ಅಥವಾ

ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯ ! ದರಿದ್ರನಲ್ಲ ಧನಿಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಕುಚಿತ್ತದವನಲ್ಲ ಸುಚಿತ್ತದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಕುಬುದ್ಧಿಯವನಲ್ಲ ಸುಬುದ್ಧಿಯವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಅಹಂಕಾರಿಯಲ್ಲ ನಿರಹಂಕಾರಿಯವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಕುಮನದವನಲ್ಲ ಸುಮನದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಅಜ್ಞಾನದವನಲ್ಲ ಸುಜ್ಞಾನದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ದುರ್ಭಾವದವನಲ್ಲ ಸದ್ಭಾವದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಸಕಲನಲ್ಲ ನಿಃಕಲನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಅರ್ಪಿತನಲ್ಲ ಅನರ್ಪಿತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಆಹ್ವಾನನಲ್ಲ ವಿಸರ್ಜನನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಇಂತು ಉಭಯವಳಿದು ಬೆಳಗುವ ಸಂಗನಬಸವಣ್ಣನ ಕರನಯನದಲ್ಲಿ ಝಗಝಗಿಸುವ ಗುಹೇಶ್ವರಲಿಂಗವು ತಾನೆ ನೋಡ ! ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಅಯ್ಯ ! ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ, ಕ್ಷುತ್ತು, ಪಿಪಾಸೆ, ಶೋಕ, ಮೋಹ, ಜನನ ಮರಣಂಗಳ, ಅಡಿಮೆಟ್ಟಿ ನಿಂದು, ಅಷ್ಟವಿಧಾರ್ಚನೆ_ಷೋಡಶೋಪಚಾರಂಗಳ ಮಾಡಿ ಶಿವನನಂತ ಲೀಲೆಗಳನರ್ಚಿಸಿ ಫಲ_ಪದ_ಮೋಕ್ಷಂಗಳ ಪಡೆಯಬೇಕೆಂಬ ಬಯಕೆಯನುಳಿದು, ಅಂತರಂಗದ ಜ್ಞಾನ, ಬಹಿರಂಗದ ಸತ್ಕ್ರಿಯಾಚಾರಂಗಳಲ್ಲಿ ದೃಢ ಚಿತ್ತದಿಂದ ನಿಂದು, ಹಿಂದೆ ಹೇಳಿದ ಸದ್ಭಕ್ತ_ಮಹೇಶ್ವರ_ಪ್ರಸಾದಿ_ಪ್ರಾಣಲಿಂಗಿ_ಶರಣಸ್ಥಲಂಗಳನೊಳಗು ಮಾಡಿಕೊಂಡು, ಪರಾತ್ಪರ ನಿತ್ಯತೃಪ್ತಾನಂದ ಮೂರ್ತಿಯಾಗಿ, ಝಗಝಗಿಸುವ ನಿಜೈಕ್ಯನಂತರಂಗದಲ್ಲಿ ಚಿದ್ರೂಪಲೀಲೆಯಿಂ ಸಾಕಾರ_ನಿರಾಕಾರ; ಸಕಲ_ನಿಃಕಲತತ್ತ್ವಂಗಳನೊಳಕೊಂಡು, ಹದಿಮೂರು ಸ್ಥಲಂಗಳ ಗರ್ಭೀಕರಿಸಿಕೊಂಡು, ಎಂಟುನೂರ ಆರುವತ್ತನಾಲ್ಕು ಮಂತ್ರಮಾಲಿಕೆಗಳ ಪಿಡಿದುಕೊಂಡು, ಇಪ್ಪತ್ತುನಾಲ್ಕು ಸಕೀಲಗರ್ಭದಿಂ ಜ್ಯೋತಿ ಜ್ಯೋತಿ ಕೂಡಿ ಭಿನ್ನ ದೋರದ ಹಾಂಗೆ ಏಕಸ್ವರೂಪಿನಿಂದ ವೇದಸ್ವರೂಪ ಮಹಾಲಿಂಗವಾಗಿ ನೆಲಸಿರ್ಪುದು ನೋಡ ! ನಿರವಯಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
-->