ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಂಚವಂಚನಕ್ಕೆ ಕೈಯಾನದಭಾಷೆ. ಬಟ್ಟೆಯಲ್ಲಿ ಹೊನ್ನು ವಸ್ತ್ರ ಬಿದ್ದಿದ್ದರೆ ನಾನು ಕೈ ಮುಟ್ಟಿ ಎತ್ತಿದೆನಾದರೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ. ಅದೇನು ಕಾರಣವೆಂದರೆ, ನೀವಿಕ್ಕಿದ ಭಿಕ್ಷದಲ್ಲಿಪ್ಪೆನಾಗಿ. ಇಂತಲ್ಲದೆ ನಾನು ಅಳಿಮನವ ಮಾಡಿ ಪರದ್ರವ್ಯಕ್ಕೆ ಆಸೆ ಮಾಡಿದೆನಾದರೆ, ನೀನಾಗಲೆ ಎನ್ನ ನರಕದಲ್ಲಿ ಅದ್ದಿ ನೀನೆದ್ದು ಹೋಗಾ ಶಂಭುಜಕ್ಕೇಶ್ವರಾ.
--------------
ಸತ್ಯಕ್ಕ
ಹೆದರದಿರು ಮನವೆ, ಹಿಮ್ಮೆಟ್ಟದಿರು ಮನವೆ, ಹಿಡಿದ ಛಲವ ಬಿಡದಿರು ಮನವೆ. ಜರಿದರೆಂದು ಝಂಕಿಸಿದರೆಂದು ಶಸ್ತ್ರ ಸಮಾಧಿ ನೀರು ನೇಣು ವಿಷ ಔಷಧದಲ್ಲಿ ಘಟವ ಬಿಡದೆ ಗುರುವಾದಡು ಲಿಂಗವಾದಡು ಜಂಗಮವಾದಡು ನೊಸಲಲ್ಲಿ ಕಣ್ಣುಳ್ಳ ಪಶುಪತಿಯಾದಡು ತೆತ್ತಿಗರು ಕಂಡು ಒತ್ತಿ ನುಡಿದರೆಂದು ಘಟವ ಬಿಡುವ ಘಟಕರ್ಮಿಗಳು ಏಳೇಳು ಜನ್ಮದಲ್ಲಿ ಸೂಕರನ ಹೊಟ್ಟೆಯಲ್ಲಿ ಹುಟ್ಟಿ, ನೂರೊಂದು ಕುಲ ಹದಿನೆಂಟು ಜಾತಿಯ ಅಮೇಧ್ಯವ ತಿಂದು ಹೊಲೆಯರ ಮನೆಯ ಹೊಸ್ತಿಲ ಕಾಯ್ದುಕೊಂಡಿಪ್ಪರಯ್ಯಾ : ಅಮುಗೇಶ್ವರಲಿಂಗವೆ, ನಿಮ್ಮಾಣೆ ನಿಮ್ಮ ಪ್ರಮಥರಾಣೆ.
--------------
ಅಮುಗೆ ರಾಯಮ್ಮ
-->