ಅಥವಾ

ಒಟ್ಟು 155 ಕಡೆಗಳಲ್ಲಿ , 4 ವಚನಕಾರರು , 155 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಿಯಾಣವೆ ಭಾಜನವೆಂಬರು; ಪರಿಯಾಣ ಭಾಜನವಲ್ಲ, ಲಿಂಗಕ್ಕೆ ತನ್ನ ಮನವೆ ಭಾಜನ. ಪ್ರಾಣವನು ಬೀಸರವೋಗಲೀಯದೆ ಮೀಸಲಾಗರ್ಪಿಸಬಲ್ಲಡೆ ಕೂಡಿಕೊಂಡಿಪ್ಪ, ನಮ್ಮ ಕೂಡಲಸಂಗಮದೇವ.
--------------
ಬಸವಣ್ಣ
ಹೊಸತಿಲ ಪೂಜಿಸಿ ಹೊಡವಂಟು ಹೋದ ಒಕ್ಕಲಿತಿಯಂತಾುತ್ತೆನ್ನ ಭಕ್ತಿ. ಜಂಗಮವೆನ್ನೊಡೆಯರೆಂದು ಒಕ್ಕುದ ಕೊಂಡು ಉದಾಸೀನವ ಮಾಡಿದಡೆ, ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ ! ಕೂಡಲಸಂಗಮದೇವ ಅಘೋರನರಕದಲ್ಲಿಕ್ಕುವ. 423
--------------
ಬಸವಣ್ಣ
ಹತ್ತು ಮತ್ತರ ಭೂಮಿ, ಬತ್ತದ ಹಯನು, ನಂದಾದೀವಿಗೆಯ ನಡೆಸಿಹೆವೆಂಬವರ ಮುಖವ ನೋಡಲಾಗದು, ಅವರ ನುಡಿಯ ಕೇಳಲಾಗದು. ಅಂಡಜ, ಸ್ವೇದಜ, ಉದ್ಭಿಜ, ಜರಾಯುಜವೆಂಬ ಪ್ರಾಣಿಗಳಿಗೆ ಭವಿತವ್ಯವ ಕೊಟ್ಟವರಾರೊ ಒಡೆಯರಿಗೆ ಉಂಡಲಿಗೆಯ ಮುರಿದಿಕ್ಕಿದಂತೆ ಎನ್ನಿಂದಲೆ ಆುತ್ತು, ಎನ್ನಿಂದಲೆ ಹೋುತ್ತು ಎಂಬವನ ಬಾಯಲ್ಲಿ ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ ಕೂಡಲಸಂಗಮದೇವ 225
--------------
ಬಸವಣ್ಣ
ಎತ್ತಿಕೊಳ್ಳಲೇಕೆ, ಮತ್ತಿಳುಹಲೇಕಯ್ಯಾ ಧರಧುರ ಭಕ್ತಿಯ ಮಾಡಲೇಕಯ್ಯಾ ನಿಂದಿಸಲೇಕೆ ಸ್ತುತಿುಸಲೇಕೆ ಹೋಗಬಿಟ್ಟು ಜಂಗಮವ ಹಿಂದೆಯಾಡುವನ ಬಾಯಲ್ಲಿ ಮೆಟ್ಟಿ ಹುಡಿಹೊಯ್ಯದೆ ಮಾಬನೆ ಕೂಡಲಸಂಗಮದೇವ 420
--------------
ಬಸವಣ್ಣ
ಭಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ ವಿರಹಿತ ಹೋಗಬಾರದು. ಲಿಂಗಸಂಬಂದ್ಥಿಯಾದಡೆ ಜಂಗಮಪ್ರೇಮಿ ನೀನಾಗು, ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ, ಜಂಗಮದಲ್ಲಿ ನಿರುತ ಭರಿತ, ಕೂಡಲಸಂಗಮದೇವ.
--------------
ಬಸವಣ್ಣ
ಆಕಳ, ಕಳ್ಳರು ಕೊಂಡೊಯ್ದರೆನ್ನದಿರಿಂ ಭೋ, ನಿಮ್ಮ ಧರ್ಮ ! ಬೊಬ್ಬಿಡದಿರಿಂ ಭೋ, ನಿಮ್ಮ ಧರ್ಮ ! ಅರರಸಾಡದಿರಿಂ ಭೋ, ನಿಮ್ಮ ಧರ್ಮ ! ಅಲ್ಲಿ ಉಂಬಡೆ ಸಂಗ, ಇಲ್ಲಿ ಉಂಬಡೆ ಸಂಗ, ಕೂಡಲಸಂಗಮದೇವ ಏಕೋಭಾವ.
--------------
ಬಸವಣ್ಣ
ಕಡಿ[ಯೆ] ಕುಳ್ಳಿರಿಸಿದಲ್ಲಿ, ಕತ್ತಿಯನೆತ್ತಿ ಹೊಡೆ[ಯೆ] ಹೊಡೆ[ಯೆ] ಬದುಕಿದವರುಂಟು, ತಲೆಯ ಕಡಲ ನಡುವೆ ಹಡಗೊ[ಡೆ]ದು ಹಲಗೆಯ ಹಿಡಿದು ತಡಿಗೆ ಸೇರಿ ಬದುಕಿದವರುಂಟು, ತಲೆಯ ಎನ್ನೊಡೆಯ ಕೂಡಲಸಂಗಮದೇವ ಬರೆದ ಬರಹವ ತೊಡೆಯಬಲ್ಲರೆ ಹರಿ ಸುರ ಬ್ರಹ್ಮಾದಿಗಳು.
--------------
ಬಸವಣ್ಣ
ಹುತ್ತವ ಕಂಡಲ್ಲಿ ಹಾವಾಗಿ, ನೀರ ಕಂಡಲ್ಲಿ [ಒಳ್ಳೆ]ಯಾದವನ ಮಚ್ಚುವನೆ ಬಾರದ ಭವಂಗಳಲ್ಲಿ ಬರಿಸುವನಲ್ಲದೆ ಮಚ್ಚುವನೆ ಅಘೋರನರಕವನುಣಿಸುವನಲ್ಲದೆ, ಮಚ್ಚುವನೆ ಅಟಮಟದ ಭಕ್ತರ ಕಂಡಡೆ, ಕೋಟಲೆಗೊಳಿಸುವ ಕೂಡಲಸಂಗಮದೇವ.
--------------
ಬಸವಣ್ಣ
ಅಡವಿಯೊಳಗೆ ಹೊಲಬುಗೆಟ್ಟ ಪಶುವಿನಂತೆ `ಅಂಬೆ ಅಂಬೆ' ಎಂದು ಕರೆವುತ್ತಲಿದ್ದೇನೆ, `ಅಂಬೆ ಅಂಬೆ' ಎಂದು ಒರಲುತ್ತಲಿದ್ದೇನೆ, ಕೂಡಲಸಂಗಮದೇವ `ಬಾಳು ಬಾಳೆಂಬನ್ನಕ್ಕ. 54
--------------
ಬಸವಣ್ಣ
ಬಿದಿರಲಂದಣವಕ್ಕು, ಬಿದಿರೆ ಸತ್ತಿಗೆಯಕ್ಕು, ಬಿದಿರಲ್ಲಿ ಗುಡಿಯು ಗೂಡಾರವಕ್ಕು, ಬಿದಿರಲ್ಲಿ ಸಕಲಸಂಪದವೆಲ್ಲವು, ಬಿದಿರದವರ ಮೆಚ್ಚ ಕೂಡಲಸಂಗಮದೇವ. 221
--------------
ಬಸವಣ್ಣ
ಇಂದು ಹುಟ್ಟಿದ ಕೂಸಿಂಗೆ ಇಂದೆ ಜವ್ವನವಾಯಿತ್ತಯ್ಯಾ. ಆ ಕೂಸು ಬೀದಿಯಲ್ಲಿ ಒತ್ತೆಗೊಳಲು ನಿಂದಿತ್ತಯ್ಯಾ. ಇದರ ಸಂಗಸುಖದನುಭಾವವನು ಕೂಡಲಸಂಗಮದೇವ ತಾನೆ ಬಲ್ಲ.
--------------
ಬಸವಣ್ಣ
ಅಷ್ಟಷಷ್ಟಿಯಾದವರೆಲ್ಲ ತೀರ್ಥವಾಸಿಗಳಪ್ಪರೆ ? ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡುವರೆಲ್ಲ ಲಿಂಗಾರ್ಚಕರಪ್ಪರೆ, ಅಯ್ಯಾ ? ವೇಷವ ಹೊತ್ತು ಗ್ರಾಸಕ್ಕೆ ತಿರುಗುವ ಈ ವೇಷ ದುರಾಚಾರಿಗಳ ಮೆಚ್ಚುವನೆ ಕೂಡಲಸಂಗಮದೇವ ?
--------------
ಬಸವಣ್ಣ
ಎಲ್ಲರ ಪ್ರಾಣಲಿಂಗ ಒಂದೆ ಕಂಡಯ್ಯಾ, ಎನ್ನ ಪ್ರಾಣಲಿಂಗ ಬೇರೆ ಕಂಡಯ್ಯಾ. ಕೂಡಲಸಂಗಮದೇವ ಕೇಳಯ್ಯಾ, ಜಂಗಮವೆನ್ನ ಪ್ರಾಣಲಿಂಗ ಕಂಡಯ್ಯಾ.
--------------
ಬಸವಣ್ಣ
ಆರಾಧನೆಯ ಮಾಡಿದಡೆ ಅಮೃತದ ಬೆಳಸು, ವಿರೋದ್ಥಿಸಿದಡೆ ವಿಷದ ಬೆಳಸು, ಇದು ಕಾರಣ ಜಂಗಮಕ್ಕೆ ಅಂಜಲೇಬೇಕು. ಸ್ಥಾವರ ಜಂಗಮ ಒಂದೆಂದರಿದಡೆ ಕೂಡಲಸಂಗಮದೇವ ಶರಣಸನ್ನಿಹಿತ. 422
--------------
ಬಸವಣ್ಣ
ದೇವನೊಳ್ಳಿದನೆಂದು ಮುಯ್ಯಾನಲು ಬೇಡ, ತರಕಟಗಾಡಿದನೊಳ್ಳಿದನೆ ಅಳಿಸುವ ನಗಿಸುವನೊಳ್ಳಿದನೆ ಬೆಚ್ಚದೆ ಬೆದರದೆ ತೊತ್ತುತನವ ಮಾಡಲು, ತನ್ನನೀವ ಕೂಡಲಸಂಗಮದೇವ. 148
--------------
ಬಸವಣ್ಣ
ಇನ್ನಷ್ಟು ... -->