ಅಥವಾ

ಒಟ್ಟು 8 ಕಡೆಗಳಲ್ಲಿ , 5 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸಯ್ಯನೆನಗೆ ಸಾಲೋಕ್ಯನಯ್ಯಾ, ಚೆನ್ನಯ್ಯನೆನಗೆ ಸಾಮೀಪ್ಯನಯ್ಯಾ. ಕಕ್ಕಯ್ಯನೆನಗೆ ಸಾರೂಪ್ಯನಯ್ಯಾ. ಮಾಚಯ್ಯನೆನಗೆ ಸಾಯುಜ್ಯನಯ್ಯಾ. ದಾಸಯ್ಯನೊಕ್ಕುದ ಕೊಂಡೆನು. ಚನ್ನಯ್ಯನ ಮಿಕ್ಕುದ ಕೊಂಡೆನು. ಕಕ್ಕಯ್ಯನುಂಡು ಮಿಕ್ಕುದ ಕಾದು ಕೊಂಡೆನು. ಮಾಚಯ್ಯನ ಜ್ಞಾನಪ್ರಸಾದವ ಕೊಂಡೆನು. ಪುರಾತರೊಳಗಾಗಿ ಬಸವಣ್ಣನ ಡಿಂಗರಿಗ ಚನ್ನಬಸವಣ್ಣನ ಹಳೆಯನೆಂದು ತಮ್ಮೊಕ್ಕುದನಿಕ್ಕಿ ಸಲಹಿದರು ಕಾಣಾ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಒಕ್ಕುದ ಮಿಕ್ಕುದನುಂಡು ಕಿವಿಕಿವಿದಾಡುವೆ. ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು, ಕೂಡಲಸಂಗನ ಶರಣರ ಮನೆಯ ಭಕ್ತಿಯ ಮರುಳ ನಾನು. 461
--------------
ಬಸವಣ್ಣ
ಭಕ್ತರಾಗಿದ್ದವರು ಭಕ್ತರ ವಿರಕ್ತರ ಮಿಥ್ಯದಿಂದ ನುಡಿವುದು ಸತ್ಯವಲ್ಲ. ಮಿಥ್ಯವನಳಿದು ಸತ್ಯವ ಕುರಿತು ಭಕ್ತ ಜಂಗಮಕ್ಕೆ ತತ್ತ್ವದ ಬಟ್ಟೆಯ ಹೇಳಿದಲ್ಲಿ ನಿತ್ಯ ಅನಿತ್ಯವ ತಿಳಿಯಬೇಕು. ಇದು ಸುಚಿತ್ತದ ಭಾವ. ತನ್ನ ವಂಶ ಕೆಟ್ಟಡೆ ತನಗಲ್ಲದೆ ಅನ್ಯರಿಗಿಲ್ಲ. ಇದು ಕಾರಣದಲ್ಲಿ ತನ್ನಂಗದ ಗಾಯದ ನೋವು ತನಗೆ ಅನ್ಯ ಬ್ಥಿನ್ನವಿಲ್ಲದೆ ತೋರುವವೊಲು ಇದು ನನ್ನಿಯ ನುಡಿದೆ ನೈಸಲ್ಲದೆ ಸಮರಸದ ಸನ್ನರ್ಧನಲ್ಲ. ನೀವಾಡಿಸುವ ಯಂತ್ರದ ತಂತ್ರವಲ್ಲದೆ ಸ್ವತಂತ್ರಿಯಲ್ಲ. ಎನಗೆ ಇದಿರನಾಡೆ ನಾ ಮಾಡುವ ಭಕ್ತಿ ಸತ್ಯ ಸುಚಿತ್ತದ ನಿತ್ಯವಲ್ಲ. ಮೊತ್ತದ ಕರಣಂಗಳ ನಡುವೆ ಸಿಕ್ಕಿ ಮತ್ತನಾಗಿ ಬಿದ್ದವಂಗೆ ವಸ್ತುವಿನ ಬಟ್ಟೆಯ ತೋರಿ ಮುಕ್ತಿಪಥದಲ್ಲಿ ನಿಲುವ ನಿಚ್ಚಣಿಕೆಯನಿಕ್ಕಿ ತೋರಿದ ಭಕ್ತ ದೇಹಿಕ ನಿಜಪದ ತತ್ವ ಸ್ವರೂಪ. ಸಕಲ ಜೀವದ ಆಧಾರ, ಸಕಲಮಯ ಅಖಿಳ ಬ್ರಹ್ಮಾಂಡ ಕರಂಡ ತಮರಿಪು ಕೋದಂಡ, ಶಕ್ತಿಮಯ ಚಂಡಿಕಾ ಕಿರಣದಶ ಉದಕಭರಿತ, ಭಕ್ತಿಭಂಡಾರಿ ಬಸವೇಶ್ವರನ ನಿಜತತ್ವದ್ವಯ ಪಾದಂಗಳಿಗೆ ಮಂಡಿತಮಯನಾಗೆರಗಿದೆ ಸಂದೇಹವೆಂಬ ಕರಂಡವ ಬಂದ ಪ್ರಮಥರ ಸತಿ ಸಂದ ಪ್ರಮಥರ ಡಿಂಗರಿಗ ಗುಪ್ತಮಂಚನ ನಿತ್ಯನೇಮ ಸಂದಿತ್ತು. ವೀರದಾಸನ ದಾಸೋಹ ಸೋಹಂ ಎನುತಿದ್ದಿತ್ತು. ನಾರಾಯಣ ನಯನ ಪೂಜಿತಪದಾಂಬುಜ ವಿಮಲ ಕಮಲ ಸುಲಲಿತ ರಾಮೇಶ್ವರಲಿಂಗ ಎನ್ನೊಳಗಾದಾ.
--------------
ಗುಪ್ತ ಮಂಚಣ್ಣ
ಒಂದುವನರಿಯದ ಸಂದೇಹಿ ನಾನಯ್ಯಾ, ನಂಬುಗೆುಲ್ಲದ ಡಂಬಕ ನಾನಯ್ಯಾ, ನಿಮ್ಮ ನಂಬಿದ ಶರಣರ ಡಿಂಗರಿಗ ನಾನು, ಕೂಡಲಸಂಗಮದೇವಾ. 465
--------------
ಬಸವಣ್ಣ
ಹಿಡಿಯಿಲ್ಲದ ಶಸ್ತ್ರ, ಕೀಲಿಲ್ಲದ ಕತ್ತರಿ, ಉಭಯ ಒಡಗೂಡದ ಚಿಮ್ಮುಟ, ರೂಹಿಲ್ಲದ ಚಣ ಹಲ್ಲಿಲ್ಲದ ಹಣಿಗೆ, ಮಲವಿಲ್ಲದ ಬೆಳಗಿನ ಮುಕುರವ ಹಿಡಿದು ಶರಣರೆಲ್ಲರ ಅಡಿವಿಡಿದಾಡ ಬಂದೆ. ಚೆನ್ನಬಸವಣ್ಣಂಗೆ ಭೃತ್ಯನಾಗಿ, ಶರಣತತಿಗೆ ಲೆಂಕನಾಗಿ ಸತ್ಯ ಗುರುಚರದ ಕರ್ತೃಸ್ವರೂಪಕ್ಕೆ ಡಿಂಗರಿಗ ಉಭಯ ಡಿಂಗರಿಗರ ಪ್ರತಿ ಡಿಂಗರಿಗರ ಕಂದನೆಂದು ಪ್ರತಿಪಾಲಿಸಿಕೋ ಚೆನ್ನಬಸವಣ್ಣಪ್ರಿಯ ಕಮಳೇಶ್ವರಲಿಂಗಾ.
--------------
ಶ್ರೀಗುರು ಪ್ರಭುನ್ಮುನೀಶ್ವರ
ಡಂಬೂ ಡಳುಹೂ ಎನ್ನದಯ್ಯಾ, ಡಂಬಕನೆಂಬವ ನಾನಯ್ಯಾ. ನಿಮ್ಮ ನಂಬಿದ ಶರಣರ [ನಂಬದ] ಡಿಂಗರಿಗ ನಾನು, ಕೂಡಲಸಂಗಮದೇವಾ
--------------
ಬಸವಣ್ಣ
ಹಳಿವವರ ಲೆಂಕ, ಮತ್ಸರಿಸುವವರ ಡಿಂಗರಿಗ, ಸಲೆಯಾಳಿಗೊಂಬವರ ತೊತ್ತಿನ ಮಗ. ಜರಿದು [ಮತ್ಸರಿ]ಸಿ, ಹೊಯ್ದು ಬೈದು ಅದ್ದಲಿಸಿ ಬುದ್ಧಿಯ ಹೇಳುವ ಹಿರಿಯರಾದ ಡೋಹರ ಕಕ್ಕಯ್ಯಗಳ ಪಾದರಕ್ಷೆಯ ಕಿರುಕುಣಿಕೆಯಲ್ಲಿ ಎ[ನ್ನನ್ನಿ]ಡು ಕೂಡಲಸಂಗಮದೇವಾ.
--------------
ಬಸವಣ್ಣ
ಹರನ ಡಿಂಗರಿಗ ದಧೀಚಿಯ ಶಾಪದಿಂದ ಕರ ಬೇವಂತೆ ಬೆಂದರಾಗಳೆ ಹುರುಡಿಸುವರು. ಇದುಕಾರಣ, ದಿಟದಿಟ ಗರುಡಧ್ವಜದೇವನೆಂದೆಂಬಿರಿ. ಗರುಡವಾಹನನಲ್ಲದೆ ಬೇರೆರಡನೆಯ ದೇವರಿಲ್ಲೆಂದಡೆ, ಹರಿದು ಕಳೆದರು ವ್ಯಾಸನ ತೋಳೆರಡ. ನಂದಿ ಮಹಾಕಾಳರು ಬಂದು, ಮನಸಿನ ಹೊಲಸುಗಳು ನಿಃಕರಡರರಿವರೆ ಶಿವನ ನಿಲುವನು ? ಹರನ ಹೋಲುವ ದೈವರೊಳರೆ, ನಮ್ಮ ಪಂಚವದನ ಸೊಡ್ಡಳಂಗೆ ?
--------------
ಸೊಡ್ಡಳ ಬಾಚರಸ
-->