ಅಥವಾ

ಒಟ್ಟು 8 ಕಡೆಗಳಲ್ಲಿ , 4 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುದಸ್ಥಾನದಲ್ಲಿ ಆಧಾರಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣದ ತೇಜ, ಬಾಲರವಿಕೋಟಿ ಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣಮಯಲಿಂಗ - ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮಮುಖ- ಸದ್ಯೋಜಾತ ವಕ್ತ್ರ, ಆಧಾರಚಕ್ರ. ಲಿಂಗಸ್ಥಾನದಲ್ಲಿ ಸ್ವಾದಿಷ್ಠಾನಚಕ್ರ, ಅಲ್ಲಿಗೆ ಅಪ್ಪುವೆಂಬ ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ನೀಲದ ತೇಜ, ಬಾಲದ್ವಿಕೋಟಿ ಸೂರ್ಯಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಗೋಕ್ಷೀರದ ಹಾಗೆ ಧವಳ ವರ್ಣದ ಲಿಂಗ - ಅದು ಗುರುಲಿಂಗ; ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರಮುಖ-ವಾಮದೇವವಕ್ತ್ರ, ಸ್ವಾದಿಷ್ಠಾನಚಕ್ರ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯತೇಜ, ಬಾಲತ್ರಿಕೋಟಿಸೂರ್ಯಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯವರ್ಣದ ಲಿಂಗ-ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ. ಅದು ದೇವರಿಗೂ ತಮಗೂ ದಕ್ಷಿಣಮುಖ - ಅಘೋರವಕ್ತ್ರ, ಮಣಿಪೂರಕಚಕ್ರ. ಹೃದಯ ಸ್ಥಾನದಲ್ಲಿ ಅನಾಹತಚಕ್ರ, ಅಲ್ಲಿಗೆ ವಾಯುವೆಂಬ ಮಹಾಭೂತ, ತತ್ಪುರುಷವಕ್ತ್ರ, ಈಶ್ವರ ಪೂಜಾರಿ ಕಪೋತವರ್ಣದ ತೇಜ, ಬಾಲಚತುಷ್ಕೋಟಿ ಸೂರ್ಯಪ್ರಕಾಶ, ಹನ್ನೆರಡೆಸಳಿನ ತಾವರೆಯ ಮಧ್ಯದಲ್ಲಿ ಶುದ್ಧ ಪಚ್ಚವರ್ಣದಲಿಂಗ-ಅದು ಜಂಗಮಲಿಂಗ, ಅದಕ್ಕೆ ಬೀಜಾಕ್ಷರ ಓಂ ವಾಂ ವಾಂ ವಾಂ ಎಂಬ ನಾದಘೋಷ. ಎಸಳು ಹನ್ನೆರಡರಲ್ಲಿ ಕ ಖ ಗ ಘ ಙ ಚ ಛ ಜ ಝ ಞ ಟಂಠ ಎಂಬ ದ್ವಾದಶಾಕ್ಷರ ಅದು ದೇವರಿಗೂ ತಮಗೂ ಪೂರ್ವಮುಖ-ತತ್ಪುರುಷ ವಕ್ತ್ರ, ಅನಾಹತ ಚಕ್ರ. ಕÀಠಸ್ಥಾನದಲ್ಲಿ ವಿಶುದ್ಧಿಚಕ್ರ, ಅಲ್ಲಿಗೆ ಆಕಾಶವೆಂಬ ಮಹಾಭೂತ, ಈಶಾನವಕ್ತ್ರ, ಸದಾಶಿವ ಪೂಜಾರಿ, ವಿದ್ಯುಲ್ಲತೆಯ ತೇಜ, ಬಾಲಪಂಚಕೋಟಿ ಸೂರ್ಯಪ್ರಕಾಶ, ಹದಿನಾರೆಸಳಿನ ತಾವರೆಯ ಮಧ್ಯದಲ್ಲಿ ಅನಂತಕೋಟಿ ಮಿಂಚುಗಳ ವರ್ಣದ ಲಿಂಗ_ ಅದು ಪ್ರಸಾದಲಿಂಗ, [ಓಂ ಯಾಂ ಯಾಂ ಯಾಂ ಎಂಬ ನಾದಘೋಷ]. ಎಸಳು ಹದಿನಾರರಲ್ಲಿ ಅ ಆ ಇ ಈ ಉ ಊ ಋ Iೂ ಏ ಐ ಓ ಔ ಅಂ ಅಃ ಎಂಬ ಷೋಡಶಾಕ್ಷರ. ಅದು ದೇವರಿಗೂ ತಮಗೂ ಊಧ್ರ್ವಮುಖ_ ಈಶಾನವಕ್ತ್ರ, ವಿಶುದ್ಧಿಚಕ್ರ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಅಲ್ಲಿಗೆ ಮನವೆಂಬ ಮಹಾಭೂತ, ಶ್ರೀಗುರುವೆ ವಕ್ತ್ರ ಮಾಹೇಶ್ವರ ಪೂಜಾರಿ, ಜ್ಯೋತಿರ್ವರ್ಣದ ತೇಜ. ಬಾಲಷಟ್ಕೋಟಿ ಸೂರ್ಯಪ್ರಕಾಶ ಎರಡೆಸಳಿನ ತಾವರೆಯ ಮಧ್ಯದಲ್ಲಿ ಶ್ರೀಗುರುವಿನ ಶ್ರೀಪಾದದ ವರ್ಣದ ಲಿಂಗ ಎಡಗಡೆಯ ಪಾದ ಕೆಂಪು ವರ್ಣ, ಬಲಗಡೆಯ ಪಾದ ಶ್ವೇತವರ್ಣ-ಅದು ಮಹಾಲಿಂಗ. ಅದಕ್ಕೆ ಬೀಜಾಕ್ಷರ `ಓಂಕಾರನಾದ ಘೋಷ. ಎಸಳೆರಡರಲ್ಲಿ ಅಕ್ಷರ ಹಂ ಸಂ ಎಂಬ [ಎರಡಕ್ಷರ] ಅದು ದೇವರಿಗೂ ತನಗೂ ಗಂಭೀರ ಮುಖ-ಶ್ರೀಗುರುವಕ್ತ್ರ, ಆಜ್ಞಾಚಕ್ರ. ಅಲ್ಲಿಂದತ್ತ ಬ್ರಹ್ಮರಂಧ್ರದಲ್ಲಿ ಬ್ರಹ್ಮಚಕ್ರ ಅಲ್ಲಿಗೆ ಚಂದ್ರನೆಂಬ ಮಹಾಭೂತ, ಲಿಂಗವಕ್ತ್ರ ಪರಮೇಶ್ವರ ಪೂಜಾರಿ, ಮಹಾಜ್ಯೋತಿರ್ವರ್ಣದ ತೇಜ, ಬಾಲ ಅನಂತಕೋಟಿಸೂರ್ಯಪ್ರಕಾಶ ಒಂದುನೂರ ಎಂಟು ಸಾವಿರೆಸಳಿನ ತಾವರೆಯ ಮಧ್ಯದಲ್ಲಿ ಮಹಾಜ್ಯೋತಿರ್ವರ್ಣದ ಲಿಂಗ. ಅದು ನಿರಾಮಯ ಲಿಂಗ, ಅದಕ್ಕೆ ಬೀಜಾಕ್ಷರ ಪ್ರಣವ ನಾದ ಘೋಷ, ಎಸಳೊಂದುನೂರ ಎಂಟು ಸಾವಿರದಲ್ಲಿ, ಒಂದನೂರ ಎಂಟು ಸಾವಿರ ಅಕ್ಷರ_ ಪ್ರೇತಾಸನ ವಿಶ್ವತೋಮುಖೋ ಬ್ರಹ್ಮಚಕ್ರ. ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತೋ ಬಾಹುರುತ ವಿಶ್ವತಃ ಪಾತ್ ಸಂ ಬಾಹ್ಯಭ್ಯಾಂ ಧಮತಿ ಸಂಪತತ್ರೈ ದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಇಂತೀ ಗುರುವಿನ ಬೆಳಗು ವಿಶ್ವವನ್ನಪಹರಿಸಿ, ತಾನು ತಾನೆ ಸೋಹಂ ಪ್ರಕಾಶ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಈ ಪ್ರಕಾರದಲ್ಲಿ ಗುರುವಿನ ಹಸ್ತದಲ್ಲಿ ಹುಟ್ಟಿ ಲಿಂಗದೇಹಿಯೆನಿಸಿಕೊಂಡ ಜ್ಞಾನಿಪುರುಷನು ತನ್ನ ಜ್ಞಾನಸ್ವರೂಪವನರಿಯಬೇಕಯ್ಯ. ಆ ಜ್ಞಾನವೇ ಆರುತೆರನಾಗಿಪ್ಪುದು. ಅವಾವವೆಂದಡೆ: ಆಚಾರಲಿಂಗ, ಗುರುಲಿಂಗ, ಶಿವಲಿಂಗ, ಜಂಗಮಲಿಂಗ, ಪ್ರಸಾದಲಿಂಗ, ಮಹಾಲಿಂಗವೆಂದು ಇಂತೀ ಆರುತೆರನಾಗಿಪ್ಪುದು. ಈ ಷಡ್ವಿಧವ್ರತವನರಿದು ಆಚರಿಸುವ ಕ್ರಮವೆಂತುಟಯ್ಯಯೆಂದಡೆ: ಆಧಾರಚಕ್ರಸ್ಥಾನದಲ್ಲಿ ನಾಲ್ಕೆಸಳಕಮಲದ ವ ಶ ಷ ಸಯೆಂಬ ನಾಲ್ಕು ಬೀಜಾಕ್ಷರದ ಪೃಥ್ವಿತತ್ವದ ಕೆಂಪುವರ್ಣದ ನೆಲೆಯನರಿಯಬೇಕಯ್ಯ. ಸ್ವಾಧಿಷಾ*ನಚಕ್ರದಲ್ಲಿ ಆರೆಸಳಕಮಲದ ಬ ಭ ಮ ಯ ರ ಲಯೆಂಬ ಆರು ಬೀಜಾಕ್ಷರ ಯುಕ್ತವಾದ ಅಪ್ಪುತತ್ವದ ನೀಲವರ್ಣದ ನೆಲೆಯನರಿಯಬೇಕಯ್ಯ. ಮಣಿಪೂರಕಚಕ್ರಸ್ಥಾನದಲ್ಲಿ ಹತ್ತೆಸಳಕಮಲದ ಡ ಢ ಣ ತ ಥ ದ ಧ ನ ಪ ಫ ಯೆಂಬ ಹತ್ತು ಬೀಜಾಕ್ಷರ ಸ್ವಾಯತವಾಗಿಪ್ಪ ಅಗ್ನಿತತ್ವದ ಕುಂಕುಮವರ್ಣದ ನೆಲೆಯನರಿಯಬೇಕಯ್ಯ. ಅನಾಹತಚತ್ರಸ್ಥಾನದಲ್ಲಿ ಹನ್ನೆರಡೆಸಳಕಮಲದ ಕ ಖ ಗ ಘ ಙ ಚ ಛ ಜ ರುsು ಞ ಟ ಠಯೆಂಬ ಹನ್ನೆರಡು ಬೀಜಾಕ್ಷರಯುಕ್ತವಾಗಿರ್ಪ ವಾಯುತತ್ವದ ಶ್ವೇತವರ್ಣದ ನೆಲೆಯನರಿಯಬೇಕಯ್ಯ. ವಿಶುದ್ಧಿಚಕ್ರಸ್ಥಾನದಲ್ಲಿ ಹದಿನಾರೆಸಳಕಮಲದ ಅ ಆ ಇ ಈ ಉ ಊ ಋ ಋೂ ಎ ಏ ಐ ಒ ಓ ಔ ಅಂ ಅಃ ಎಂಬ ಹದಿನಾರು ಬೀಜಾಕ್ಷರ ಸ್ವಾಯತವಾಗಿಪ್ಪ ಆಕಾಶತತ್ವದ ಸ್ಫಟಿಕವರ್ಣದ ನೆಲೆಯನರಿಯಬೇಕಯ್ಯ. ಆಜ್ಞಾಚಕ್ರಸ್ಥಾನದಲ್ಲಿ ಎರಡೆಸಳಕಮಲದ ಹಂ ಸ ಯೆಂಬ ಎರಡು ಬೀಜಾಕ್ಷರಯುಕ್ತವಾಗಿಪ್ಪ ಆತ್ಮತತ್ವದ ಮಾಣಿಕ್ಯವರ್ಣದ ನೆಲೆಯನರಿಯಬೇಕಯ್ಯ. ಇವೆಲ್ಲವಕ್ಕೂ ಮೇಲಣತತ್ವವೆನಿಸುವ ಬ್ರಹ್ಮರಂದ್ರದಲ್ಲಿ ಸಾವಿರೆಸಳಕಮಲದ, ಸಾವಿರ ಬೀಜಾಕ್ಷರ ಸರ್ವತೋಮುಖವಾಗಿಪ್ಪ ಭೇದವನರಿಯಬೇಕಯ್ಯ. ಇನ್ನೀ ಚಕ್ರಂಗಳಿಗೆ ಲಿಂಗಸ್ವಾಯತಯುಕ್ತವಾಗಿಪ್ಪ ಭೇದವ ಹೇಳಿಹೆನು: ಆಧಾರಚಕ್ರದ ನಾಲ್ಕೆಸಳಕಮಲದ ಮಧ್ಯದಲ್ಲಿ ಆಚಾರಲಿಂಗವ ಸ್ವಾಯತವ ಮಾಡಿ ಸ್ವಾಧಿಷಾ*ನಚಕ್ರದ ಆರೆಸಳಕಮಲದ ಮಧ್ಯದಲ್ಲಿ ಗುರುಲಿಂಗವ ಮೂರ್ತಿಗೊಳಿಸಿ ಮಣಿಪೂರಕಚಕ್ರದ ಹತ್ತೆಸಳಕಮಲದ ಮಧ್ಯದಲ್ಲಿ ಶಿವಲಿಂಗವ ಸಂಬಂಧಿಸಿ ಅನಾಹತಚಕ್ರದ ಹನ್ನೆರಡೆಸಳಕಮಲದ ಮಧ್ಯದಲ್ಲಿ ಪ್ರಸಾದಲಿಂಗವ ಮೂರ್ತಿಗೊಳಿಸಿ ಆಜ್ಞಾಚಕ್ರದ ಎರಡೆಸಳಕಮಲದ ಮಧ್ಯದಲ್ಲಿ ಮಹಾಲಿಂಗವ ನೆಲೆಗೊಳಿಸಿ ಪ್ರಾಣದಲ್ಲಿ ಆಚಾರಲಿಂಗವ ಸಂಬಂಧಿಸಿ ಜಿಹ್ವೆಯಲ್ಲಿ ಗುರುಲಿಂಗವ ಸ್ವಾಯತವಮಾಡಿ ನೇತ್ರದಲ್ಲಿ ಶಿವಲಿಂಗವ ಮೂರ್ತಿಗೊಳಿಸಿ ತ್ವಕ್ಕಿನಲ್ಲಿ ಜಂಗಮಲಿಂಗವ ನೆಲೆಗೊಳಿಸಿ ಶ್ರೋತ್ರದಲ್ಲಿ ಪ್ರಸಾದಲಿಂಗವ ಸಂಬಂಧಿಸಿ ಭಾವದಲ್ಲಿ ಮಹಾಲಿಂಗವ ನೆಲೆಗೊಳಿಸಿ ಬ್ರಹ್ಮರಂಧ್ರದಲ್ಲಿರ್ಪ ಪರಿಪೂರ್ಣಲಿಂಗವು ಸರ್ವಾಂಗದಲ್ಲಿಯು ಸ್ವಾಯತವಾಗಲು ಅಂಗಸಂಗಗಳೆಲ್ಲವು ಲಿಂಗಸಂಗಗಳಾಗಿ ಲಿಂಗ ದೃಕ್ಕೇ ನಿರಂತರ ಪ್ರಕಾಶಿಸುತಿಪ್ಪುದಯ್ಯ. ಲಿಂಗಪ್ರಭೆಯೊಳಗೆ ಶಿವಶಿವಾಯೆನುತಿರ್ದೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಬಳಿಕ್ಕಮಾ ಮಹಾಲಿಂಗದ ಕಂಠಸಂಜ್ಞಿತವಾದ ಮಣಿಪೂರಕಚಕ್ರ ರುದ್ರರೂಪಮೆಂತೆನೆ [ಡ,,,,,(?)], ಢ ಅರ್ಧನಾರೀಶಂ, ಣ ಉಮಾಕಾಂತಂ, ತ ಆಷಾಡಿ, ಥ ದಂಡಿ, ದ ಅತ್ರಿ ಧ ಮಾನಂ, ನ ಮೇಷ, ಪ ಲೋಹಿತಂ, ಫ ಶಿಖಿ, ಇಂತೀ ದಶರುದ್ರರೀ ಮಹಾಲಿಂಗದ ಮಣಿಪೂರಕಚಕ್ರ ದಶಕೋಷ*ದಳ ನ್ಯಸ್ತ ದಶಾಕ್ಷರವಾಚ್ಯರೆಂದು ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮತ್ತೆಯುಮೀ ಶಿವಬೀಜಂ ಸ್ಥೂಲ ಸೂಕ್ಷ ್ಮಪರಂಗಳೆಂದು ಮೂದೆರನಾಗಿರ್ಪುದಿದಕ್ಕೆ ವಿವರಂ- ಸ್ಥೂಲಮೆನೆಯಕ್ಕರಂ. ಸೂಕ್ಷ ್ಮಮೆನೆಯಾಯಕ್ಷರದ ದನಿ. ಪರಮೆನೆ ಆಕಾರಾದಿ ಕ್ಷಕಾರಾಂತವಾದೈವತ್ತಕ್ಕರಂಗಳೊಳಗೆ ಪತ್ತು ಪತ್ತುಗಳು ವಿಭಾಗಿಸಿ, ಭೂಮ್ಯಾದಿ ಪಂಚಭೂತಂಗಳೊಡನೆ ಕಲಸುವುದೆಂತೆನೆ ತರದಿಂ ಅ ಆ ಇ ಈ ಉ ಊ ಋ Iೂ ಒ ಓ ಈ ಹತ್ತು ಪೃಥ್ವಿ. ಏ ಐ ಓ ಔ ಅಂ ಅಃ ಕ ಖ ಗ ಘ ಈ ಹತ್ತು ಅಪ್ಪು. ಙ ಚ ಛ ಜ ರುsು ಞ ಟ ಠ ಡ ಢ ಈ ಹತ್ತು ತೇಜಸ್ಸು. ಣ ತ ಥ ದ ಧ ನ ಪ ಫ ಬ ಭ ಈ ಹತ್ತು ವಾಯು. ಮ ಯ ರ ಲ ವ ಶ ಷ ಸ ಹ ಳ ಯೀ ಹತ್ತು ಆಕಾಶಂ. ಇಂತೈವತ್ತಕ್ಕರಂಗಳೈದು ಪೃತ್ವ ್ಯಪ್ತೇಜೋವಾಯ್ವಾಕಾಶಂಗಳಲ್ಲಿ ನ್ಯಸ್ತಂಗಳಾದವಿನ್ನುಳಿದೈದನೆಯ ಭೂತಸಂಜ್ಞಿತದಿಂ ಪಂಚಮವೆನಿಸಿದ ಪರಿಪೂರ್ಣವಾದ ಸಾಂತವೆ ಪರಮಿಂತು ಸ್ಥೂಲ ಸೂಕ್ಷ ್ಮ ಪರ ಸಂಜ್ಞೆಯ ನಿರೂಪಿಸಿದೆಯಯ್ಯಾ, ಪರಮ ಶಿವಲಿಂಗ ಪಾರ್ವತೀ ಸಮುತ್ಸಂಗ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇನ್ನು ಸೃಷ್ಟಿವರ್ಗನಿರೂಪಣಾನಂತರದಲ್ಲಿ ಸಂಹಾರವರ್ಗಮಂ ಪೇಳ್ವೆನೆಂತೆನೆ- ಕ್ಷಕಾರಾದ್ಯಕಾರಾಂತಮಾದಕ್ಷರಮಾಲಿಕೆಯೆ ಸಂಹಾರವರ್ಗಮೆನಿಕುಂ. ಅದರಲ್ಲಿ ಕ್ಷ ಳ ಹ ಸ ಷ ಶ ವ ಲ ರ ಯಂ ಗಳೆಂಬೀ ಪತ್ತೆ ಸಂಹಾರವರ್ಗದಲ್ಲಿ ಮೊದಲವರ್ಗಮಿದು ಪೃಥ್ವಿ. ಮ ಭ ಬ ಫ ಪ ನ ಧ ದ ಥ ತಂಗಳೆಂಬೀ ಪತ್ತೆ ಸಂಹಾರಿವರ್ಗದೊಳೆರಡನೆಯ ವರ್ಗಮಿದಪ್ಪು. ಣ ಢ ಡ ಠ ಟ ಞ ರುsು ಜ ಛ ಚಂಗಳೆಂಬೀ ಪತ್ತೆ ಸಂಹಾರವರ್ಗದಲ್ಲಿ ಮೂರನೆಯ ವರ್ಗಮಿದಗ್ನಿ. ಙ ಘ ಗ ಖ ಕಂಗಳೆಂಬೀವೈದುಂ ಸಂಹಾರವರ್ಗದಲ್ಲಿ ನಾಲ್ಕನೆಯ ವರ್ಗಮಿದು ವಾಯು, ಅಃ ಆಂ ಔ ಓ ಐ ಏ ಒ ಓ Iೂ ಋ ಊ ಉ ಈ ಇ ಆ ಅ ಎಂಬೀ ಪದಿನಾರೆ ಸಂಹಾರವರ್ಗದಲ್ಲಿಯೈದನೆಯ ವರ್ಗಮಿದಾಕಾಶ- ಮಿವೈದು ವರ್ಗಂಗಳನೊಳಕೊಂಡು ಸಂಹಾರವರ್ಗ ಮಿರ್ಪುದಿದಲ್ಲಿಯೆ ಸಮಸ್ತವಾದ ರುದ್ರಮಂತ್ರಗಳನುದ್ಧರಿಪುದಿದೀಗ ಸಂಹಾರವರ್ಗಂ. ಇಂತು ಸ್ಥಿತಿ ಸಂಹಾರ ತಾಮಸವರ್ಗ ವರ್ಗತ್ರಯಂಗಳಂ ನಿರವಿಸಿದೆಯಯ್ಯಾ, ನಿರಾಳ ನಿಶ್ಚಿಂತ ಪರಮ ಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮರಲ್ದುಮಾ, ಲಿಂಗದ ಕಂಠ, ಸಂಜ್ಞಿತವಾದ ವೃತ್ತಸ್ಥಾನಮೆ ಮಣಿಪೂರಕಚಕ್ರಮೆನಿಸುಗುಮಲ್ಲಿಯ ದಶಕೋಷ*ಂಗಳೆ ದಶದಳಂಗಳವರಲ್ಲಿ ಡ ಢ ಣ ತ ಥ ದ ಧ ನ ಪ ಫ ಎಂಬ ಪತ್ತಕ್ಕರಗಳ್ನ್ಯಸ್ತಮಾಗಿರ್ಕುವೆಂದು ನಿರವಿಸಿದೆಯಯ್ಯ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಗುದಸ್ಥಾನದಲ್ಲಿ ಆಧಾರಚಕ್ರ, ಪೃಥ್ವಿಯೆಂಬ ಮಹಾಭೂತ, ಚತುಃಕೋಣೆ ಚೌದಳ ಪದ್ಮ, ಅಲ್ಲಿ ಇಹ ಅಕ್ಷರ ನಾಲ್ಕು_ವ, ಶ, ಷ, ಸ, ಅದರ ವರ್ಣ ಸುವರ್ಣ, ಅದಕ್ಕೆ ಅಧಿದೇವತೆ ದಾಕ್ಷಾಯಣಿ. ಲಿಂಗಸ್ಥಾನದಲ್ಲಿ ಸ್ವಾಧಿಷಾ*ನಚಕ್ರ, ಅಪ್ಪುವೆಂಬ ಮಹಾಭೂತ, ಧನುರ್ಗತಿ, ಷಡುದಳ ಪದ್ಮ, ಅಲ್ಲಿ ಇಹ ಅಕ್ಷರವಾರು_ಬ, ಭ, ಮ, ಯ, ರ, ಲ, ಅದರ ವರ್ಣ ಪಚ್ಚೆಯ ವರ್ಣ, ಅದಕ್ಕೆ ಅಧಿದೇವತೆ ಬಹ್ಮನು. ನಾಭಿಸ್ಥಾನದಲ್ಲಿ ಮಣಿಪೂರಕವೆಂಬಚಕ್ರ, ತೇಜವೆಂಬ ಮಹಾಭೂತ, ತ್ರಿಕೋಣೆ, ದಶದಳ ಪದ್ಮ ಅಲ್ಲಿ ಇಹ ಅಕ್ಷರ ಹತ್ತು_ ಡ, ಢ, ಣ, ತ, ಥ, ದ, ಧ, ನ, ಪ, ಫ, ಅದರ ವರ್ಣ ಕೃಷ್ಣವರ್ಣ, ಅದಕ್ಕೆ ಅಧಿದೇವತೆ ವಿಷ್ಣು. ಹೃದಯಸ್ಥಾನದಲ್ಲಿ ಅನಾಹತಚಕ್ರ, ವಾಯುವೆಂಬ ಮಹಾಭೂತ, ಷಟ್ಕೋಣೆ, ದ್ವಾದಶಗಳ ಪದ್ಮ ಅಲ್ಲಿ ಇಹ ಅಕ್ಷರ ಹನ್ನೆರಡು_ ಕ, ಖ, ಗ, ಘ, ಙ, ಚ, ಛ, ಜ, ಝ, ಞ, ಟ,Àಠ, ಅದರ ವರ್ಣ ಕುಂಕುಮವರ್ಣ, ಅದಕ್ಕೆ ಅಧಿದೇವತೆ ಮಹೇಶ್ವರನು. ಕÀಂಠಸ್ಥಾನದಲ್ಲಿ ವಿಶುದ್ಧಿಚಕ್ರ, ಆಕಾಶವೆಂಬ ಮಹಾಭೂತ, ವರ್ತುಲಾಕಾರ, ಷೋಡಶದಳ ಪದ್ಮ ಅಲ್ಲಿ ಇಹ ಅಕ್ಷರ ಹದಿನಾರು_ ಅ, ಆ, ಇ, ಈ, ಉ, ಊ, ಋ, Iೂ, , , ಏ, ಐ, ಓ, ಔ, ಅಂ, ಅಃ, ಅದರ ವರ್ಣ ಶ್ವೇತವರ್ಣ, ಅದಕ್ಕೆ ಅಧಿದೇವತೆ ಸದಾಶಿವನು. ಭ್ರೂಮಧ್ಯಸ್ಥಾನದಲ್ಲಿ ಆಜ್ಞಾಚಕ್ರ, ಮನವೆಂಬ ಮಹಾಭೂತ, ತಮಂಧಾಕಾರ, ದ್ವಿದಳಪದ್ಮ ಅಲ್ಲಿ ಇಹ ಅಕ್ಷರವೆರಡು_ ಹಂ, ಕ್ಷಂ, ಅದರ ವರ್ಣ ಮಾಣಿಕ್ಯವರ್ಣ, ಅದಕ್ಕೆ ಅಧಿದೇವತೆ ಶ್ರೀಗುರು. ಉನ್ಮನೀಜ್ಯೋತಿ ಬ್ರಹ್ಮರಂಧ್ರದ ಮೇಲೆ. ಸಹಸ್ರದಳ ಪದ್ಮ, ಅಲ್ಲಿ ಅಮೃತವಿಹುದು ಅಲ್ಲಿ `ಓಂ' ಕಾರಸ್ವರೂಪವಾಗಿ ಗುಹೇಶ್ವರಲಿಂಗವು ಸದಾಸನ್ನಹಿತನು.
--------------
ಅಲ್ಲಮಪ್ರಭುದೇವರು
ಬಳಿಕ್ಕಂ ಡ ವಿರಜೆ, ಢ ಕಾಲೋದರಿ ಣ ಪೂತನೆ, ತ ಭದ್ರಕಾಳಿ ಥ ಯೋಗಿನಿ ದ ಶಂಖಿನಿ ಧ ಗರ್ಜಿನಿ ನ ಕಾಳಾವತಿ ಪ ಕುರ್ದನಿ ಫ ಕಪರ್ದಿನಿ ಇಂತೀ ಮಹಾಲಿಂಗದ ಶಕ್ತಿಯ ಕಂಠಸಂಜ್ಞಿತ ಮಣಿಪೂರಕಚಕ್ರದ ದಶಕೋಷ*ದಳ ನ್ಯಸ್ತ ದಶರುದ್ರಶಕ್ತಿಯರಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
-->