ಅಥವಾ

ಒಟ್ಟು 4 ಕಡೆಗಳಲ್ಲಿ , 3 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರು(ರ?)ಣ ಲಿಂಗಾರ್ಚನೆಯ ಮಾಡಲೆಂದು ಪುಷ್ಪಕ್ಕೆ ಕೈಯ ನೀಡಿದಡೆ ಆ ಪುಷ್ಪ ಕರಣದೊಳಗಡಗಿತ್ತಯ್ಯ. ಷೋಡಶ ಕಳೆ ಹದಿನಾರರೆಸಳು ವಿಕಸಿತವಾಯ್ತು. ಪುರುಷ ಪುಷ್ಪದ ಮರನು, ಅದು ಓಗರದ ಗೊಬ್ಬರವನುಣ್ಣದು, ಕಾಮದ ಕಣ್ಣಿರಿಯದು. ನಿದ್ರೆಯ ಕಪ್ಪೊತ್ತದು. ಅರುಣ ಚಂದ್ರಾದಿಗಳಿಬ್ಬರ ತೆರೆಯುಂಡು ಬೆಳೆಯದ ಪುಷ್ಪ ಲಿಂಗವೆ ಧರೆಯಾಗಿ ಬೆಳೆಯಿತ್ತು, ಆ ಪುಷ್ಪ ನೋಡಾ ! ಆ ಪುಷ್ಪವೆಂದಿಗೂ ನಿರ್ಮಾಲ್ಯವಲ್ಲೆಂದು ಗುಹೇಶ್ವರ, ನಿಮ್ಮ ಶರಣ ಪ್ರಾಣಲಿಂಗಕ್ಕೆ ಪ್ರಾಣಪೂಜೆಯ ಮಾಡಿದ.
--------------
ಅಲ್ಲಮಪ್ರಭುದೇವರು
ವಟವೃಕ್ಷದ ಘಟದ ಮಧ್ಯದಲ್ಲಿ ಒಂದು ಮಠವಿಪ್ಪುದು. ಆ ಮಠಕ್ಕೆ ಹಿಂದೆಸೆಯಿಂದ ಬಂದು, ಮುಂದಳ ಬಾಗಿಲ ತೆಗೆದು, ವಿಚ್ಛಂದದ ಕೋಣೆಯ ಕಂಡು, ಕಿಡಿ ನಂದದೆ ದೀಪವ ಕೊಂಡು ಹೊಕ್ಕು, ನಿಜದಂಗದ ಓಗರದ ಕುಂಭವ ಕಂಡು, ಬಂಧವಿಲ್ಲದ ಓಗರವನುಂಡು, ಸದಮಲಲಿಂಗವೆ ತಾನಾದ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ಸ್ವಯಂಭುವಾದ.
--------------
ಶಿವಲೆಂಕ ಮಂಚಣ್ಣ
ಈಳೆ ನಿಂಬೆ ಮಾವು ಮಾದಲಕೆ ಹುಳಿನೀರನೆರೆದವರಾರಯ್ಯಾ? ಕಬ್ಬು ಬಾಳೆ ಹಲಸು ನಾರಿವಾಳಕ್ಕೆ ಸಿಹಿನೀರನೆರೆದವರಾರಯ್ಯಾ? ಕಳವೆ ರಾಜಾನ್ನ ಶಾಲ್ಯನ್ನಕ್ಕೆ ಓಗರದ ಉದಕವನೆರೆದವರಾರಯ್ಯಾ? ಮರುಗ ಮಲ್ಲಿಗೆ ಪಚ್ಚೆ ಮುಡಿವಾಳಕ್ಕೆ ಪರಿಮಳದುದಕವನೆರೆದವರಾರಯ್ಯಾ? ಇಂತೀ ಜಲವು ಒಂದೆ, ನೆಲನು ಒಂದೆ, ಆಕಾಶವು ಒಂದೆ. ಜಲವು ಹಲವು ದ್ರವ್ಯಂಗಳ ಕೂಡಿ ತನ್ನ ಪರಿಬೇರಾಗಿಹ ಹಾಗೆ, ಎನ್ನದೇವ ಚೆನ್ನಮಲ್ಲಿಕಾರ್ಜುನಯ್ಯನು ಹಲವು ಜಗಂಗಳ ಕೂಡಿಕೊಂಡಿರ್ದಡೇನು? ತನ್ನ ಪರಿ ಬೇರೆ.
--------------
ಅಕ್ಕಮಹಾದೇವಿ
ಶರಣ, ಲಿಂಗಾರ್ಚನೆಯ ಮಾಡಲೆಂದು ಪುಷ್ಪಕ್ಕೆ ಕರವ ನೀಡಿದಡೆ, ಆ ಪುಷ್ಪ ನೋಡ ನೋಡ ಕರದೊಳಡಗಿತ್ತಲ್ಲಾ ! ಅದು ಓಗರದ ಗೊಬ್ಬರವ ನುಣ್ಣದು; ಕಾಮದ ಕಣ್ಣರಿಯದು, ನಿದ್ರೆಯ ಕಪ್ಪೊತ್ತದು. ಅದು ಅರುಣ ಚಂದ್ರ[ರ] ತೆರೆಯಲ್ಲಿ ಬೆಳೆಯದು. ಲಿಂಗವೇದಿಯಾಗಿ ಬೆಳೆದ ಪುಷ್ಪವನು ಗುಹೇಶ್ವರಾ ನಿಮ್ಮ ಶರಣನು ಪ್ರಾಣಲಿಂಗಕ್ಕೆ ಪೂಜೆಯ ಮಾಡಿದನು.
--------------
ಅಲ್ಲಮಪ್ರಭುದೇವರು
-->