ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ ಮುಕ್ತಿ ವಿವೇಕವೆಂಬ ಅಕ್ಕಿಯನು ಗುಪಿತವೆಂಬ ಒರಳೊಳಗಿಕ್ಕಿ ಅಭಿನ್ನಮಥನವೆಂಬ ಒನಕೆಯಲ್ಲಿ ಥಳಿಸಿ ಕಲ್ಮಷವೆಂಬ võ್ಞಡ ಹಾರಿಸಿ, ಸಮತೆಯೆಂಬ ಸಲಿಲದಲ್ಲಿ ಜಾಳಿಸಿ, ಅಳುಪು ಎಂಬ ಹರಳ ಕಳೆದು ದಯಾಮೃತವೆಂಬ ಹಾಲಿನಲ್ಲಿ ಬೋನವ ಮಾಡಿ ಸಮರಸ ರುಚಿಕರದಿಂದ ಶಾಕಪಾಕಂಗಳಂ ಮಾಡಿ ನೆನಹಿನ ಲವಲವಕಿಯೆ ಅಭಿಗಾರವಾಗಿ ನಿರ್ಮಲವೆಂಬ ಶಿವದಾನವ ಗಡಣಿಸಿ ಕಾಯ್ದಿದ್ದರಯ್ಯಾ. ಪಂಚೇಂದ್ರಿಯವೆಂಬ ಸೊಣಗ ಮುಟ್ಟದಂತೆ ಕಾಯ್ದಿದ್ದರಯ್ಯಾ. ಷಡುವರ್ಗವೆಂಬ ತೊತ್ತಿರು ಮುಟ್ಟದಂತೆ ಕಾಯ್ದಿದ್ದರಯ್ಯಾ. ಅಷ್ಟಮದವೆಂಬ ಮಕ್ಕಳು ಮುಟ್ಟದಂತೆ ಕಾಯ್ದಿದ್ದರಯ್ಯಾ. ಇನಿತು ಮುಖ್ಯವಾದ ಹೀನಂಗಳಾವೂ ಮುಟ್ಟದಂತೆ ಕಾಯ್ದಿದ್ದರಾಗಿ, ಈ ಬೋನ ಗುಹೇಶ್ವರಲಿಂಗಕ್ಕೆ ಅರ್ಪಿತವಾಯಿತ್ತು, ಕಾಣಾ ಚೆನ್ನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಕಾಲುತೊಳೆದು ಬಾಯಿತೊಳೆದು ಅಕ್ಕಿಯ ಥಳಿಸಿ ಪಾಕವ ಮಾಡಿ ಕೈಯೆತ್ತಿ ನೋಡುತ್ತಿರ್ದೆನು. ಕಸ ಮಣ್ಣು ಹರಳ ತೆಗೆದೊಗೆದು ರಸನೆಗಿಕ್ಕದ ಸಕ್ಕರೆ ಹಾಲುಗೂಡಿ ಸಸಿನೆ ಬಾಗಿ ಭಾವಿಸುತಿರ್ದೆ ಎಲೆ ಅಕ್ಕ. ನೀನೆನಗೆ ವಶಗತ ಮಾಡಿದರೆ ಶಶಿಧರನೊಲಿವ ನಮ್ಮ ಗುರುನಿರಂಜನ ಚನ್ನಬಸವಲಿಂಗ ಕಾಣೆಯಕ್ಕಾ.
--------------
ದೇಶಿಕೇಂದ್ರ ಸಂಗನಬಸವಯ್ಯ
-->