ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಗಸಗಿತ್ತಿ, ನಾಯಿದಗಿತ್ತಿ, ಬಸ್ತಿಯ ಜೈನಗಿತ್ತಿ, ಬೆಸ್ತ ಬೇಡತಿ ಹೊಸಮಾದಗಿತ್ತಿ, ಹೊಲತಿ ಡೊಂಬತಿ ಹಸಲಗಿತ್ತಿ ಹದಿನೆಂಟು ಜಾತಿಯ ಎಂಜಲವ ಭುಂಜಿಸುವ ತೊಂಬಲಗಳ್ಳರಿಗೆ ಗುರುಲಿಂಗಜಂಗಮದ ಪಾದೋದಕ ಪ್ರಸಾದವೆಲ್ಲಿಯದೊ? ಇಲ್ಲ. ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ವಿಭೂತಿಯನಿಟ್ಟು, ರುದ್ರಾಕ್ಷಿಯಂ ಧರಿಸಿ, ಪಂಚಾಕ್ಷರಿಯಂ ಜಪಿಸಿ, ಕೃತಾರ್ಥರಾದೆವೆಂಬ ಪಂಚಮಹಾಪಾತಕರು ನೀವು ಕೇಳಿರೊ. ಅದೆಂತಂದಡೆ, ವಿಭೂತಿಯನಿಟ್ಟು ವಿಶ್ವಾಸವಿಲ್ಲವಾಗಿ, ರುದ್ರಾಕ್ಷಿಯ ಧರಿಸಿ ರುದ್ರಗಣಂಗಳನರಿಯರಾಗಿ, ಪಂಚಾಕ್ಷರಿಯ ಜಪಿಸಿ ಪಂಚಮಹಾಪಾತಕವ ಬಿಡರಾಗಿ, ಅವಾವೆಂದಡೆ: ಹುಸಿ ಕೊಲೆ ಕಳವು ಪಾರದ್ವಾರ ತಾಮಸ ಭಕ್ತಸಂಗ, ಇಂತಿವ ಬಿಡದನ್ನಕ್ಕರ ಶಿವಭಕ್ತನೆನಿಸಿಕೊಳಬಾರದು ನೋಡಾ, ಅದೆಂತೆಂದಡೆ: ಸರ್ವಾಚಾರ ಪರಿಭ್ರಷ್ಟಃ ಶಿವಾಚಾರಸ್ಯ ಮೇಲನಮ್ | ಶಿವಾಚಾರ ಪರಿಭ್ರಷ್ಟೋ ನರಕೇ ಕಾಲಮಕ್ಷಯಮ್ || ಎಂದುದಾಗಿ. ಕಸಗೊಂಡ ಭೂಮಿಯಲ್ಲಿ ಸಸಿ ಪಲ್ಲವಿಸುವುದೆ ? ಹುಸಿಯಿದ್ದಲ್ಲಿ ಶಿವಭಕ್ತಿ ನೆಲೆಗೊಂಬುದೆ ? ಬಸವಗತಿಯೆನುತ ಹಿರಿದಾಗಿ ಭಸಿತವ ಪೂಸಿಕೊಂಡಿರ್ದ ಕುನ್ನಿಗಳೆಲ್ಲರೂ ಸದ್ಭಕ್ತರಾಗಬಲ್ಲರೆ ? ಅಶನ ಭವಿಪಾಕ ತಿಂಬುದೆಲ್ಲವೂ ಅನ್ಯದ್ಯೆವದೆಂಜಲು. ಮತ್ತೆ ಮರಳಿ ವ್ಯಸನಕ್ಕೆ ದಾಸಿ ವೇಸಿ ಹೊಲತಿ ಮಾದಗಿತ್ತಿ ಡೊಂಬತಿ ಮೊದಲಾದವರಿಗೆ ಹೇಸದೆ ಆಶೆಯ ಮಾಡುವವರ ಭಕ್ತಿಯ ತೆರನೆಂತೆಂದಡೆ: ಸೂಕರನ ದೇಹವ ತೊಳೆದಡೆ, ಅದು ಕೂಡ ಅಶುದ್ಧದೊಳಗೆ ಹೊರಳಿದ ತೆರನಾಯಿತ್ತೆಂದ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
-->