Some error occurred
ಅಥವಾ

ಒಟ್ಟು 63 ಕಡೆಗಳಲ್ಲಿ , 28 ವಚನಕಾರರು , 59 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

Created with Highcharts 3.0.6Chart context menuಪದವಿರುವ ವಚನಗಳುವಚನಕಾರರು11101111153212111312112511711ಒಟ್ಟು10ಅಕ್ಕಮಹಾದೇವಿ18ಅರಿವಿನಮಾರಿತಂದೆ3ಅಲ್ಲಮಪ್ರಭುದೇವರು55ಅವಸರದರೇಕಣ್ಣ14ಏಲೇಶ್ವರಕೇತಯ್ಯ21ಕಾಡಸಿದ್ಧೇಶ್ವರ 6ಗುಹೇಶ್ವರಯ್ಯ 136ಗೋಣಿಮಾರಯ್ಯ 7ಚನ್ನಬಸವಣ್ಣ50ಚೆನ್ನಯ್ಯ 30ತೋಂಟದಸಿದ್ಧಲಿಂಗಶಿವಯೋಗಿಗಳು 27ದಾಸೋಹದಸಂಗಣ್ಣ 11ದೇಶಿಕೇಂದ್ರಸಂಗನಬಸವಯ್ಯ 9ನಗೆಯಮಾರಿತಂದೆ48ನೀಲಮ್ಮ 112ಪ್ರಸಾದಿಭೋಗಣ್ಣ 1ಬಸವಣ್ಣ81ಬಿಬ್ಬಿಬಾಚಯ್ಯ79ಭೋಗಣ್ಣ 8ಮಾದಾರಧೂಳಯ್ಯ 76ಮೂರುಸಾವಿರಮುಕ್ತಿಮುನಿ 23ಮೆರೆಮಿಂಡಯ್ಯ19ಮೋಳಿಗೆಮಾರಯ್ಯ 53ಸಂಗಮೇಶ್ವರದಅಪ್ಪಣ್ಣ 40ಸಗರದಬೊಮ್ಮಣ್ಣ 5ಸಿದ್ಧರಾಮೇಶ್ವರ20ಹಡಪದಪ್ಪಣ್ಣಗಳಪುಣ್ಯಸ್ತ್ರೀಲಿಂಗಮ್ಮ4ಹೇಮಗಲ್ಲಹಂಪ 051015
ಮೂಗಿನಲ್ಲಿ ಕಂಡು, ಮೂರ್ತಿಯ ಕಂಗಳಲ್ಲಿ ಮಾಡಿಸಿ, ಕಿವಿಯಲ್ಲಿ ಶೋಭನ, ತಲೆಯಲ್ಲಿ ಕೈಗೂಡಿ, ಕಣ್ಣ ಕಾಡಿನ ತಲೆ ಹೊಲದಲ್ಲಿ ಸತ್ತದೇವರ ಕಂಡು, ಹುಟ್ಟಿದ ಗಿಡುವಿನ ಪತ್ರೆಯ ಕೈ ಮುಟ್ಟದೆ ಕೊಯ್ದು, ಬತ್ತಿದ ಕೆರೆಯ ಜಲವ ತುಂಬಿಕೊಂಡು, ಬಂದು ಮುಟ್ಟಿ ಪೂಜಿಸಹೋದಡೆ ಸತ್ತ ದೇವರೆದ್ದು ಪೂಜಾರಿಯ ನುಂಗಿದರು ನೋಡಾ. ತಲೆಯಲ್ಲಿ ನಡೆದು, ತಲೆಗೆಟ್ಟು ನಿರಾಳವಾದ ನಿಜಗುರು ಭೋಗೇಶ್ವರಾ, ನಿಮ್ಮ ಶರಣರಿಗಲ್ಲದೆ ಸತ್ತದೇವರನು ಸಾಯದವರು ಪೂಜಿಸಿ ನಿತ್ಯವ ಹಡೆದೆಹೆನೆಂಬ ಮಾತೆಲ್ಲಿಯದೊ ?
--------------
ಭೋಗಣ್ಣ
ಶಬ್ದಿಯಾದಾತ ತರುಗಳ ಹೋತ, ನಿಶ್ಶಬ್ದಿಯಾದಾತ ಪಾಷಾಣವ ಹೋತ. ಕೋಪಿಯಾದಾತ ಅಗ್ನಿಯ ಹೋತ, ಶಾಂತನಾದಾತ ಜಲವ ಹೋತ. ಬಲ್ಲೆನೆಂಬಾತ ಇಲ್ಲವೆಯ ಹೋತ, ಅರಿಯೆನೆಂಬಾತ ಪಶುವ ಹೋತ. ಇದು ಕಾರಣ_ಅರಿಯೆನೆನ್ನದೆ ಬಲ್ಲೆನೆನ್ನದೆ ಅರುಹಿನ ಕುರುಹನಳಿದುಳಿದು ಗುಹೇಶ್ವರನೆಂಬ ಲಿಂಗವ ಹೋತವರನಾರನೂ ಕಾಣೆ.
--------------
ಅಲ್ಲಮಪ್ರಭುದೇವರು
ಘನಕ್ಕೆ ಮಹಾಘನಗಂಬ್ಥೀರ ಭಕ್ತ ಮಹೇಶ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಸನ್ಮಾನಿತರು, ನಿರವಯವಸ್ತುವಿನ ಪ್ರತಿಬಿಂಬರಾಗಿ, ತಮ್ಮ ತಾವರಿದು. ಚತುರ್ವಿಧ ವಿಸರ್ಜನೆಯನರಿದಾಚರಿಸುವುದು. ಆ ವಿಸರ್ಜನೆಗಳಾವಾವೆಂದಡೆ : ಮಲಮೂತ್ರವೆರಡನು ವಿಸರ್ಜನೆಯಿಂದ ಬಿಡುವಂಥದೆ ಸ್ಥೂಲಾಚಮನವೆನಿಸುವುದು. ಕ್ರೀಡಾವಿಲಾಸದಿಂದ ತಮ್ಮರ್ಧಾಂಗವೆಂದು ಭಕ್ತಗಣಸಾಕ್ಷಿಯಾಗಿ ವಿರಾಜಿಸುವಂಥ ಕ್ರಿಯಾಂಗನೆಯಲ್ಲಿ ವೀರ್ಯವ ಬಿಡುವಂಥಾದ್ದೊಂದು ಸ್ತೂಲಾಚಮನವೆನಿಸುವುದು. ಈ ಸ್ಥೂಲಾಚಮನಗಳ ಮಾಡಿದ ವೇಳೆಯಲ್ಲಿ ದಂತಗಳ್ಮೂವತ್ತೆರಡನು ತೀಡಿ, ಲಿಂಗಾಂಗ ಮಜ್ಜನಂಗೈದು, ಸರ್ವೋಪಚಾರಂಗಳಿಂ ಕ್ರಿಯಾಜಪ ಜ್ಞಾನಜಪ ಮಹಾಜ್ಞಾನಜಪ ಪರಿಪೂರ್ಣಾನುಭಾವಜಪಂಗಳೊಳ್ ಲಿಂಗಜಂಗಮ ಜಂಗಮಲಿಂಗಾರ್ಪಣವ ಮಾಡುವುದು. ಶಿವಶರಣಗಣಾರಾಧ್ಯರು ಲಿಂಗಾಬ್ಥಿಷೇಕ ಅರ್ಚನಾದಿಗಳ ಮಾಡಿ, ಅರ್ಪಣ ಸಂದ್ಥಿನಲ್ಲಿ ಜಲತೋರಿಕೆಯಾಗಿ ವಿಸರ್ಜಿಸಿ, ಉದಕವ ಬಳಸಿದ ವೇಳೆಯೊಳು, ಲಿಂಗಬಾಹ್ಯರಸಂಗಡ ಪ್ರಸಂಗಿಸಿದರೂ ದೀಕ್ಷಾಜಲದಿಂದ ಆರುವೇಳೆ ಲಿಂಗಸ್ಪರಿಶನದಿಂದ ಜಿಹ್ವೆಯ ಪ್ರಕ್ಷಾಲಿಸಿ, ಮುಖ ಮಜ್ಜನವಮಾಡಿ, ಲಿಂಗಾರ್ಚನಾರ್ಪಣವನುಭಾವಗಳ ಮಾಡುವುದು, ಇದು ಸೂಕ್ಷ್ಮಾಚಮನವೆನಿಸುವುದು. ಪ್ರಮಾಣಗಳಾದರೂ ಅನುವಲ್ಲದೆ ವಿಪತ್ತಿನ ವೇಳೆಯಾಗಲಿ, ಜಲ ಪರಿಹರಿಸಿದಲ್ಲಿ ಪರಿಣಾಮಜಲದಿಂದ ಆ ಸ್ಥಾನವ ಪ್ರಕ್ಷಾಲಿಸಿ, ಹಸ್ತಪಾದವ ತೊಳೆದು ಉದಕವ ಶೋದ್ಥಿಸಿ, ಲಿಂಗಸ್ಪರಿಶನವಗೈದು, ಆರುವೇಳೆ ಜಿಹ್ವೆಯ ಪ್ರಕ್ಷಾಲಿಸಿ, ಸತ್ಯೋದಕದ ಪರಮಾನಂದಜಲ ಮಹಾಜ್ಞಾನಪ್ರಣಮಪ್ರಸಾದಂಗಳ ಗುಟುಕ ಲಿಂಗಮಂತ್ರ ನೆನಹಿನೊಡನೆ ಸೇವಿಸುವುದು. ಲಿಂಗಬಾಹ್ಯರ ಸಂಗಡಪ್ರಸಂಗಿಸಿದೊಡೆ ಇದೇ ರೀತಿಯಲ್ಲಿ ಮುಖಪ್ರಕ್ಷಾಲನಂಗೈದು ಆಚರಿಸುವುದು. ಇದಕೂ ಮೀರಿದರೆ ಜಲಬಿಟ್ಟು, ಭವಿಗಳಸಂಗಡ ಪ್ರಸಂಗವ ಮಾಡಿದರೆ ಆ ಸಮಯದಲ್ಲಿ ಪ್ರಮಾದವಶದಿಂದ ಉದಕವು ದೊರೆಯದಿದ್ದರೆ ಅಲ್ಲಿ ವಿಸರ್ಜನಸ್ಥಾನವ ದ್ರವವಾರುವಂತೆ ಶುಚಿಯುಳ್ಳ ಮೃತ್ತಿಕೆ ಪಾಷಾಣ ಕಾಷ್ಠ ಕಾಡುಕುರುಳು ಪರ್ಣಗಳಿಂದ ಪ್ರಕ್ಷಾಲನಂಗೈದು, ಜಿಹ್ವಾಗ್ರದಲ್ಲಿ ಸಂಬಂಧವಾದ ಗುರುಲಿಂಗೋದಕದಿಂದ ಮತ್ತಾ ಜಿಹ್ವೆಯ ಪ್ರಕ್ಷಾಲಿಸಿ, ಆರುವೇಳೆ ತೂವರಂಗೈದು, ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಶ್ರೀಗುರುಬಸವಲಿಂಗಾಯೆಂದು ಘನಮನವ ಚಿದ್ಘನಲಿಂಗಪ್ರಸನ್ನಧ್ಯಾನದಿಂದ ನವನಾಳವೆಂಬ ಕವಾಟಬಂಧನಂಗೈದು, ಪ್ರದಕ್ಷಣವಮಾಡಿ, ಪರಿಪೂರ್ಣ ಚಿದ್ಬೆಳಗಿನೊಳು ಮತ್ತೆಂದಿನಂತೆ ಅತಿಜಾಗ್ರವೆಂಬ ಮಹಾದರುವಿನೊಳ್ ಸತ್ಕøತ್ಯ ಸದ್ಧರ್ಮರಾಗಿರ್ಪುದು. ಮುಂದೆ ಲಿಂಗಾರ್ಚನಾರ್ಪಣಗಳ ಮಾಡಬೇಕಾದರೆ, ಶುದ್ಧೋದಕದಿಂದ ಲಿಂಗಾಬ್ಥಿಷೇಕಸ್ನಾನಂಗೈದು, ಪಾವುಡಗಳ ಮಡಿಮಾಡಿ ಪರಿಣಾಮಾರ್ಪಣ ತೃಪ್ತರಾಗಿರ್ಪುದು. ಇದಕೂ ಮೀರಿದರೆ, ಜಲವ ಬಿಡುವುದು, ಭವಿಗಳಸಂಗಡ ಪ್ರಸಂಗಿಸಿದರೆ ಸ್ನಾನಮಾಡುವ ಪರಿಯಂತರ ಜಿಹ್ವಾಗ್ರದಲ್ಲಿ ಸ್ಥಾಪ್ಯವಾದ ಸತ್ಯಶುದ್ಧ ಗುರುಲಿಂಗೋದಕ ಮಹಾಪ್ರಣಮಪ್ರಸಾದವೆ ಮೊದಲು ಕ್ರಿಯಾಘನ ಗುರುಲಿಂಗಜಂಗಮಾರ್ಚನೆ ತೀರ್ಥಪ್ರಸಾದಸೇವನೆಗಳಂ ಮಾಡಲಾಗದು. ಇದಕೂ ಮೀರಿದರೆ, ತನ್ನ ದೀಕ್ಷಾಗುರು ಶಿಕ್ಷಾಗುರು ಮೋಕ್ಷಾಗುರು ಪರಿಪೂರ್ಣಗುರುಸ್ಮರಣೆ ಧ್ಯಾನದಿಂದ ಸರ್ವಾವಸ್ಥೆಗಳ ನೀಗಿ, ಮಹಾಬಯಲ ಬೆರೆವುದು. ಇದಕೂ ಮೀರಿದರೆ, ತನುವಿಗೆ ಆಯಸದೋರಿ, ಆಪ್ತರಾರೂ ಇಲ್ಲದಂತೆ, ಪರಿಣಾಮಜಲ ದೊರೆಯದ ವೇಳೆಯೊಳು ಮಲಮೂತ್ರಗಳೆರಡೂ ತೋರಿಕೆಯಾದರೆ, ಎಲ್ಲಿ ಪರಿಯಂತರ ಸಂಶಯಗಳುಂಟೊ ಅಲ್ಲಿ ಪರಿಯಂತರವು ಎರಡನೂ ವಿಸರ್ಜಿಸುವುದು. ಆ ಸಂಶಯ ತೀರಿದಲ್ಲಿ ಉದಕವಿದ್ದಲ್ಲಿಗೆ ಹೋಗಿ, ಪೂರ್ವದಂತೆ ಮೃತ್ತಿಕಾಶೌಚಗಳ ಬಳಸಿ, ನಿರ್ಮಲವಾಗಿ ತೊಳೆದು, ಹಸ್ತಪಾದಗಳ ಪ್ರಕ್ಷಾಲಿಸಿ, ಆ ಸಮಯದಲ್ಲಿ ಕ್ರಿಯಾಭಸಿತವಿದ್ದರೂ ರಸಯುಕ್ತವಾದ ಪದಾರ್ಥವಾದರೂ ಪುಷ್ಪಪತ್ರಿಗಳಾದರೂ ಇದ್ದರೆ ಸತ್ಕ್ರಿಯಾಲಿಂಗಾರ್ಚನಾರ್ಪಣಗಳಿಗೆ ಬಾರವು. ಆದ್ದರಿಂದ ಅವು ಇದ್ದವು ನಿಕ್ಷೇಪವ ಮಾಡುವುದು. ಕ್ರಿಯಾಗುರು ಲಿಂಗಜಂಗಮಮುಖದಿಂದ ಶುದ್ಧೋದಕವ ಮಾಡಿ, ತ್ರಿವಿಧ ಸ್ನಾನಂಗೈದು, ಪುರಾತನೋಕ್ತಿಯಿಂದ ಜಂಗಮಲಿಂಗದಲ್ಲಿ ಚಿದ್ಭಸಿತವ ಬೆಸಗೊಂಡು, ಸತ್ಕ್ರಿಯಾರ್ಪಣಗಳನಾಚರಿಸಿ, ನಿತ್ಯಮುಕ್ತರಾಗಿರ್ಪವರೆ ಪೂರ್ವಾಚಾರ್ಯಸಗುಣಾನಂದಮೂರ್ತಿಗಳೆಂಬೆ ಕಾಣಾ ನಿರವಯಪ್ರಭು ಮಹಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಮಲವ ಕಳೆವಲ್ಲಿ, ಜಲವ ಬಿಡುವಲ್ಲಿ, ರುಜೆರೋಗಂಗಳು ಬಿಡುವಲ್ಲಿ, ಸಕಲಸುಖಭೋಗಂಗಳ ಹಿಡಿವಲ್ಲಿ, ಅಧಮ ವಿಶೇಷವೆಂಬ ಭಾವಂಗಳು ಅಂಗವ ಮುಟ್ಟುವಲ್ಲಿ, ಅಂಗಕ್ಕೆ ಕಟ್ಟು, ಆತ್ಮಂಗೆ ವ್ರತ, ಏಲೇಶ್ವರಲಿಂಗದ ಕೂಟ ತಪ್ಪದಿರಬೇಕು.
--------------
ಏಲೇಶ್ವರ ಕೇತಯ್ಯ
ಕಪ್ಪೆ ಸತ್ತು ಸರ್ಪನ ನುಂಗಿತ್ತು ನೋಡಾ. ಮೊಲ ಸತ್ತು ಬಲೆಯ ಮೀರಿತ್ತು ನೋಡಾ. ಮತ್ತೊಡೆದು ಜಲವ ನುಂಗಿತ್ತು ನೋಡಾ. ಜೀವ ಸತ್ತು ಕಾಯ ನುಂಗಿತ್ತು ನೋಡಾ. ಉದಕ ಒಡೆದು ಏರಿ ತುಂಬಿತ್ತು, ರೆಕ್ಕೆ ಮುರಿದು ಪಕ್ಷಿ ಹಾರಿತ್ತು. ಹಾರುವ ಪಕ್ಷಿಯ ಮೀರಿ ನಿಂದಿತ್ತು ಬಯಲು. ನುಂಗಿದ ಬಯಲವ, ಹಿಂಗಿದ ಪಕ್ಷಿಯ ಕಂಗಳು ನುಂಗಿತ್ತು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕ್ರಿಯಾಸಂಪದನಾದಲ್ಲಿ, ಉರಿ ಕಾಷ್ಠವ ವೇದ್ಥಿಸಿದಂತಿರಬೇಕು. ಆ ಚರಪರ ಒಡಗೂಡಿದಂತಿರಬೇಕು. ಜಲ ಜಲವ ಕೂಡಿದಂತೆ ಹೆರೆಹಿಂಗುವುದಕ್ಕೊಡಲಿಲ್ಲ. ವಾರಿಯ ಶಿಲೆ ಬಲಿದು ನೋಡ ನೋಡ ನೀರಾದಂತಿರಬೇಕು. ಇಷ್ಟಲಿಂಗಸಂಬಂಧದ ನಿಷ್ಠೆ, ಪ್ರಾಣಕೂಟ ಉಭಯ ಮೋಸವಿಲ್ಲದಿರಬೇಕು, ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
ಭೂಮಿಯನುರುಹಿ ತನ್ನ ನೋಡಿ ಅರ್ಚಿಸುವರಾರಯ್ಯಾ? ಜಲವ ದಹಿಸಿ ತನ್ನ ನೋಡಿ ಅರ್ಚಿಸುವರಾರಯ್ಯಾ? ಅನಲನ ಸುಟ್ಟು ತನ್ನ ನೋಡಿ ಅರ್ಚಿಸುವರಾರಯ್ಯಾ? ಅನಿಲವ ದಗ್ಧ ಮಾಡಿ ತನ್ನ ನೋಡಿ ಅರ್ಚಿಸುವರಾರಯ್ಯಾ? ಭಾವ ದಹನವ ಮಾಡಿ ತನ್ನ ನೋಡಿ ಅರ್ಚಿಸುವರಾರಯ್ಯಾ? ಕರ್ತಾರನ ಕರ್ಮವನುರುಹಿ ತನ್ನ ನೋಡಿ ಅರ್ಚಿಸುವರಾರಯ್ಯಾ? ಸಕಲವನುರುಹಿ ಬೆಳಗ ಮಾಡಿ ಕೂಡ ಅರ್ಚಿಸುವರಾರಯ್ಯಾ? ಅಪ್ರತಿಮಶರಣರಲ್ಲದೆ ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಷಟ್‍ಸ್ಥಲ ಮುಂತಾದ ಪಂಚವಿಂಶತಿತತ್ವ, ಏಕೋತ್ತರಶತಸ್ಥಲ ಮುಂತಾದ ಕ್ರಿಯಾಧರ್ಮಂಗಳಲ್ಲಿ ಆಚರಿಸುವುದು ಪೂರ್ವಕಕ್ಷೆಯ ಭೇದ. ಉತ್ತರಕಕ್ಷೆಯಲ್ಲಿ ಲಕ್ಷಿಸಿ ನೋಡಿಹೆನೆಂದಡೆ, ದ್ವೈತಾದ್ವೈತಂಗಳ ತಿಳಿದು, ಸಕಲ ನಿಃಕಲವ ವಿಚಾರಿಸಿ, ಸ್ಥೂಲ ಸೂಕ್ಷ್ಮ ಕಾರಣ ತನುತ್ರಯಂಗಳ ಕಂಡು, ಇಷ್ಟಕಾಮ್ಯಮೋಕ್ಷಂಗಳ ಗೊತ್ತಗೆಟ್ಟು ತೂರ್ಯಾತುರೀಯವೆಂಬವ ಪರಿಹರಿಸಿ, ತೀತ ಅತೀತವಪ್ಪುದನು ಕುರುಹಿಟ್ಟು, ಸುರಾಳ ನಿರಾಳ ನಿರವಯಸ್ಥಾನವ ಭೇದಿಸಿ ವೇದಿಸಿ, ಘೃತಪಾನವ ಸ್ವೀಕರಿಸಿದ ನಾಲಗೆಯಂತೆ ಬಂಧವಿಲ್ಲದೆ ತತ್ವಮಸಿಯೆಂಬ ಬ್ಥಿತ್ತಿಯ ಮೆಟ್ಟದೆ ಜಲವ ಹೊಯಿದಡೆ ಆ ಜಲಕ್ಕೆ ಆಯುಧದ ಕಲೆದೋರದಂತೆ ನಿಂದ ನಿಜದೊಳಗು ಉತ್ತರಕಕ್ಷೆಯ ಭೇದ. ಇಂತೀ ಉಭಯಕಕ್ಷೆಯಲ್ಲಿ ರಾಗವಿರಾಗವನರಿದು, ನಿಶ್ಶಬ್ದ ನಿರ್ಲೇಪವಾಗಿ ಸದ್ಯೋಜಾತಲಿಂಗವ ಕೊಡಬೇಕು.
--------------
ಅವಸರದ ರೇಕಣ್ಣ
ಮಧುರವ ಕೂಡಿದ ಜಲವ ತೆಗೆದು ಬ್ಥಿನ್ನವ ಮಾಡಬಹುದೆ ಅಯ್ಯಾ ? ಘಟವ ಹೊದ್ದಿದ ಬೆಳಗ ಪ್ರಕಟಿಸಬಹುದೆ ಅಯ್ಯಾ ? ಇಂತೀ ಉಭಯದ ತೆರದಂತೆ ಪ್ರಾಣಲಿಂಗಿಯ ಸಂಬಂಧದ ಇರವು. ಮಾತಿನ ಮಾಲೆಯಿಂದ, ನೀತಿಯಲ್ಲಿ ಕಾಬ ವಾದದಿಂದ, ಇಂತಿವರಿಗೇತಕ್ಕೊಲಿವ, ನಿಃಕಳಂಕ ಮಲ್ಲಿಕಾರ್ಜುನ ?
--------------
ಮೋಳಿಗೆ ಮಾರಯ್ಯ
ಎನಗೊಂದು ಲಿಂಗ ನಿನಗೊಂದು ಲಿಂಗ ಮನೆಗೊಂದು ಲಿಂಗವಾಯಿತ್ತು. ಹೋಯಿತ್ತಲ್ಲಾ ಭಕ್ತಿ ಜಲವ ಕೂಡಿ. ಉಳಿ ಮುಟ್ಟದ ಲಿಂಗವ ಮನ ಮುಟ್ಟಬಲ್ಲುದೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಜಲವ ನುಂಗಿತ್ತಯ್ಯಾ ಎನ್ನ ಕರವು, ಪತ್ರೆಯ ನುಂಗಿತ್ತಯ್ಯಾ ಎನ್ನ ಶಿಖೆ, ಎನ್ನಯ ಮಂತ್ರ ಬ್ಥಿನ್ನವಾಯಿತ್ತು. ಇಂತೀ ದ್ವಿವಿಧ ಒಂದಾಗದ ಮುನ್ನ ಕೂಡಲಸಂಗಮದೇವರು ಪೂಜೆಗೊಂಡರು.
--------------
ಬಸವಣ್ಣ
ಆ ಮಾತು, ಈ ಮಾತು, ಹೋ ಮಾತು_ಎಲ್ಲವೂ ನೆರೆದು ಹೋಯಿತ್ತಲ್ಲಾ ಭಕ್ತಿ ನೀರಲ್ಲಿ ನೆರೆದು ಜಲವ ಕೂಡಿ ಹೋಯಿತ್ತಲ್ಲಾ. ಸಾವನ್ನಕ್ಕ [ಸರಸ] ಉಂಟೇ ಗುಹೇಶ್ವರಾ?
--------------
ಅಲ್ಲಮಪ್ರಭುದೇವರು
ಕಂಠಪ್ರಮಾಣ ಜಲವ ಹೊಕ್ಕು ಪದುಮಾಸನವ ಕೊಂಡು ಇದ್ದೆನವ್ವಾ. ಮುಖ ಮುಗಿದು ಆತನ ಧ್ಯಾನಿಸುತ್ತಿರ್ದೆನವ್ವಾ. ಆತ ಬಂದು ಮುಟ್ಟಲೊಡನೆ ಮುಖವರಳ್ದು ಹಿಡಿವೆನು, ಕಪಿಲಸಿದ್ಧಮಲ್ಲಿಕಾರ್ಜುನನ.
--------------
ಸಿದ್ಧರಾಮೇಶ್ವರ
ನೀರ ಕಂಡಲ್ಲಿ ಮುಳುಗುವರಯ್ಯಾ, ಮರನ ಕಂಡಲ್ಲಿ ಸುತ್ತುವರಯ್ಯಾ. ಬತ್ತುವ ಜಲವ, ಒಣಗುವ ಮರನ ಮಚ್ಚಿದವರು ನಿಮ್ಮನೆತ್ತ ಬಲ್ಲರು ಕೂಡಲಸಂಗಮದೇವಾ.
--------------
ಬಸವಣ್ಣ
ಜಲವ ತರದೆ, ಪಾವಕವ ಹೊತ್ತಿಸದೆ, ಪಾಕವ ಮಾಡಿ ಉಣಬಲ್ಲಡೆ ಐಕ್ಯನೆಂಬೆ, ಆರೂಢನೆಂಬೆ, ಆರುಸ್ಥಲವ ಮೀರಿದ ಮಹಾಯೋಗಿ ಎಂಬೆ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->
Some error occurred