ: ಭೃತ್ಯರೂಪಾಗಿ ಪಾದಾರ್ಚನೆಯ ಮಾಡಬೇಕು. ಜಂಗಮವು ಲಿಂಗರೂಪವಹ ವಿವರವೆಂತೆಂದಡೆ: ಮಾತಿನಲ್ಲಿ ನಾನು ಲಿಂಗರೂಪೆಂದಡೆ ಹರಿಯದು ತನು_ಮನ_ಧನತ್ರಯಂಗಳ ಹಿಡಿದೂ ಹಿಡಿಯದೆ ಮಾಡಿಸಿಕೊಂಬುದೀಗ ಜಂಗಮಕ್ಕೆ ಲಕ್ಷಣ. ಆ ನಿಲವಿಂಗೆ ಭವಂನಾಸ್ತಿ. ಭಕ್ತನು ಭೃತ್ಯರೂಪವಹ ವಿವರವೆಂತೆಂದಡೆ: ಮಾತಿನಲ್ಲಿ ನಾನು ಭ್ಯತ್ಯರೂಪೆಂದಡೆ ಹರಿಯದು. ತನು_ಮನ_ಧನತ್ರಯಂಗಳ ಜೀವನ ಗುಣಕ್ಕಿಕ್ಕದೆ ಗುರುಲಿಂಗಜಂಗಮಕ್ಕೆ ಸಂದಳಿದು ದಾಸೋಹವ ಮಾಡುವುದೀಗ ಭಕ್ತಂಗೆ ಲಕ್ಷಣ. ಆ ನಿಲವಿಂಗೆ ಭವಂನಾಸ್ತಿ. ಇಂತೀ ಉಭಯಕುಳಸ್ಥಳದ ಸಂದಳಿದು ಒಂದಾಗಿ ನಿಂದ ನಿಲವು ಗುಹೇಶ್ವರಲಿಂಗದಲ್ಲಿ ಐಕ್ಯವು !
--------------
ಅಲ್ಲಮಪ್ರಭುದೇವರು
ಆಕಾರವೇ ಭಕ್ತ ನಿರಾಕಾರವೇ ಮಹೇಶ್ವರ ಸಹಕಾರವೇ ಪ್ರಸಾದಿ ಸನ್ಮತ ಈಗಲೇ ಪ್ರಾಣಲಿಂಗಿ ಲೋಕವಿರಹಿತನೇ ಶರಣ ಈ ಭ್ರಾಂತುವಿನ ಬಲೆಯೊಳಗೆ ಸಿಲುಕದಾತನೇ ಐಕ್ಯ. ಅದು ಎಂತು ಎಂದರೆ : ಪೃಥ್ವಿ ಈಗಲೇ ಭಕ್ತ ಅಪ್ಪು ಈಗಲೇ ಮಹೇಶ್ವರ ಅಗ್ನಿ ಈಗಲೇ ಪ್ರಸಾದಿ ವಾಯು ಈಗಲೇ ಪ್ರಾಣಲಿಂಗಿ ಆಕಾಶ ಈಗಲೇ ಶರಣ ಈ ಪಂಚತತ್ವದ ಒಳಗೆ ಬೆಳಕು ಕತ್ತಲೆ ಐಕ್ಯವು. ಇದು ಕಾರಣ, ಕೂಡಲಚೆನ್ನಸಂಗಮದೇವಯ್ಯಾ ನಿಮ್ಮ ಶರಣ ಪಂಚತತ್ವದ ಒ?ಗೆ ಪಂಚತತ್ವ ಪಂಚತತ್ವ ಎಂಬ ಅಣ್ಣಗಳಿರಾ ನೀವು ಕೇಳಿರೊ.
--------------
ಚನ್ನಬಸವಣ್ಣ
ಭಾವವಳಿಯದೆ ಬಯಕೆ ಸವೆಯದೆ ಐಕ್ಯವು ಅವ ಘನವೆಂದಡಹುದೆ? ಶಬ್ದ ಸಂಭ್ರಮದ ಮದವಳಿಯದೆ, ತನ್ನ ಇದಿರಲ್ಲಿ ಪ್ರತಿಯುಳ್ಳಡೆ, ಏನೆಂದಡೂ ಅಹುದೆ? ಗುಹೇಶ್ವರನೆಂಬ ಶಬ್ದಸಂದಳಿಯದೆ ಬೇಸತ್ತು ಬಯಲಾದಡೆ ಆಯತವಹುದೆ?
--------------
ಅಲ್ಲಮಪ್ರಭುದೇವರು
`ಯಥಾ ಭಾವಸ್ತಥಾ ದೇವಃ' ಎಂದ ಬಳಿಕ, ದೇವರ ಬಯಲ ಭಾವ ತನ್ನ್ಲ ಇಂಬುಗೊಂಡಡೆ ಮುಕ್ತಿ. ದೇವ ರೀತಿಯೊಂದು ತನ್ನ ರೀತಿಯೊಂದಾದ ಬಳಿಕ, ಘಟಿಸದು ಕಪಿಲಸಿದ್ಧಮಲ್ಲಿಕಾರ್ಜುನನ ಐಕ್ಯವು.
--------------
ಸಿದ್ಧರಾಮೇಶ್ವರ
-->